ನ್ಯಾಯವಾದಿ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Jun 10, 2025, 10:59 AM IST
 ತೀರ್ಥಹಳ್ಳಿ ನ್ಯಾಯವಾದಿ ಮಧುಕರ್ .ಆರ್ ಮಯ್ಯ ಅವರನ್ನು ಅಪರಿಚಿತರು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಭದ್ರಾವತಿ ತಾಲೂಕು ವಕೀಲರ ಸಂಘದಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ತೀರ್ಥಹಳ್ಳಿ ನ್ಯಾಯವಾದಿ ಮಧುಕರ್ .ಆರ್ ಮಯ್ಯ ಅವರನ್ನು ಅಪರಿಚಿತರು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲೂಕು ವಕೀಲರ ಸಂಘದಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಭದ್ರಾವತಿ: ತೀರ್ಥಹಳ್ಳಿ ನ್ಯಾಯವಾದಿ ಮಧುಕರ್ .ಆರ್ ಮಯ್ಯ ಅವರನ್ನು ಅಪರಿಚಿತರು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲೂಕು ವಕೀಲರ ಸಂಘದಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಇದಕ್ಕೂ ಮೊದಲು ಸಂಘದ ಅಧ್ಯಕ್ಷ ಉಮೇಶ್‌ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನ್ಯಾಯವಾದಿಗಳಾದ ಕೆ.ಎನ್ ಶ್ರೀಹರ್ಷ, ವೆಂಕಟೇಶ್, ಕೇಶವಮೂರ್ತಿ, ಟಿ. ಚಂದ್ರೇಗೌಡ, ಜಯರಾಂ, ಪ್ರಶಾಂತ್ ಸೇರಿದಂತೆ ಇತರರು ಮಾತನಾಡಿದರು.

ಸಮಾಜಘಾತಕ ಶಕ್ತಿಗಳಿಂದ ಇತ್ತೀಚೆಗೆ ನ್ಯಾಯವಾದಿಗಳ ಮೇಲೆ ಹಲ್ಲೆ, ದಬ್ಬಾಳಿಕೆಗಳು ಹೆಚ್ಚಾಗುತ್ತಿವೆ. ಸರ್ಕಾರ ವಕೀಲರ ಹಿತರಕ್ಷಣಾ ಕಾಯಿದೆ ಸಮರ್ಪಕವಾಗಿ ಜಾರಿಗೆ ತರಬೇಕು. ನ್ಯಾಯವಾದಿಗಳಿಗೆ ಸೂಕ್ತ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಹಲವು ಬಾರಿ ಸರ್ಕಾರಕ್ಕೆ ಒತ್ತಾಯಿಸುತ್ತಾ ಬಂದಿದ್ದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ನ್ಯಾಯವಾದಿಗಳ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ ಎಂದು ವಕೀಲರ ಸಂಘ ಆರೋಪಿಸಿತು.

ಜೂ.೬ರಂದು ತೀರ್ಥಹಳ್ಳಿ ನ್ಯಾಯವಾದಿ ಮಧುಕರ್ .ಆರ್ ಮಯ್ಯರವರ ಮೇಲೆ ಅಪರಿಚಿತ ವ್ಯಕ್ತಿಗಳು ರಸ್ತೆಯಲ್ಲಿ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಪ್ಪಿತಸ್ಥರನ್ನು ಪೊಲೀಸರು ತಕ್ಷಣ ಪತ್ತೆಹಚ್ಚಿ ಬಂಧಿಸಬೇಕೆಂದು ಗೃಹ ಸಚಿವರಿಗೆ ಒತ್ತಾಯಿಸಿತು.

ಪ್ರತಿಭಟನಾ ಮೆರವಣಿಗೆ. ಮನವಿ:

ನ್ಯಾಯಾಲಯದ ಆವರಣದಿಂದ ತಾಲೂಕು ಕಚೇರಿವರೆಗೂ ಘೋಷಣೆಗಳನ್ನು ಕೂಗುತ್ತ ಮೆರವಣಿಗೆ ಸಾಗಿದ ನ್ಯಾಯವಾದಿಗಳು ಉಪ ತಹಸೀಲ್ದಾರ್ ಮಂಜಾನಾಯ್ಕರವರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ಸಂಘದ ಉಪಾಧ್ಯಕ್ಷ ಬಿ.ಎಸ್ ನಾಗರಾಜ್, ಕಾರ್ಯದರ್ಶಿ ರಾಜೇಶ್, ಖಜಾಂಚಿ ಆಶಾ, ಪಾಧಿಕಾರಿಗಳಾದ ಆದರ್ಶ, ಪವನ್, ಹರೀಶ್‌ಬರ್ಗೆ, ರೇಖಾ, ಉಮಾಪತಿ, ಉದಯಕುಮಾರ್, ಪ್ರಕಾಶ್, ಕಾಂತರಾಜ್, ಪುಟ್ಟಸ್ವಾಮಿ, ಭರತ್, ರಾಜು, ಶ್ರೀನಿವಾಸ, ಉಮಾಶಂಕರ್, ಪಂಡರಿನಾಥ್, ಆಂಥೋಣಿ, ಕೃಷ್ಣೇಗೌಡ, ವಿನಾಯಕ್, ಲೋಕೇಶ್, ಸೋಮಶೇಖರ್, ಶಿವಕುಮಾರ್, ಎ.ಟಿ ರವಿ, ಮಹೆಶ್, ಕೂಡ್ಲಿಗೆರೆಮಂಜುನಾಥ್, ಮಹೆಶ್‌ಕುಮಾರ್, ಅನಿತ, ಮುಖ್ತಾಬಾಯಿ, ನರಸಿಂಹಮೂರ್ತಿ, ನಾರಾಯಣಸ್ವಾಮಿ ಇತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ