ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Jul 24, 2026, 12:45 AM IST
23ಜಿಯುಡಿ1 | Kannada Prabha

ಸಾರಾಂಶ

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ.

ಜಂತರ್ ಮಂತರ್‌ನಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹೋರಾಟ

ಕನ್ನಡಪ್ರಭ ವಾರ್ತೆ ಗುಡಿಬಂಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ವಿರೋಧಿಸಿ, ಗುಡಿಬಂಡೆಯಲ್ಲಿ ಡಿ.ವೈ.ಎಫ್.ಐ ಹಾಗೂ ಎಸ್.ಎಫ್.ಐ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಕೆಲಕಾಲ ರಸ್ತೆ ತಡೆ ನಡೆಸಿ, ಬಳಿಕ ಮಾನವ ಸರಪಳಿ ನಿರ್ಮಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಡಿ.ವೈ.ಎಫ್.ಐ ಮುಖಂಡ ರಾಜಶೇಖರ್, ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಈ ಪ್ರಕರಣದ ನೈತಿಕ ಹೊಣೆ ಹೊತ್ತು ಪ್ರಧಾನಿ, ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಶಿಕ್ಷಣ ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಬಳಿಕ ಮಾತನಾಡಿದ ಡಿ.ವೈ.ಎಫ್.ಐ ಮುಖಂಡ ರಮಣ, ನೀಟ್ ಪರೀಕ್ಷೆಗೆ ಸಂಬಂಧಿಸಿದ ಅಕ್ರಮಗಳು ಪದೇಪದೇ ಬೆಳಕಿಗೆ ಬರುತ್ತಿರುವುದು ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ವೈದ್ಯಕೀಯ ಶಿಕ್ಷಣ ಪಡೆಯುವ ಕನಸಿನಿಂದ ವಿದ್ಯಾರ್ಥಿಗಳು ವರ್ಷಗಳ ಕಾಲ ಶ್ರಮಿಸಿ ಪರೀಕ್ಷೆಗೆ ಸಿದ್ಧರಾಗುತ್ತಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಅಕ್ರಮಗಳಿಂದ ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯದೇ, ಭವಿಷ್ಯದ ಕನಸುಗಳು ಭಗ್ನಗೊಳ್ಳುತ್ತಿವೆ. ಇಂತಹ ಅಕ್ರಮಗಳಿಗೆ ಕಾರಣರಾದವರ ವಿರುದ್ಧ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳದೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ನ್ಯಾಯ ದೊರೆಯುವವರೆಗೆ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಪ್ರತಿಭಟನೆಯಲ್ಲಿ ಎಸ್.ಎಫ್.ಐ ಮತ್ತು ಡಿ.ವೈ.ಎಫ್.ಐ ಸಂಘಟನೆಗಳ ಪದಾಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು, ಕಾರ್ಯಕರ್ತರು ಸೇರಿದಂತೆ ಹಲವರು ಭಾಗವಹಿಸಿದ್ದರು.

23ಜಿಯುಡಿ1: ದೆಹಲಿಯ ಜಂತರ್ ಮಂತರ್ ನಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ವಿರೋಧಿಸಿ ಗುಡಿಬಂಡೆಯಲ್ಲಿ ಡಿ.ವೈ.ಎಫ್.ಐ ಹಾಗೂ ಎಸ್.ಎಫ್.ಐ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಿ
ಅಫಜಲಪುರದಲ್ಲಿ ಭೀಮಾ ನದಿಯ ನೀರಿನ ಕೊರತೆ: ಡೀಸಿಗೆ ಮನವಿ