ವಿಷ್ಣು ಸಮಾಧಿ ದ್ವಂಸ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Aug 11, 2025, 12:30 AM IST
10ಎಚ್ಎಸ್ಎನ್4 :  | Kannada Prabha

ಸಾರಾಂಶ

ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಿರುವ ಘಟನೆ ಖಂಡಿಸಿ ನಗರದಲ್ಲಿ ಡಾ. ವಿಷ್ಣು ಸೇನಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಏಕಾಏಕಿ ಸ್ಮಾರಕವನ್ನು ಒಡೆದು ಹಾಕಿರುವುದು ಕನ್ನಡ ಚಿತ್ರರಂಗ ಹಾಗೂ ಹಿರಿಯ ಕಲಾವಿದರಿಗೆ ಮಾಡಿದ ಅಪಮಾನವಾಗಿದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಸ್ಮಾರಕವನ್ನು ಅದೇ ಸ್ಥಳದಲ್ಲಿ ಪುನರ್‌ ಸ್ಥಾಪಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಖ್ಯಾತ ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಿರುವ ಘಟನೆ ಖಂಡಿಸಿ ನಗರದಲ್ಲಿ ಡಾ. ವಿಷ್ಣು ಸೇನಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಮಹಾಂತೇಶ್ ಮಾತನಾಡಿ, ಕಳೆದ 15 ವರ್ಷಗಳ ಹಿಂದೆ ವಿಷ್ಣುವರ್ಧನ್ ಅವರು ವಿಧಿವಶರಾದಾಗ ಸರ್ಕಾರಿ ಗೌರವಗಳೊಂದಿಗೆ ಅಭಿಮಾನ್‌ ಸ್ಟುಡಿಯೋದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಆದರೆ ಇದೀಗ ಅದನ್ನು ಧ್ವಂಸಗೊಳಿಸಿರುವುದು ಖಂಡನೀಯ ಎಂದರು.

ವಿಷ್ಣುವರ್ಧನ್ ಅವರ ಸ್ಮಾರಕ ಸ್ಥಳವನ್ನು ಅವರ ಅಭಿಮಾನಿಗಳು ಪುಣ್ಯ ಸ್ಥಳವಾಗಿ ಪರಿಗಣಿಸಿ ಅವರ ಹುಟ್ಟುಹಬ್ಬ ಹಾಗೂ ಅವರ ಪುಣ್ಯತಿಥಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರು. ಆದರೆ ಗುರುವಾರ ರಾತ್ರಿ ಏಕಾಏಕಿ ಸ್ಮಾರಕವನ್ನು ಒಡೆದು ಹಾಕಿರುವುದು ಕನ್ನಡ ಚಿತ್ರರಂಗ ಹಾಗೂ ಹಿರಿಯ ಕಲಾವಿದರಿಗೆ ಮಾಡಿದ ಅಪಮಾನವಾಗಿದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಸ್ಮಾರಕವನ್ನು ಅದೇ ಸ್ಥಳದಲ್ಲಿ ಪುನರ್‌ ಸ್ಥಾಪಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಡಾ. ವಿಷ್ಣು ಸೇನಾ ಸಮಿತಿ ಅಧ್ಯಕ್ಷ ಎನ್. ಮಹಾಂತೇಶ್, ಉಪಾಧ್ಯಕ್ಷರು ರಘುನಂದನ್, ವಿಜಯಕುಮಾರ್, ದೇವರಾಜು ಚಂದ್ರು ನೀಡಿಗೆರೆ ತಮ್ಲಾಪುರ ಗಣೇಶ, ಪ್ರಕಾಶ ಬಿ.ಕೆ. ಸುರೇಶ್, ಆಟೋ ರಾಜು, ಮಂಜು ನೀತು ಕೊತಾರಿ, ರತ್ನಮ್ಮ ಮಮತಾ, ವಾಸು ಮುಂತಾದ ಅಭಿಮಾನಿಗಳು ಉಪಸಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌