ಕೆಎಸ್ಒಯು ರಿಜಿಸ್ಟ್ರಾರ್‌ ಕಚೇರಿಗೆ ನೋಟಿನ ಹಾರ ಕಟ್ಟಿ ಪ್ರತಿಭಟನೆ

KannadaprabhaNewsNetwork |  
Published : Mar 19, 2025, 12:32 AM IST
 | Kannada Prabha

ಸಾರಾಂಶ

ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕಾಯಂ ಶಿಕ್ಷಕೇತರ ನೌಕರರ ಸಂಘದವರು ವಿವಿ ಕುಲಸಚಿವರ ಕಚೇರಿ ಬಾಗಿಲಿಗೆ ನೋಟಿನ ತೋರಣ ಕಟ್ಟಿ ಮಂಗಳವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಮೈಸೂರು

ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕಾಯಂ ಶಿಕ್ಷಕೇತರ ನೌಕರರ ಸಂಘದವರು ವಿವಿ ಕುಲಸಚಿವರ ಕಚೇರಿ ಬಾಗಿಲಿಗೆ ನೋಟಿನ ತೋರಣ ಕಟ್ಟಿ ಮಂಗಳವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಸಿಬ್ಬಂದಿ ವರ್ಗಾವಣೆ, ಪದನಾಮ ಬದಲಾವಣೆ, ಪದೋನ್ನತಿಗೆ ಲಂಚದ ಬೇಡಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ನೌಕರರು ಮತ್ತು ಕುಲಸಚಿವರ ಕಚೇರಿ ಸಿಬ್ಬಂದಿಯ ನಡುವೆ ಮಾತಿನ ಚಕಮಕಿಯೂ ನಡೆಯಿತು. ಮುಕ್ತ ವಿವಿ ಆಡಳಿತ ಮಂಡಳಿ ಕೈಗೊಂಡಿರುವ ಕೆಲ ಕ್ರಮ, ನಿರ್ಣಯಗ‍ಳು ವಿವಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಮಾರಕವಾಗಿದ್ದು, ಅವುಗಳನ್ನು ರದ್ದುಪಡಿಸಬೇಕು. ಮಂಜೂರಾದ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗಿಂತಲೂ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಿಸಿಕೊಂಡಿದ್ದು, ಇದನ್ನು ಕೂಡಲೇ ಸ್ಥಗಿತಗೊಳಿಸಬೇಕು. ಹಾಲಿ ಇರುವ ತಾಲೂಕು, ಗ್ರಾಮ ಮಟ್ಟದ ಪ್ರಾದೇಶಿಕ ಕೇಂದ್ರಗಳನ್ನು ಕೂಡಲೇ ಮುಚ್ಚಬೇಕು. ಕಳೆದ 5 ವರ್ಷಗಳ ಜಮಾ ಖರ್ಚಿನ ಅಂಕಿ ಅಂಶ ಸಹಿತ ಮಾಹಿತಿ ನೀಡಬೇಕು. ಪಿಂಚಣಿಗೆ ಇಟ್ಟಿರುವ ಠೇವಣಿ ಹಣದ ಮಾಹಿತಿ ಬಿಡುಗಡೆಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌