ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾಧಿಕಾರಿ ಕಚೇರಿ ಎದುರು ಕೆಲ ಹೊತ್ತು ಧರಣಿ ನಡೆಸಿದ ಸಮಿತಿಯ ಪದಾಧಿಕಾರಿಗಳು, ರೈತರ ಹಿತ ಕಾಪಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರೈತರ ಹಿತ ಕಾಯದೆ ಗುತ್ತಿಗೆದಾರನ ಹಿತ ಕಾಯುವುದಕ್ಕೋಸ್ಕರ ನೀರನ್ನು ಹರಿಸದೆ ಮೊಂಡಾಟ ಪ್ರದರ್ಶಿಸುತ್ತಿದೆ. ಇನ್ನಾದರೂ ನಾಲೆಗಳಿಗೆ ನೀರನ್ನು ಹರಿಸಿ ಬೆಳೆಗಳನ್ನು ರಕ್ಷಿಸಬೇಕೆಂದು ಆಗ್ರಹಿಸಿದರು.
ಕಳೆದ ಹದಿನೈದು ದಿನಗಳಿಂದ ಬೆಳೆಗಳಿಗೆ ಒಂದು ಕಟ್ಟು ನೀರು ಹರಿಸುವಂತೆ ಜಿಲ್ಲಾದ್ಯಂತ ರೈತರು ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ರಾಜ್ಯ ಸರ್ಕಾರ ಅದಕ್ಕೆ ಸೊಪ್ಪು ಹಾಕುತ್ತಿಲ್ಲ. ಕೆಆರ್‌ಎಸ್ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರಿಕೆಯಾಗುತ್ತಿದ್ದರೂ ನೀರು ಹರಿಸದಿರುವುದು ರೈತರನ್ನು ಬೀದಿಪಾಲು ಮಾಡಲು ಹೊರಟಂತಿದೆ. ಯಾವುದೇ ಕಾರಣಕ್ಕೂ ಬೆಂಗಳೂರಿಗೆ ಆರನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿಯಾಗಲು ಬಿಡುವುದಿಲ್ಲ. ರಾಜ್ಯ ಸರ್ಕಾರ ಆ ಯೋಜನೆಯನ್ನು ಕೂಡಲೇ ಕೈಬಿಡಬೇಕು. ಆರನೇ ಹಂತದ ಯೋಜನೆ ಕೃಷಿ ಮತ್ತು ರೈತರ ಪಾಲಿಗೆ ಮರಣಶಾಸನವಿದ್ದಂತೆ ಎಂದು ಕಿಡಿಕಾರಿದರು.ಸಮಿತಿಯ ಅಧ್ಯಕ್ಷ ಜಿ.ಬಿ.ಶಿವಕುಮಾರ್, ಸುನಂದಾ ಜಯರಾಂ, ಇಂಡುವಾಳು ಚಂದ್ರಶೇಖರ್, ಕೆ.ಬೋರಯ್ಯ, ಎಂ.ವಿ.ಕೃಷ್ಣ, ಕನ್ನಡಸೇನೆ ಮಂಜುನಾಥ್, ಬೋರಲಿಂಗೇಗೌಡ, ಮುದ್ದೇಗೌಡ ಇತರರಿದ್ದರು.
ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.