ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Aug 26, 2026, 02:00 AM IST
25ಕೆಎಂಎನ್ ಡಿ13 | Kannada Prabha

ಸಾರಾಂಶ

ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರ ಜುಲೈ 29ರಿಂದ ಆಗಸ್ಟ್ 24ರವರೆಗೆ ಪ್ರತಿದಿನ 12,000 ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಆದೇಶ ನೀಡಿದ ಹಿನ್ನೆಲೆ ನೀರು ಬಿಟ್ಟಿದ್ದರೂ ಸಹ ನೆನ್ನೆಯಿಂದ ಮತ್ತೆ ಪ್ರತಿ ದಿನ 9,000 ಕ್ಯುಸೆಕ್ ಬಿಡುವಂತೆ ಹೊಸ ಆದೇಶ ನೀಡಿರುವುದು ಖಂಡನೀಯ.

ಕನ್ನಡಪ್ರಭ ವಾರ್ತೆ ಹಲಗೂರು

ತಮಿಳುನಾಡಿಗೆ ಮತ್ತೆ 9 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಆದೇಶ ನೀಡಿರುವುದನ್ನು ಖಂಡಿಸಿ ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹಲಗೂರು ವೃತ್ತದಲ್ಲಿ ಸೇರಿದ ವೇದಿಕೆ ಕಾರ್ಯಕರ್ತರು, ತಮಿಳುನಾಡಿಗೆ ತಕ್ಷಣವೇ ನೀರು ಬಿಡುತ್ತಿರುವುದನ್ನು ನಿಲ್ಲಿಸಿ ರೈತರಿಗೆ ಬೆಳೆ ಬೆಳೆಯಲು ನೀರು ಬಿಡುವಂತೆ ಸರ್ಕಾರವನ್ನು ಆಗ್ರಹಿಸಿದರು.

ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ್ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರ ಜುಲೈ 29ರಿಂದ ಆಗಸ್ಟ್ 24ರವರೆಗೆ ಪ್ರತಿದಿನ 12,000 ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಆದೇಶ ನೀಡಿದ ಹಿನ್ನೆಲೆ ನೀರು ಬಿಟ್ಟಿದ್ದರೂ ಸಹ ನೆನ್ನೆಯಿಂದ ಮತ್ತೆ ಪ್ರತಿ ದಿನ 9,000 ಕ್ಯುಸೆಕ್ ಬಿಡುವಂತೆ ಹೊಸ ಆದೇಶ ನೀಡಿರುವುದನ್ನು ಖಂಡಿಸಿದರು.

ರಾಜ್ಯದ ಜನರಿಗೆ, ರೈತರಿಗೆ ಈ ಆದೇಶ ಮರಣ ಶಾಸನವಾಗಿದೆ. ಮುಂಗಾರು ಮಳೆ ಸರಿಯಾಗಿ ಆಗಿಲ್ಲ. ಬರ ತಾಂಡವವಾಡುತ್ತಿದೆ. ಆದರೂ ನಮ್ಮ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿಲ್ಲ. ಈ ರಾಜ್ಯದ ರೈತರಿಗೆ ಬರ ಪರಿಹಾರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮಂಡಳಿ ತಕ್ಷಣ ಎಚ್ಚೆತ್ತುಕೊಂಡು ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ನಿಲ್ಲಿಸಿ ರಾಜ್ಯದ ಜನರಿಗೆ ರೈತರ ವ್ಯವಸಾಯಕ್ಕಾಗಿ ನೀರು ಬಿಡಬೇಕು. ತಪ್ಪಿದಲ್ಲಿ ರಾಜ್ಯಾದ್ಯಂತ ಈ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ರಾಜ್ಯದ 30 ಸಂಸದರು ಕಾವೇರಿ ನೀರಿನ ವಿಚಾರದಲ್ಲಿ ಮಹದಾಯಿ ಯೋಜನೆ, ಮೇಕೆದಾಟು ಯೋಜನೆ ಬಗ್ಗೆ ಸದನದಲ್ಲಿ ಧ್ವನಿ ಎತ್ತಿ, ರೈತರಿಗೆ ಬೆಳೆ ಬೆಳೆಯಲು ಸಹಕಾರಿಯಾಗಬೇಕು ಆಗ್ರಹಿಸಿ ನಾಡಕಚೇರಿ ಉಪ ತಹಸೀಲ್ದಾರ್ ಕೆ.ನಟರಾಜ್ ಅವರಿಗೆ ಮನವಿಪತ್ರ ಸಲ್ಲಿಸಿದರು.

ಮನವಿ ಪತ್ರ ಸ್ವೀಕರಿಸಿದ ನಟರಾಜು ಮಾತನಾಡಿ, ಈ ವಿಚಾರವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕೇಂದ್ರ ಸರ್ಕಾರಕ್ಕೆ ಕಳಿಸುವುದಾಗಿ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ವೇದಿಕೆ ಹೋಬಳಿ ಅಧ್ಯಕ್ಷ ಸಂತೋಷ್, ಚಂದ್ರು, ಬಸಂತ್ ಕುಮಾರ್, ಪೂರ್ಣಚಂದ್ರ ,ಮುನಿ ಮಹಾದೇವಸ್ವಾಮಿ, ವಾಸೀಮ್ಅಕ್ರಂ , ಅಬ್ದುಲ್ ರಹಮಾನ್, ರಿಯಾಜ್, ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಡಗು, ಕರಾವಳಿಯಲ್ಲಿ ಭರ್ಜರಿ ಮಳೆ
ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್​