ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Sep 25, 2026, 01:45 AM IST
24ಎಚ್ಎಸ್ಎನ್17 :  | Kannada Prabha

ಸಾರಾಂಶ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭವಾರ್ತೆ, ಸಕಲೇಶಪುರ

ಹಿಂದೂ ಕಾರ್ಯಕರ್ತರ ವಿರುದ್ಧ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಿಸಿ ಸಂಘಟನೆಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಹಾಗೂ ಪ್ರಜಾಸೇವಾ ಆಂದೋಲನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಲಂಚ ನೀಡುವ ಕುರಿತು ನೀಡಿರುವ ಹೇಳಿಕೆ ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಉಪವಿಭಾಗಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ತಾಲೂಕು ಕಚೇರಿ ಎದುರು ಪ್ರತಿಭಟನೆಯಲ್ಲಿ, ಹಿಂದೂ ಕಾರ್ಯಕರ್ತರು ಹಾಗೂ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಕೋಕಾ, ಗೂಂಡಾ ಕಾಯ್ದೆ ಸೇರಿದಂತೆ ವಿವಿಧ ಕಾನೂನುಗಳಡಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದರು. ಸೆ.19ರಂದು ನಡೆದ ಪ್ರಜಾಸೇವಾ ಆಂದೋಲನದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ಧರ್ಮ ಎಂಬ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದರು.ಶಿವಲಿಂಗೇಗೌಡರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಹಿಂದೂ ಮುಖಂಡ ರಘು, ಹಿಂದೂ ಹಿತರಕ್ಷಣಾ ವೇದಿಕೆ ಸಂಯೋಜಕ ಶಿವು ಜಿಪ್ಪಿ, ಕೌಶಿಕ್ ಎಚ್.ಎಂ., ವಿಜಿತ್ ಗೌಡ, ಶೇಖರ್ ಪೂಜಾರಿ, ದಿಲೀಪ್ ಕುಶಾಲನಗರ, ಸುಪ್ರೀತ್, ಹರ್ಷ, ಕಬ್ಬಿನಗದ್ದೆ ಶೇಖರ್, ಹೆಬ್ಬಸಾಲೆ ರವಿ, ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೋರ್‌ವೆಲ್ ಕೊರೆಯಲು ವೈಜ್ಞಾನಿಕ ಯೋಜನೆ ಅಗತ್ಯ: ಸಿಇಒ
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಅಣಕು ಶವಯಾತ್ರೆ