ರವಿಹಂಚ್ ವಿರುದ್ಧ ತಿಪಟೂರಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

KannadaprabhaNewsNetwork |  
Published : Nov 24, 2026, 12:30 AM IST
ರವಿಹಂಚ್ ವಿರುದ್ದ ತಿಪಟೂರಿನಲ್ಲಿ ವಿವಿಧ ಸಂಘಟನೆಗಳಿAದ ಪ್ರತಿಭಟನೆ. | Kannada Prabha

ಸಾರಾಂಶ

೧೨ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ಚೇತನ ಬಸವಣ್ಣನವರ ವ್ಯಕ್ತಿತ್ವದ ಕುರಿತು ಯಾವುದೇ ಆಧಾರವಿಲ್ಲದ ಅವಹೇಳನಕಾರಿ ವಿಚಾರಗಳನ್ನು ಸಾಹಿತ್ಯದ ಹೆಸರಿನಲ್ಲಿ ಪ್ರಕಟಿಸುವುದು ಖಂಡನೀಯವಾಗಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನ್ಯಾಕೇನಹಳ್ಳಿ ಸುರೇಶ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

೧೨ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ಚೇತನ ಬಸವಣ್ಣನವರ ವ್ಯಕ್ತಿತ್ವದ ಕುರಿತು ಯಾವುದೇ ಆಧಾರವಿಲ್ಲದ ಅವಹೇಳನಕಾರಿ ವಿಚಾರಗಳನ್ನು ಸಾಹಿತ್ಯದ ಹೆಸರಿನಲ್ಲಿ ಪ್ರಕಟಿಸುವುದು ಖಂಡನೀಯವಾಗಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನ್ಯಾಕೇನಹಳ್ಳಿ ಸುರೇಶ್ ತಿಳಿಸಿದರು.

ಜಗಜ್ಯೋತಿ ಬಸವೇಶ್ವರರ ಕುರಿತು ರವಿಹಂಚ್ ರಚಿಸಿರುವ ಬಸವ ಮಂಟಪ ಕೃತಿಯಲ್ಲಿ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ದಾಖಲಿಸಲಾಗಿದೆ ಎಂದು ಆರೋಪಿಸಿ, ವೀರಶೈವ ಲಿಂಗಾಯತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ಒಕ್ಕೂಟ ಹಾಗೂ ಬಸವ ಅನುಯಾಯಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸೋಮವಾರ ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಪ್ರತಿಭಟನೆಯಲ್ಲಿ ಮಾತನಾಡಿ ಬಸವೇಶ್ವರರು ಜಾತಿ, ಮತ, ವರ್ಗಗಳ ಭೇದಭಾವವನ್ನು ಮೀರಿ ಸಮಾನತೆ, ಕಾಯಕ, ದಾಸೋಹ, ಮಾನವೀಯತೆ ಹಾಗೂ ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಮಹಾನ್ ಸಮಾಜ ಸುಧಾರಕರು ಎಂದರು. ಬಸವೇಶ್ವರರ ಕುರಿತು ಅವಹೇಳನಕಾರಿ ಮಾತುಗಳನ್ನು ಬರೆದಿರುವುದು ಕೇವಲ ಒಬ್ಬ ವ್ಯಕ್ತಿ ಅಥವಾ ಒಂದು ಸಮುದಾಯಕ್ಕೆ ಮಾಡಿದ ಅವಮಾನವಲ್ಲ; ಇದು ಇಡೀ ಮಾನವ ಸಮಾಜಕ್ಕೆ, ಶರಣ ಪರಂಪರೆಗೆ ಹಾಗೂ ಬಸವ ತತ್ವದ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮುಖಂಡ ಬಜಗೂರು ಮಂಜುನಾಥ್ ಮಾತನಾಡಿ ಬಸವೇಶ್ವರರ ಜೀವನ, ತತ್ವಾದರ್ಶ ಹಾಗೂ ಸಾಮಾಜಿಕ ಕೊಡುಗೆಗಳನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಾಹಿತ್ಯ ಸ್ವಾತಂತ್ರ‍್ಯದ ಹೆಸರಿನಲ್ಲಿ ಯಾವುದೇ ಮಹಾನ್ ವ್ಯಕ್ತಿಗಳ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಅಥವಾ ಸಮಾಜದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಅಶಾಂತಿ ಉಂಟುಮಾಡುವ ರೀತಿಯ ಬರವಣಿಗೆಗಳನ್ನು ಸಮರ್ಥಿಸಲು ಸಾಧ್ಯವಿಲ್ಲ. ಸಂಬಂಧಪಟ್ಟ ಕೃತಿಯಲ್ಲಿನ ಆಕ್ಷೇಪಾರ್ಹ ಅಂಶಗಳನ್ನು ಪರಿಶೀಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯ ಸಂದರ್ಭದಲ್ಲಿ ರವಿ ಹಂಚ್ ಹಾಗೂ ವಿಶ್ವೇಶ್ವರಭಟ್ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಈ ವಿಚಾರದಲ್ಲಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಿಪಟೂರು ನಗರ ಪೊಲೀಸ್ ಠಾಣೆಯ ವೃತ್ತನಿರೀಕ್ಷಕ ಮನವಿ ಸ್ವೀಕರಿಸಿ ಸಂಬAಧಪಟ್ಟವರ ವಿರುದ್ಧ ದೂರು ದಾಖಲಿಸುವ ಬಗ್ಗೆ ಮೇಲಾಧಿಕಾರಿಗಳ ಜೊತೆ ಚರ್ಚಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.ವೀರಶೈವ ಲಿಂಗಾಯತ ಸಂಘಟನೆಯ ಅಧ್ಯಕ್ಷ ರೇಣುಕರಾಧ್ಯ, ನೊಳಂಬ ಸಮಾಜದ ಕಾರ್ಯಕಾರಿ ಮಂಡಳಿ ಸದಸ್ಯ ನಿಜಗುಣ, ಡಿಎಸ್‌ಎಸ್‌ನ ನಾಗತಿಹಳ್ಳಿ ಕೃಷ್ಣಮೂರ್ತಿ, ವೀರಶೈವ ಲಿಂಗಾಯತ ಯುವ ಘಟಕದ ಅಧ್ಯಕ್ಷ ಲೋಹಿತ್ ಬನ್ನಿಹಳ್ಳಿ, ಸಾರ್ಥವಳ್ಳಿ ಶಿವಕುಮಾರ್, ನಿರಂಜನಮೂರ್ತಿ ಮಾರನಗೆರೆ, ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾಧ್ಯಕ್ಷ ಬಾಳೆಕಾಯಿ ನಟರಾಜು, ಮಲ್ಲೇನಹಳ್ಳಿಯ ಮುರುಳಿಧರ್, ಗೋವಿಂದರಾಜು ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿದರು.

ಪ್ರತಿಭಟನೆಯಲ್ಲಿ ಹರಚನಹಳ್ಳಿಹೇಮೇಶ್, ಸ್ವಾಮಿ ಗೌಡನಕಟ್ಟೆ, ಆನಂದ್, ಈಚನೂರು ನರಸಿಂಹಮೂರ್ತಿ, ಕುಮಾರ್‌ಸ್ವಾಮಿ, ಉಮೇಶ್, ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಬಸವ ಅನುಯಾಯಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಪಿಎಂಸಿಯಲ್ಲಿ ರೈತರಿಂದ ಕಮಿಷನ್ ವಸೂಲಿ ಮಾಡುವಂತಿಲ್ಲ
ಕನ್ನಡಕ್ಕೆ ನುಡಿದಂತೆ ಬರೆಯುವ, ಬರೆದಂತೆ ನುಡಿವ ಅದ್ಭುತ ಶಕ್ತಿ