ಸಚಿವ ಸ್ಥಾನಕ್ಕಾಗಿ ಹಿಟ್ನಾಳ ಬೆಂಬಲಿಗರಿಂದ ಟೈರ್‌, ಸ್ಕೂಟಿಗೆ ಬೆಂಕಿ

KannadaprabhaNewsNetwork |  
Published : Jun 09, 2026, 02:30 AM IST
ಶಾಸಕ ಹಿಟ್ನಾಳ್‌ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅವರ ಬೆಂಬಲಿಗರು ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಶಾಸಕರ ಬೆಂಬಲಿಗರು, ಅಭಿಮಾನಿಗಳು ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಕೊಪ್ಪಳ: ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಶಾಸಕರ ಬೆಂಬಲಿಗರು, ಅಭಿಮಾನಿಗಳು ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಟೈರ್‌- ಸ್ಕೂಟಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.

ನಗರದಲ್ಲಿನ ಗೌರಿಶಂಕರ ದೇವಸ್ಥಾನದಿಂದ ಅಶೋಕ ವೃತ್ತದ ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಿವಿಧ ಘೋಷಣಾ ಫಲಕಗಳನ್ನು ಹಿಡಿದು, ಘೋಷಣೆಗಳನ್ನು ಕೂಗಿದರು.

ಅಶೋಕ ವೃತ್ತದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಶಾಸಕರ ಬೆಂಬಲಿಗರು, ಶಾಸಕ ರಾಘವೇಂದ್ರ ಹಿಟ್ನಾಳ ಅವರು ಮೂರು ಬಾರಿಗೆ ಕೊಪ್ಪಳ ಕ್ಷೇತ್ರದಿಂದ ಸತತ ಗೆಲುವು ಕಂಡಿದ್ದಾರೆ. ಹ್ಯಾಟ್ರಿಕ್ ಹೀರೋ ಎಂದೆನಿಸಿದ್ದಾರೆ. ಅವರು ಸಚಿವ ಸ್ಥಾನಕ್ಕೆ ಅರ್ಹರು. ಈ ಭಾಗದಲ್ಲಿ ಅಹಿಂದ ನಾಯಕರಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಕ್ಷೇತ್ರಕ್ಕೆ ಅಪಾರ ಅನುದಾನ ತಂದಿದ್ದಾರೆ. ಹೀಗಾಗಿ ಡಿ.ಕೆ. ಶಿವಕುಮಾರ ಅವರ ಸಚಿವ ಸಂಪುಟದ ಮೊದಲ ಪಟ್ಟಿಯಲ್ಲೇ ಅವರನ್ನು ಮಂತ್ರಿ ಸ್ಥಾನ ಮಾಡುವ ಬಹು ನಿರೀಕ್ಷೆಯಿತ್ತು. ಆದರೆ ಆಗಿಲ್ಲ. 2ನೇ ಪಟ್ಟಿಯಲ್ಲಿ ಅವರಿಗೆ ಮಂತ್ರಿ ಸ್ಥಾನ ಕೊಡಲೇಬೇಕು ಎಂದು ಒತ್ತಾಯ ಮಾಡಿದರಲ್ಲದೇ, ಕೊಪ್ಪಳ ಜಿಲ್ಲಾ ಕೇಂದ್ರದ ಶಾಸಕರಿಗೆ ಇತಿಹಾಸದಲ್ಲಿ ಒಂದು ಬಾರಿ ಹೊರತುಪಡಿಸಿದರೆ ಈ ವರೆಗೂ ಮಂತ್ರಿಯಾಗುವ ಯೋಗ ಕೂಡಿ ಬಂದಿಲ್ಲ. ಆ ಯೋಗ ಶಾಸಕ ಹಿಟ್ನಾಳ ಅವರಿಗೆ ಕೂಡಿ ಬರಲಿ, ಅವರಿಗೆ ಕೂಡಲೇ ಮಂತ್ರಿ ಸ್ಥಾನ ಕೊಡಿ ಎಂದು ಒತ್ತಾಯಿಸಿದರು.

ಟೈರ್‌- ಸ್ಕೂಟಿಗೆ ಬೆಂಕಿ: ಪ್ರತಿಭಟನಾ ಧರಣಿಯ ವೇಳೆ ಹಿಟ್ನಾಳ ಬೆಂಬಲಿಗರು ಟೈರ್‌ ಹಾಗೂ ಹಳೆಯ ಸ್ಕೂಟಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆಯಲ್ಲಿ ಕೃಷ್ಣರಡ್ಡಿ ಗಲಬಿ, ಕಾಟನ್ ಪಾಷಾ, ಅಮ್ಜದ್ ಪಟೇಲ್, ಕೆ.ಎಂ. ಸೈಯದ್, ಗಾಳೆಪ್ಪ ಪೂಜಾರ, ಟಿ. ಬಾಲಚಂದ್ರನ್, ಕೃಷ್ಣ ಇಟ್ಟಂಗಿ, ಸುರೇಶ ದಾಸರಡ್ಡಿ, ಮಹೇಂದ್ರ ಛೋಪ್ರಾ, ಪ್ರಸನ್ನ ಗಡಾದ, ಗುರುರಾಜ ಹಲಗೇರಿ, ವಿರೂಪಾಕ್ಷಪ್ಪ ಮೋರನಾಳ, ಗೂಳಪ್ಪ ಹಲಗೇರಿ, ಮಲ್ಲು ಪೂಜಾರ್, ಗವಿಸಿದ್ದಪ್ಪ ಚಿನ್ನೂರು, ಅಜೀಮ್ ಅತ್ತಾರ, ಮಾನ್ವಿ ಪಾಷಾ ಪಾಲ್ಗೊಂಡಿದ್ದರು.

ಗಂಗಾವತಿಯಲ್ಲೂ ಪ್ರತಿಭಟನೆ:

ಶಾಸಕ ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಗಂಗಾವತಿ ನಗರದ ಕೃಷ್ಣದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಸಲ್ಲಿಸುವ ಮೂಲಕ ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ಪಕ್ಷದ ಪರವಾಗಿ ಹಲವು ವರ್ಷಗಳಿಂದ ಸಂಘಟನೆಗಾಗಿ ಶ್ರಮಿಸುತ್ತಿರುವ ಹಿಟ್ನಾಳ ಅವರಿಗೆ ಸಚಿವ ಸ್ಥಾನ ನೀಡುವುದು ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು. ಕೆ. ವೆಂಕಟೇಶ, ಪಟ್ಟಣಶೆಟ್ಟಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಿಸರ ರಕ್ಷಣೆ ಕರ್ತವ್ಯವಾಗಲಿ: ನ್ಯಾ. ಸುಜಾತಾ
ಹೆಣ್ಣುಮಕ್ಕಳು ಕರಾಟೆ ಕಲಿಯಲಿ: ದೇವಿದಾಸ ಮೊಗೇರ