ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿಕ್ಕಮರಳಿ ಗೇಟ್ ಬಳಿ ಮಂಡ್ಯ-ಪಾಂಡವಪುರ ಮುಖ್ಯರಸ್ತೆಯಲ್ಲಿ ಗುಂಡಿಬಿದ್ದು ಮಳೆಬಿದ್ದರೆ ರಸ್ತೆ ಗುಂಡಿ ತುಂಬೆಲ್ಲ ನೀರು ತುಂಬಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಮೀನು ಮರಿಗಳನ್ನು ಬಿಟ್ಟು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ಗುಂಡಿಬಿದ್ದಿರುವ ಸ್ಥಳದಲ್ಲಿ ಮರದ ನೆರಳು ಇರುವುದರಿಂದ ಗುಂಡಿ ವಾಹನ ಸವಾರರಿಗೆ ಕಾಣುವುದಿಲ್ಲ. ಇದರಿಂದ ವೇಗವಾಗಿ ಬರುವ ಸವಾರರು ತಕ್ಷಣ ಗುಂಡಿನೋಡಿ ಬ್ರೇಕ್ ಹಾಕಿದಾಗ ಹಿಂದೆ ಬರುವ ವಾಹನ ಸವಾರರು ಡಿಕ್ಕಿ ಮುಂದಿನ ವಾಹನಕ್ಕೆ ಡಿಕ್ಕಿ ಮಾಡಿ ಅಪಘಾತಗಳು ಸಂಭವಿಸುತ್ತಿವೆ ಎಂದು ಕಿಡಿಕಾರಿದರು.ಬೈಕ್ ಸವಾರರು ಗುಂಡಿ ಕಾಣದೆ ಕೆಳಗೆ ಬಿದ್ದು ಗಾಯಮಾಡಿಕೊಂಡಿರುವ ಸಾಕಷ್ಟು ಉದಾಹರಣೆಗಳಿವೆ. ಇದೇ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಮಂಡ್ಯದಿಂದ ಪಾಂಡವಪುರಕ್ಕೆ ಸಂಚರಿಸುತ್ತಾರೆ. ಗುಂಡಿ ರಸ್ತೆಯನ್ನು ಕಂಡು ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.
ಕೂಡಲೇ ರಸ್ತೆಯಲ್ಲಿ ಬಿದ್ದುರುವ ಗುಂಡಿಯನ್ನು ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು, ಇಲ್ಲವಾದರೆ ರಸ್ತೆತಡೆದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.