ಕನ್ನಡಪ್ರಭ ವಾರ್ತೆ ಮಳವಳ್ಳಿ
ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದ ಅಧ್ಯಕ್ಷ ಶಿವಪ್ಪ ದಮ್ಮಾಳ್ ಮಾತನಾಡಿ, ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ಗ್ರಾಮ ಆಡಳಿತ ಅಧಿಕಾರಿಗಳ ಸಭೆಯಲ್ಲಿ ನಮ್ಮ ಕುಂದು ಕೊರತೆಗಳು, ಮೂಲ ಸೌಲಭ್ಯಗಳು ಹಾಗೂ ಗ್ರಾಮ ವ್ಯಾಪ್ತಿಗಳಲ್ಲಿ ಗ್ರಾಮ ಸಹಾಯಕರಿಲ್ಲದಿರುವುದು ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಮಾಡಿದ್ದವು.
ಆದರೆ ಮನವಿಗೆ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆ ರಾಜ್ಯ ಸಂಘದ ಅಧ್ಯಕ್ಷರ ಸೂಚನೆಯಂತೆ ತಾಲೂಕು ಹಂತದಲ್ಲಿ ಶಾಂತಿಯುತ ಮುಷ್ಕರ ನಡೆಸುತ್ತಿದ್ದು, ಸರ್ಕಾರದಿಂದ ಸ್ಪಂದನೆ ಸಿಗದಿದ್ದರೆ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮುಷ್ಕರ ನಡೆಸುತ್ತೇವೆ. ಅಲ್ಲಿಯೂ ನಮ್ಮ ಬೇಡಿಕೆಗಳು ಈಡೇರದಿದ್ದರೆ ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.ಪ್ರತಿಭಟನೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘ, ಕಂದಾಯ ನೌಕರರ ಸಂಘ ಹಾಗೂ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.