ಕನ್ನಡಪ್ರಭ ವಾರ್ತೆ ಬೆಳಗಾವಿ
ರೈತರ ಹಿತಕ್ಕೆ ವಿರುದ್ಧವಾದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗಳನ್ನು ಹಿಂಪಡೆಯಬೇಕು. ದೇಶದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಗಮನಿಸಿ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ನಿಧಿಯನ್ನು ತಕ್ಷಣ ಬಿಡುಗಡೆ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳು, ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಂದ ರೈತರು ಪಡೆದಿರುವ ಪ್ರಸ್ತುತ ಹಾಗೂ ಹಿಂದಿನ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಅಲ್ಲದೆ, ಹಳೆಯ ಸಾಲಗಳಿಗೆ ಮುಂದಿನ ಎರಡು ವರ್ಷಗಳ ಕಾಲ ಯಾವುದೇ ಬಡ್ಡಿ ವಿಧಿಸದಂತೆ ಸರ್ಕಾರ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಉಲ್ಲೇಖಿಸಿರುವ ಅವರು, ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಕ್ಕೆ ಕೇಂದ್ರ ಸರ್ಕಾರ ಹೊಣೆಯಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಿಂದ ಹಲವು ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ದುರಂತ. ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.