ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪ್ರತಿಭಟನೆ

KannadaprabhaNewsNetwork |  
Published : Aug 06, 2024, 12:36 AM IST
5ಕೆಎಸಟಿ2: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ, ಶಾಸಕ ಹಾಗೂ ಬಿಇಒ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಕುಷ್ಟಗಿ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ, ಶಾಸಕ ಹಾಗೂ ಬಿಇಒ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನಂತರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಲ್ಲಪ್ಪ ಕುದರಿ ಮಾತನಾಡಿ, 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು, 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು. ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದವೀಧರ ಶಿಕ್ಷಕರೆಂದು ಪರಿಗಣಿಸಬೇಕು. 2016ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ ಮೂಲತ 1-7ಮತ್ತು 8ಕ್ಕೆ ನೇಮಕ ಹೊಂದಿದವರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1-5 ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು. ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲ 1ರಿಂದ 8ನೇ ತರಗತಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು. ಮುಖ್ಯಗುರುಗಳು ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು, ಅರ್ಹ ಪದವಿ ಶಿಕ್ಷಣ ತರಬೇತಿ ಹೊಂದಿದ 2016ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಟತೆಯ ರಕ್ಷಣೆಯೊಂದಿಗೆ ಬಡ್ತಿ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹೈದರಲಿ ಜಾಲಿಹಾಳ, ರಾಜ್ಯ ಸಂಘಟನಾ ಕಾರ್ಯದರ್ಶಿ ನಿಂಗಪ್ಪ ಗುನ್ನಾಳ, ಲಕ್ಷ್ಮಣ ಪೂಜಾರಿ, ಅಮರೇಗೌಡ ನಾಗೂರ, ಶಿವಪ್ಪ ವಾಗ್ಮೊರೆ, ಗುರಪ್ಪ ಕುರಿ ,ರುದ್ರೇಶ್ ಬೂದಿಹಾಳ, ಸಿದ್ದರಾಮಪ್ಪ ಅಮರಾವತಿ, ಎಸ್.ಎಸ್. ತೆಮ್ಮಿನಾಳ, ನಟರಾಜ ಸೋನಾರ, ಗುರುಪಾದಮ್ಮ ಭಂಡಾರಿ, ಮಲ್ಲಿಕಾರ್ಜುನ ಲಕ್ಕಲಕಟ್ಟಿ, ಮಹೇಶ ಪಡಿ, ಬೀರಪ್ಪ ಕುರಿ, ಹೊನ್ನಪ್ಪ ಡೊಳ್ಳಿನ, ಯಲ್ಲನಗೌಡ ಪಾಟೀಲ, ಸೋಮಲಿಂಗಪ್ಪ ಗುರಿಕಾರ, ಅಯ್ಯಪ್ಪ ಸುರುಳ, ಕಳಕಪ್ಪ ಸೊಬರದ, ವಿದ್ಯಾ ಕಂಪಾಪುರಮಠ, ದಂಡಪ್ಪ ಹೊಸಮನಿ ಸೇರಿದಂತೆ ಮುಂತಾದ ಶಿಕ್ಷಕರು, ರಾಜ್ಯ ಸರ್ಕಾರಿ ನೌಕರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಸಿಆರ್‌ಪಿ ಮತ್ತು ಬಿಆರ್‌ಪಿ ಗಳ ಸಂಘದ ಪದಾಧಿಕಾರಿಗಳು, ತಾಲೂಕಿನ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಭಾಗವಹಿಸಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ