ಸ್ಮಶಾನ ಜಾಗ ಒದಗಿಸುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ

KannadaprabhaNewsNetwork | Updated : Oct 11 2023, 12:46 AM IST

ಸಾರಾಂಶ

ಸ್ಮಶಾನ ಜಾಗ ಒದಗಿಸುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ
ತರೀಕೆರೆ: ತಾಲೂಕಿನ ಗೋಪಾಲ ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನ ಜಾಗ ಒದಗಿಸಿಕೊಡುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಗೋಪಾಲ ಗ್ರಾಮದವರು, ಗ್ರಾಮಸ್ಥರು ಶವ ಸಂಸ್ಕಾರಕ್ಕಾಗಿ ಎರಡೂವರೆ ಕಿ.ಮೀ.ದೂರವಿರುವ ಬೇರೆ ಸ್ಥಳಕ್ಕೆ ಹೋಗಬೇಕಾಗಿದೆ, ಗ್ರಾಮದಲ್ಲೇ ಸರ್ಕಾರಿ ಜಾಗವಿದ್ದು ಆ ಜಾಗವನ್ನು ಸ್ಮಶಾನಕ್ಕೆ ಒದಗಿಸಿಕೊಡ ಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಮಂಗಳವಾರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ರಾಜೀವ್ ಅವರು ಗ್ರಾಮಸ್ಥರೊಡನೆ ಸಮಾಲೋಚನೆ ಮಾಡಿ ಗ್ರಾಮಸ್ಥರನ್ನು ಸಮಾಧಾನ ಪಡಿಸಿದರು. ಗ್ರಾಮದಲ್ಲೇ ಸರ್ಕಾರಿ ಜಾಗವನ್ನು ಪರಿಶೀಲಿಸಿ ಗೋಪಾಲ ಗ್ರಾಮದಲ್ಲೇ ಸ್ಮಶಾನಕ್ಕೆ ಜಾಗ ಒದಗಿಸಿಕೊಡುವ ವಿಚಾರ ಕುರಿತಂತೆ ಗ್ರಾಮಸ್ಥರು, ಗ್ರಾಮದ ಮುಖಂಡರು, ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಚರ್ಚಿಸಲು ಅ.17 ರಂದು ಸಮಾಲೋಚನೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ. 10ಕೆಟಿಆರ್-ಕೆ 12ಃ ತರೀಕೆರೆ ಸಮೀಪದ ಗೋಪಾಲ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಜಾಗ ಒದಗಿಸಿಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನೆಡೆಸಿದರು. --------------

Share this article