ಕನ್ನಡಪ್ರಭ ವಾರ್ತೆ ಶಿರಾ
ಈ ಬಗ್ಗೆ ಮೆಳೇಕೋಟೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಶಿರಾ ತಾಲೂಕು ಗೌಡಗೆರೆ ಹೋಬಳಿ, ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಳೇಕೋಟೆ ಗೊಲ್ಲರಹಟ್ಟಿಯಲ್ಲಿ ಸುಮಾರು 50 ಕುಟುಂಬಗಳು 30 ವರ್ಷದಿಂದಲೂ ಗುಡಿಸಲು ಕಟ್ಟಿಕೊಂಡು ವಾಸ ಮಾಡುತ್ತಿದ್ದೇವೆ. ಈ ಜಮೀನು ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿದ್ದು, ನಮಗೆ ಪ್ರತ್ಯೇಕವಾಗಿ ನಿವೇಶನ ಹಂಚಿಕೆ ಮಾಡಿಕೊಡಬೇಕೆಂದು ಈ ಹಿಂದೆ ನಾನು 2021ರಲ್ಲಿ ತಾವರೆಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆದಾಗಿನಿಂದಲೂ ಮನವಿ ಮಾಡುತ್ತಿದ್ದೇವೆ.
ನಮ್ಮ ಬೇಡಿಕೆ ತಾಲೂಕು ಆಡಳಿತ ಮೆಳೆಕೋಟೆ ಗ್ರಾಮದ ಸ.ನಂ 92ರಲ್ಲಿ 2 ಎಕರೆ ಜಮೀನನ್ನು ಮೆಳೆಕೋಟೆ ಗೊಲ್ಲರಹಟ್ಟಿ ಗ್ರಾಮದ ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡಲು ಜಮೀನು ಮಂಜೂರಾಗಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳ ಹೆಸರಿಗೆ ಸದರಿ ಜಮೀನು ಇದ್ದು, ಈ ಜಮೀನನ್ನು ತಾವರೆಕೆರೆ ಪಂಚಾಯಿತಿಗೆ ಹಸ್ತಾಂತರಿಸಿಕೊಂಡು ಮೆಳೆಕೋಟೆ ಗೊಲ್ಲರಹಟ್ಟಿ ಗ್ರಾಮಸ್ಥರಿಗೆ ನಿವೇಶನ ಹಂಚಿಕೆ ಮಾಡಬೇಕು. ಆದರೆ ಇಲ್ಲಿನ ಪಿಡಿಒ ಇದಕ್ಕೆ ಸ್ಪಂದಿಸದೆ ನಿರ್ಲಕ್ಷ ತೋರಿಸುತ್ತಿದ್ದಾರೆ. ಹಲವಾರು ಬಾರಿ ನಾವು ಮನವಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಉಡಾಫೇ ಉತ್ತರ ನೀಡುತ್ತಾರೆ. ಶೀಘ್ರದಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ತಾವರೆಕೆರೆ ಗ್ರಾಮ ಪಂಚಾಯಿತಿ ಮುಂದೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.ಚಿದಾನಂದ್ ಎಂ.ಗೌಡ ಭೇಟಿ:
ಪ್ರತಿಭಟನೆ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಅವರು ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿ ಮೆಳೆಕೋಟೆ ಗೊಲ್ಲರಹಟ್ಟಿಯಲ್ಲಿ ಕಾಡುಗೊಲ್ಲ ಸಮುದಾಯದವರು ಸುಮಾರು ೩೦ಕ್ಕೂ ಹೆಚ್ಚು ವರ್ಷಗಳಿಂದ ವಾಸ ಮಾಡುತ್ತಿದ್ದಾರೆ. ಆದರೆ ಮೆಳೆಕೋಟೆ ಗೊಲ್ಲರಹಟ್ಟಿ ಗ್ರಾಮದ ಸಮಸ್ಯೆ ಅಧಿಕಾರಿಗಳ ಗಮನಕ್ಕಾಗಲಿ ಸರ್ಕಾರದ ಗಮನಕ್ಕೆ ಬಂದಿಲ್ಲ. ಬಿಜೆಪಿ ರ್ಕಾರದ ಅವಧಿಯಲ್ಲಿ ಮೆಳೇಕೋಟೆ ಗೊಲ್ಲರಹಟ್ಟಿ ಗ್ರಾಮಕ್ಕೆ 2 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಆದರೆ ಇದುವರೆಗೂ ನಿವೇಶನ ಹಂಚಿಕೆ ಮಾಡಲಾಗಿಲ್ಲ. ಈ ಕೂಡಲೇ ತಾಲೂಕು ಆಡಳಿತ ಕ್ರಮ ಕೈಗೊಂಡು ಶೀಘ್ರ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದರು.ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಈರಣ್ಣ ಎಂ.ವಿ., ಮಾರಪ್ಪ, ಡಿ. ವೀರಪ್ಪ, ಶಿವಣ್ಣ, ಮಧುಸೂದನ್ ಗೌಡಪ್ಪ, ಗ್ರಾ.ಪಂ. ಸದಸ್ಯ ಶಿವು ಸ್ನೇಹಪ್ರಿಯ, ಬಿಜೆಪಿ ಗ್ರಾಮಂತರ ಅಧ್ಯಕ್ಷ ಈರಣ್ಣ ಪಟೇಲ್, ಚಿಕ್ಕಣ್ಣ, ರಾಮಣ್ಣ, ನಾಗಭೂಷಣ ಸೇರಿದಂತೆ ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.
೨೮ಶಿರಾ೨: ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಮೆಳೇಕೋಟೆ ಗೊಲ್ಲರಟ್ಟಿ ಗ್ರಾಮದಲ್ಲಿ ನಿವೇಶನಕ್ಕಾಗಿ ಕಾಡುಗೊಲ್ಲ ಸಮುದಾಯದವರು ಪ್ರತಿಭಟನೆ ನಡೆಸಿದರು.