ರಾಜ್ಯ ಸರ್ಕಾರದ ವಿರುದ್ಧ ರೈತಸಂಘದಿಂದ ಪ್ರತಿಭಟನೆ

KannadaprabhaNewsNetwork |  
Published : Dec 16, 2023, 02:00 AM IST
ಸಿಕೆಬಿ-5  ನಗರದ ಅಂಭೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ನಿರತ ರೈತರು ಬೆಳಗಾವಿಯ ಎಸ್ಪಿ ಭೀಮಾ ಶಂಕರ.ಎಸ್.ಗುಳೇದ್ ಬಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಷ ವ್ಯೆಕ್ತಪಡಿಸಿದರು. | Kannada Prabha

ಸಾರಾಂಶ

ರೈತ ವಿರೋಧಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯನ್ನು ಹಿಂಪಡೆಯಬೇಕು ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಅಮಾನುಷ ವರ್ತನೆ ತೋರಿರುವ ಬೆಳಗಾವಿಯ ಎಸ್ಪಿ ಭೀಮಾ ಶಂಕರ.ಎಸ್.ಗುಳೇದ್ ರನ್ನು ಅಮಾನತುಗೊಳಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಆಗ್ರಹಿಸಿದರು.

ಚಿಕ್ಕಬಳ್ಳಾಪುರದ ಅಂಬೇಡ್ಕರ್ ವೃತ್ತದಲ್ಲಿ ರೈತರ ಮೇಲೆ ದುರ್ವರ್ತನೆ ತೋರಿದ್ದ ಬೆಳಗಾವಿ ಎಸ್ ಪಿ ಭೀಮಾಶಂಕರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ರೈತ ವಿರೋಧಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯನ್ನು ಹಿಂಪಡೆಯಬೇಕು ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಅಮಾನುಷ ವರ್ತನೆ ತೋರಿರುವ ಬೆಳಗಾವಿಯ ಎಸ್ಪಿ ಭೀಮಾ ಶಂಕರ.ಎಸ್.ಗುಳೇದ್ ರನ್ನು ಅಮಾನತುಗೊಳಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಆಗ್ರಹಿಸಿದರು.

ಶುಕ್ರವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ರಾಜ್ಯ ಸರ್ಕಾರ ಮತ್ತು ಬೆಳಗಾವಿಯ ಎಸ್ಪಿ ಭೀಮಾ ಶಂಕರ ಗುಳೇದ್ ವಿರುದ್ದ ನಡೆದ ರಸ್ತೆ ತಡೆ ಮತ್ತು ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ‘ಉಳುವವನೇ ಭೂಮಿ ಒಡೆಯ’ ಎಂಬ ಮಹತ್ವಾಕಾಂಕ್ಷೆಯ ಉದ್ದೇಶಕ್ಕೆ ಕೊಡಲಿಪೆಟ್ಟು ನೀಡಿ, ‘ಉಳ್ಳವನೇ ಭೂ ಒಡೆಯ’ ಎಂಬಂತೆ ಮಾಡಿದೆ. ರೈತ ಪರವಾಗಿ ಸುಧಾರಣೆಗಳನ್ನು ತರಬೇಕಾದ ಸರ್ಕಾರ, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲವಾಗುವ ಕಾಯ್ದೆಗಳಿಗೆ ತಿದ್ದುಪಡಿಗಳನ್ನು ತಂದಿತ್ತು. ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳಿ ತಿದ್ದುಪಡಿ ಮಾಡಿ, ಜೊತೆಗೆ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯನ್ನು ಜಾರಿಗೆ ತಂದು ಹೈನುಗಾರಿಕೆಗೆ ದೊಡ್ಡ ಪೆಟ್ಟು ನೀಡಿದೆ. ಈ ಮೂರು ಕಾಯ್ದೆಗಳು ರೈತ ಸಮುದಾಯಕ್ಕೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಮಾರಕವಾಗಿದ್ದವು. ಇವುಗಳನ್ನು ವಾಪಸ್ಸು ಪಡೆಯುತ್ತೇವೆಂದು ಚುನಾವಣಾ ಪೂರ್ವ ಕಾಂಗ್ರೆಸ್‌ ಆಶ್ವಾಸನೆ ನೀಡಿತ್ತು. ಆ ಆಶ್ವಾಸನೆಯಿಂದಲೇ ರೈತರು ಕಾಂಗ್ರೆಸಿಗೆ ಬೆಂಬಲ ನೀಡಿದ್ದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದರೆ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಸರ್ಕಾರ ಆಶ್ವಾಸನೆ ಈಡೇರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳಿ ತಿದ್ದುಪಡಿ ಮಾಡಲು ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಮತ್ತು ಅಲ್ಲಿದ್ದ ಮಾಧ್ಯಮದವರ ವಿರುದ್ಧ ಬೆಳಗಾವಿಯ ಎಸ್ಪಿ ಭೀಮಾ ಶಂಕರ .ಎಸ್. ಗುಳೇದ್ ತೊಡೆತಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿರುತ್ತಾರೆ. ಇವರನ್ನು ಬೆಳಗಾವಿಯ ಉಸ್ತುವಾರಿ ಸಚಿವರು ರಕ್ಷಿಸುತ್ತಿದ್ದಾರೆ. ರೈತರು ಬೆಳೆದ ಅನ್ನ ತಿಂದು ರೈತರ ಮೇಲೆ ಅಮಾನುಷ ವರ್ತನೆ ತೋರಿರುವ ಬೆಳಗಾವಿಯ ಎಸ್ಪಿ ಭೀಮಾ ಶಂಕರ ಎಸ್. ಗುಳೇದ್ ರನ್ನು ಕೂಡಲೇ ಅಮಾನತುಗೊಳಿಸಬೇಕು ಮತ್ತು ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳಿ ತಿದ್ದುಪಡಿ ವಾಪಸ್ಸು ಪಡೆಯಬೇಕು. ಇಲ್ಲದಿದ್ದಲ್ಲಿ ಮುಂದೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನಾ ನಿರತ ರೈತರು ಬೆಳಗಾವಿಯ ಎಸ್ಪಿ ಭೀಮಾಶಂಕರ ಗುಳೇದ್ ಬಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚಿಕ್ಕಬಳ್ಳಾಪುರ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಎಚ್.ಪಿ.ರಮಾನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಜಿಲ್ಲಾ ಉಪಾಧ್ಯಕ್ಷ ಮುನಿನಂಜಪ್ಪ, ಚಿಕ್ಕಬಳ್ಳಾಪುರ ತಾಲೂಕು ಅಧ್ಯಕ್ಷ ರಾಮಾಂಜಿನಪ್ಪ, ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ಮಂಜುನಾಥ್, ಚಿಂತಾಮಣಿ ತಾಲೂಕು ಅಧ್ಯಕ್ಷ ರಮಣ ರೆಡ್ಡಿ, ಚಿಕ್ಕಬಳ್ಳಾಪುರ ತಾಲೂಕು ಕಾರ್ಯದರ್ಶಿ ಗೋಪಾಲ, ಉಪಾಧ್ಯಕ್ಷ ರಾಮಾಂಜಿನಪ್ಪ, ಶಿಡ್ಲಘಟ್ಟ ಕಾರ್ಯದರ್ಶಿ ಕೆಂಪಣ್ಣ, ರಮೇಶ್, ಬಸವರಾಜು, ಗಂಗಾಧರ್, ನಾಗರಾಜು ರಾಜಣ್ಣ,ಗಂಗರಾಜು, ಆಂಜನೇಯರೆಡ್ಡಿ,ರಘುನಾಥ್ ರೆಡ್ಡಿ,ಮತ್ತಿತರರು ಹಾಗೂ ರೈತರು ಇದ್ದರು.

---

ನಗರದ ಅಂಭೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ನಿರತ ರೈತರು ಬೆಳಗಾವಿಯ ಎಸ್ಪಿ ಭೀಮಾ ಶಂಕರ.ಎಸ್.ಗುಳೇದ್ ಬಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಷ ವ್ಯೆಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ