ಕನ್ನಡಪ್ರಭ ವಾರ್ತೆ ಅಥಣಿ
ಪಟ್ಟಣದಲ್ಲಿ ಸಮಾಜ ಮುಖಂಡರ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ 2ಎ ಮೀಸಲಾತಿ ನೀಡಬೇಕು ಎಂಬ ಬೇಡಿಕೆಗೆ ಆಗ್ರಹಿಸಿ ಕೂಡಲಸಂಗಮದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಮತ್ತು ಸಮಾಜದ ಮುಖಂಡರ ನೇತೃತ್ವದಲ್ಲಿ ನಡೆದಿರುವ ಹೋರಾಟವನ್ನು ರಾಜ್ಯ ಸರ್ಕಾರ ಹತ್ತಿಕುವ ಪ್ರಯತ್ನ ಮಾಡುತ್ತಿದೆ. ಮಂಗಳವಾರ ಬೆಳಗಾವಿಯಲ್ಲಿ ನಡೆದ ಹೋರಾಟದಲ್ಲಿ ಅನೇಕ ಸಮಾಜ ಬಂಧುಗಳ ಮೇಲೆ ಪೊಲೀಸರು ಲಾಟಿ ಪ್ರಹಾರ ನಡೆಸಿ, ಹಲ್ಲೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರು ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ನಮ್ಮ ಬೇಡಿಕೆ ಈಡಿರುವವರಿಗೆ ಕೂಡಲಸಂಗಮ ಪೀಠದ ಜಗದ್ಗುರುಗಳ ನೇತೃತ್ವದಲ್ಲಿ ಹೋರಾಟ ನಿರಂತರವಾಗಿರುತ್ತದೆ ಎಂದು ತಿಳಿಸಿದರು. ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಅವಿನಾಶ ನಾಯಕ ಮಾತನಾಡಿ, ಪಂಚಮಸಾಲಿ ಸಮುದಾಯದ ಹೋರಾಟವನ್ನು ಹತ್ತಿಕುವ ಮತ್ತು ಲಾಟಿ ಪ್ರಹಾರದ ಪ್ರಕರಣವನ್ನು ಖಂಡಿಸಿ ಪಂಚಮಸಾಲಿ ಸಮುದಾಯದ ವತಿಯಿಂದ ಅಥಣಿ ಪಟ್ಟಣದಲ್ಲಿ ಡಿ.12ರಂದು ಬೆಳಗ್ಗೆ 9 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಮಾಜ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.