ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಬಣಕಲ್ ಮುಸ್ಲಿಂ ಯುವಕರಿಗೆ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಹಿಂದು ಸಂಘಟನೆ ಕಾರ್ಯಕರ್ತರನ್ನು ಬಂಧಿಸಿಲ್ಲ ಹಾಗೂ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದೇ ವೇಳೆ ಮಾತನಾಡಿದ ದಲಿತ ಮುಖಂಡ ದಂಟರಮಕ್ಕಿ ಶ್ರೀನಿವಾಸ್, ಜಿಲ್ಲೆಗೆ ಗೃಹ ಸಚಿವ ಪರಮೇಶ್ವರ್ ಆಗಮಿಸಿದರೆ ಘೇರಾವ್ ಹಾಕುವ ಎಚ್ಚರಿಕೆ ನೀಡಿದರು.
ತಿಭಟನೆ ಉದ್ದೇಶಿಸಿ ಮಾತನಾಡಿದ ಬಿಎಸ್ಪಿ ಮುಖಂಡ ಕೆ.ಟಿ. ರಾಧಾಕೃಷ್ಣ, ನಾವು ಮೊದಲು ಸಂವಿಧಾನ ಜಾರಿಗೊಳಿಸಿ ಎಂದು ಪ್ರತಿಭಟನೆ ಮಾಡುತ್ತಿದ್ದೆವು ಇಂದು ಸಂವಿಧಾನ ಉಳಿಸಿ ಎಂದು ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.ಜ.1 ರಂದು ತರೀಕೆರೆ ಗೊಲ್ಲರಹಟ್ಟಿಯಲ್ಲಿ ಜಾತಿನಿಂದನೆ ಮಾಡಿ ಹಲ್ಲೆ ಮಾಡಿರುವುದು ಖಂಡನೀಯ ಹಾಗೂ ಪೊಲೀಸರು ಸುಮಾರು 15 ಜನ ಆರೋಪಿಗಳ ಮೇಲೆ ಮಾತ್ರ ಕೇಸು ದಾಖಲಿಸಿದ್ದು, ನಾಲ್ಕು ಆರೋಪಿಗಳನ್ನು ಬಂಧಿಸಿ ಉಳಿದ ಆರೋಪಿ ಗಳನ್ನು ಬಂಧಿಸದೆ ಇರುವುದು ಪರೋಕ್ಷವಾಗಿ ಆರೋಪಿಗಳಿಗೆ ರಕ್ಷಣೆ ನೀಡಿದಂತೆ ಕಾಣುತ್ತಿದ್ದು, ಆರೋಪಿಗಳನ್ನು ಈ ಕೂಡಲೆ ಬಂಧಿಸಬೇಕು ಒತ್ತಾಯಿಸಿದ ಅವರು, ಹಲ್ಲೆಗೊಳಗಾದ ವ್ಯಕ್ತಿಗೆ ರಕ್ಷಣೆ ನೀಡುವ ಜತೆಗೆ ಪರಿಹಾರ ಹಣ ನೀಡ ಬೇಕೆಂದು ಆಗ್ರಹಿಸಿದರು.
ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ನಡೆದಿರುವ ಹಲ್ಲೆ ಘಟನೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಧರಣಿ ನಡೆಸಿದರು.