ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಗಾಂಧಿಚೌಕದಲ್ಲಿ ಜಮಾವಣೆಗೊಂಡ ಜೆಡಿಎಸ್‌ನ ನೂರಾರು ಮಂದಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಕೆ. ವಿವೇಕಾನಂದ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.ರಾಜ್ಯ ಸರ್ಕಾರವು ಜನರ ಜೀವನದ ಜತೆ ಚಲ್ಲಾಟವಾಡುತ್ತಿದೆ. ಬರದಿಂದ ತತ್ತಿರಿಸುವ ಜನರಿಗೆ ಈಗ ಇಂಧನ ಬೆಲೆ ಹೆಚ್ಚಿಸುವ ಮೂಲಕ ತನ್ನ ಗ್ಯಾರಂಟಿ ಯೋಜನೆಗೆ ವಿನಿಯೋಗಿಸುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ಮುಖಂಡ ಎಚ್.ಕೆ. ರಾಮು, ನಗರ ಜೆಡಿಎಸ್ಅಧ್ಯಕ್ಷ ಕೆ.ಟಿ. ಚಲುವೇಗೌಡ, ಮಾಜಿ ಮೇಯರ್ಆರ್. ಲಿಂಗಪ್ಪ, ಮಾಜಿ ಉಪ ಮೇಯರ್ಕೃಷ್ಣ, ನಗರ ಪಾಲಿಕೆ ಮಾಜಿ ಸದಸ್ಯರಾದ ಎಸ್.ಬಿ.ಎಂ. ಮಂಜು, ರಾಮು, ರಮೇಶ್, ಕೆ.ವಿ. ಶ್ರೀಧರ್, ಪ್ರೇಮಾ ಶಂಕರೇಗೌಡ ಮೊದಲಾದವರು ಇದ್ದರು.ತೈಲದರ ಏರಿಕೆ ಖಂಡಿಸಿ ಎಸ್.ಯು.ಸಿ.ಐ ಪ್ರತಿಭಟನೆ
ರಾಜ್ಯ ಸರ್ಕಾರವು ಇಂಧನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಎಸ್.ಯು.ಸಿಐನ ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದ ಪುರುಭವನ ಎದುರಿನ ಡಾ.ಬಿ.ಆರ್. ಅಂಬೇಡ್ಕರ್ಪ್ರತಿಮೆ ಎದುರು ಪ್ರತಿಭಟಿಸಿದರು.
ರಾಜ್ಯದಲ್ಲಿ ಆಳ್ವಿಕೆ ನಡೆಸಿದ ಬಿಜೆಪಿಯ ಭ್ರಷ್ಟ, ದುರಾಡಳಿತ ತಡೆಯುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಕೂಡ ಅದೇ ಹಾದಿಯಲ್ಲಿ ಸಾಗುತ್ತಿದೆ. ಅಲ್ಲದೆ ಬೆಲೆ ಏರಿಕೆಯ ಸಮರ್ಥನೆಗಾಗಿ ಗ್ಯಾರಂಟಿ ಯೋಜನೆ ಹೆಸರನ್ನು ಮುಂದೆ ತರಲಾಗುತ್ತಿದೆ. ಆದರೆ ವಾಸ್ತವವಾಗಿ ಈ ಸರ್ಕಾರದಲ್ಲಿಯೂ ಭ್ರಷ್ಟಾಚಾರ, ದುಂದುವೆಚ್ಚ ಮುಂದುವರೆದಿದೆ ಎಂದು ಅವರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಕಾರ್ಯದರ್ಶಿ ವಿ. ರವಿ, ಸದಸ್ಯರಾದ ಉಮಾದೇವಿ, ಚಂದ್ರಶೇಖರ ಮೇಟಿ, ವಿ. ಯಶೋಧರ, ಪಿ.ಎಸ್. ಸಂಧ್ಯಾ, ಸೀಮ, ಹರೀಶ್, ಸುನಿಲ್, ಬಸವರಾಜು ಮೊದಲಾದವರು ಇದ್ದರು.