ಕನ್ನಡಪ್ರಭ ವಾರ್ತೆ ಅರಕಲಗೂಡು
ಮೊಬೈಲ್ ಆ್ಯಪ್ ಮೂಲಕ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳು ಗೋಳು ಕೇಳುವವರೇ ಇಲ್ಲವಾಗಿದ್ದಾರೆ. ವೇತನ ಏರಿಕೆ ಮಾಡದೆ ಗ್ರಾಮ ಸಹಾಯಕರ ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷಿಸಲಾಗಿದೆ. ಕೆಲಸಕ್ಕೆ ಅಗತ್ಯವಾದ ಸೌಕರ್ಯಗಳಿಲ್ಲದೆ ಸುಸಜ್ಜಿತವಾದ ಕಚೇರಿ ಕೂಡ ಇಲ್ಲವಾಗಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.ತಹಸೀಲ್ದಾರ್ ಸೌಮ್ಯ ಅವರಿಗೆ ಮನವಿ ಸಲ್ಲಿಸಿದರು. ಗ್ರಾಮ ಆಡಳಿತಾಧಿಕಾರಿಗಳ ತಾಲೂಕು ಸಂಘದ ಅಧ್ಯಕ್ಷ ಪುನೀತ್, ಉಪಾಧ್ಯಕ್ಷ ಹರೀಶ್, ಗೌರವಾಧ್ಯಕ್ಷ ಪುನೀತ್ ಗೌತಮ್, ಪ್ರಧಾನ ಕಾರ್ಯದರ್ಶಿ ಮೋಹನ್ ನಾಯಕ್ ಹಾಗೂ ತಾಲೂಕಿನ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.