ಕುಡಿವ ನೀರಿಗಾಗಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

KannadaprabhaNewsNetwork |  
Published : Jul 17, 2024, 12:49 AM IST
ಚಿತ್ರ - ವಾಟರ್‌ ಪ್ರೊಟೆಸ್ಟ್‌ ಬಡದಾಳಅಫಜಲ್ಪುರ ತಾಲೂಕಿನ ಬಡದಾಳ ಗ್ರಾಮದ ಹೊಸ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಸೌಲಭ್ಯವಿಲ್ಲವೆಂದು ವಿದ್ಯಾರ್ಥಿಗಳು ಗ್ರಾ.ಪಂ ಕಚೇರಿಗೆ ಬಂದು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಎರಡ್ಮೂರು ದಿನಗಳಲ್ಲಿ ಶಾಲೆಗೆ ನೇರವಾಗಿ ಇನ್ನೊಂದು ಹೊಸ ಪೈಪಲೈನ್ ಮಾಡಿಸಿ ಶಾಲೆಯ ಮಕ್ಕಳಿಗೆ ನೀರಿನ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲಾಗುತ್ತದೆ

ಕನ್ನಡಪ್ರಭ ವಾರ್ತೆ ಚವಡಾಪುರ

ಅಫಜಲ್ಪುರ ತಾಲೂಕಿನ ಬಡದಾಳ ಗ್ರಾಮದ ಹೊಸ ಬಡಾವಣೆಯಲ್ಲಿನ ಕಿರಿಯ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಸಮಸ್ಯೆ ಆಗುತ್ತಿದೆ ಎಂದು ಶಾಲೆಯ ವಿದ್ಯಾರ್ಥಿಗಳು ಹಾಗೂ ಪಾಲಕರು ಗ್ರಾಮ ಪಂಚಾಯಿತಿಗೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ.

ಶಾಲೆಯ ಎದುರಿಗೆ ಇರುವ ನೀರಿನ ಟ್ಯಾಂಕ್‍ನಲ್ಲಿ ಅನೇಕ ದಿನಗಳಿಂದ ನೀರು ಸಂಗ್ರಹವಾಗುತ್ತಿಲ್ಲ. ಹೀಗಾಗಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುವುದು ಕಷ್ಟವಾಗುತ್ತದೆ. ಬಿಸಿಯೂಟ ಮಾಡಿದ ಬಳಿಕ ಮಕ್ಕಳಿಗೆ ನೀರು ಕುಡಿಯಲು ಮನೆಗಳಿಗೆ ಬರುವಂತಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ. ಘಟನೆ ಸಂಬಂಧ ಪಿಡಿಒ ಪ್ರಶಾಂತ ನಂದಿ ಮಾತನಾಡಿ ಕಿರಿಯ ಪ್ರಾಥಮಿಕ ಶಾಲೆಗೆ ನಾನೇ ಎರಡು ಬಾರಿ ಖುದ್ದಾಗಿ ಹೋಗಿ ಪರಿಶೀಲನೆ ಮಾಡಿದ್ದೇನೆ. ಶಾಲೆಯ ಎದುರಿನ ನೀರಿನ ಟ್ಯಾಂಕ್‍ನಲ್ಲಿ ನೀರು ಸಂಗ್ರಹವಾಗದೇ ಇರುವುದಕ್ಕೆ ಕಾರಣಗಳು ತಿಳಿದು ಅದನ್ನು ಸರಿಪಡಿಸಲಾಗಿದೆ. ಆದರೂ ಕೂಡ ಎರಡ್ಮೂರು ದಿನಗಳಲ್ಲಿ ಶಾಲೆಗೆ ನೇರವಾಗಿ ಇನ್ನೊಂದು ಹೊಸ ಪೈಪಲೈನ್ ಮಾಡಿಸಿ ಶಾಲೆಯ ಮಕ್ಕಳಿಗೆ ನೀರಿನ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲಾಗುತ್ತದೆ. ಯಾವ ಮಕ್ಕಳು ನೀರಿಲ್ಲ, ಸೌಲಭ್ಯವಿಲ್ಲ ಎಂದು ಶಿಕ್ಷಣದಿಂದ ವಂಚಿತರಾಗಬಾರದೆಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿವ್‌-ಇನ್‌ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್‌ನೇಮ್‌!
ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ