ಕನ್ನಡಪ್ರಭ ವಾರ್ತೆ ಹನೂರು
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ತಾಲೂಕಿನ ಬಹುತೇಕ ಜಲಾಶಯ ಕೆರೆ, ಕಟ್ಟೆಗಳಿಗೆ ನದಿಯಿಂದ ನೀರು ಬಿಡುವ ಸದುದ್ದೇಶದಿಂದ ಜನಪ್ರತಿನಿಧಿಗಳು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಬರಿದಾಗುತ್ತಿರುವ ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಫಲಪ್ರದಗೊಳಿಸಬೇಕು. ಜೊತೆಗೆ ಚೆಸ್ಕಾಂ ಇಲಾಖೆಯಲ್ಲಿ ರೈತರಿಗೆ ಸಕಾಲದಲ್ಲಿ ಯಾವುದೇ ಕೆಲಸ, ಕಾರ್ಯಗಳು ಆಗುತ್ತಿಲ್ಲ. ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸುಟ್ಟು ಹೋದರೆ ದುರಸ್ತಿಪಡಿಸಲು ಇಲ್ಲಿನ ಅಧಿಕಾರಿ, ಸಿಬ್ಬಂದಿ ವರ್ಗದವರು ರೈತರನ್ನು ಕಚೇರಿಗೆ ಅಲೆಯುವಂತೆ ಮಾಡುತ್ತಿದ್ದಾರೆ. ಜೊತೆಗೆ ವಿದ್ಯುತ್ ಸಹ ನಿಗದಿತ ಸಮಯದಲ್ಲಿ ನೀಡದೇ ಕಣ್ಣಾ ಮುಚ್ಚಾಲೆ ಆಡುತ್ತಿದ್ದಾರೆ ಹಾಗೂ ಪಟ್ಟಣದ ಹುಲ್ಲೇಪುರ ಗ್ರಾಮದಲ್ಲಿರುವ ಧ್ರುವ ಪೌಲ್ಟ್ರಿ ಫಾರಂ ಶುಚಿಗೊಳಿಸದೇ ಗಬ್ಬುನಾರುತ್ತಿದೆ ಎಂದು ಆರೋಪಿಸಿದರು.ಜೊತೆಗೆ ಇಲ್ಲಿನ ಸುತ್ತಮುತ್ತಲಿನ ರೈತರಿಗೆ ತೊಂದರೆಯಾಗಿದೆ ಮತ್ತು ಬೆಳೆಗಳ ಮೇಲೆ ಸಹ ನೊಣಗಳು ಕುಳಿತು ಬೆಳೆಯನ್ನು ಹಾಳು ಮಾಡುತ್ತಿವೆ. ಸಂಬಂಧಪಟ್ಟ ಕಂದಾಯ ಇಲಾಖೆ ಮತ್ತು ಪರಿಸರ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದಲ್ಲಿ ಸೆ. 26ರಂದು ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ತಾಲೂಕಿನ ಘಟಕ ವ್ಯಾಪ್ತಿಯ ಪ್ರತಿಯೊಬ್ಬ ರೈತನೂ ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ರಾಜು, ಉಮೇಶ, ಬಸವಣ್ಣ, ಮಹದೇವ ಇನ್ನಿತರ ರೈತ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.