ವಕೀಲರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Nov 04, 2026, 01:30 AM IST
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತಹ ವಕೀಲರ ಮೇಲೆ ಆಗುತ್ತಿರುವ ದೌರ್ಜನ್ಯ ಖಂಡಿಸಿ ಹರಪನಹಳ್ಳಿ ವಕೀಲರ ಸಂಘದಿಂದ ಮಂಗಳವಾರ  ಕಲಾಪ ದಿಂದ ಹೊರಗುಳಿದು ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಪ್ರತಿಭಟನಿರತ ವಕೀಲರ ಸಂಘದ ಪದಾಧಿಕಾರಿಗಳು ಪಾದಯಾತ್ರೆ ಮೂಲಕ ತಾಲೂಕಾಡಳಿತ ಸೌಧಕ್ಕೆ ತೆರಳಿ ತಹಸೀಲ್ದಾರಗೆ ಮನವಿ

ಹರಪನಹಳ್ಳಿ: ಇತ್ತೀಚೆಗೆ ಬೆಂಗಳೂರಿನಲ್ಲಿ ಕಾರ್ಯನಿರತ ವಕೀಲರೊಬ್ಬರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಹರಪನಹಳ್ಳಿ ವಕೀಲರು ಮಂಗಳವಾರ ನ್ಯಾಯಾಲಯದ ಕಲಾಪದಿಂದ ಹೊರಗುಳಿಯುವ ಮೂಲಕ ಪ್ರತಿಭಟನೆ ನಡೆಸಿದರು.

ಹಲ್ಲೆ ಮಾಡಿರುವ ಆರೋಪಿತರನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಕೀಲರ ಸಂಘದ ಅಧ್ಯಕ್ಷ ವಿ.ಜಿ. ಪ್ರಕಾಶ್ ಗೌಡ ನೇತೃತ್ವದಲ್ಲಿ ಸಭೆ ನಡೆಸಿ ಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು. ನಂತರ ಕಲಾಪದಿಂದ ಹೊರಗುಳಿಯುವ ತೀರ್ಮಾನ ಕೈಗೊಳ್ಳಲಾಯಿತು. ನಂತರ ನ್ಯಾಯಾಲಯ ಪ್ರವೇಶ ದ್ವಾರದಲ್ಲಿ ಸಮಾವೇಶಗೊಂಡ ಪ್ರತಿಭಟನಿರತ ವಕೀಲರ ಸಂಘದ ಪದಾಧಿಕಾರಿಗಳು ಪಾದಯಾತ್ರೆ ಮೂಲಕ ತಾಲೂಕಾಡಳಿತ ಸೌಧಕ್ಕೆ ತೆರಳಿ ತಹಸೀಲ್ದಾರಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಿ.ಜಿ. ಪ್ರಕಾಶ್ ಗೌಡ, ಉಪಾಧ್ಯಕ್ಷ ದಾಕ್ಷಾಯಣಿ, ಕಾರ್ಯದರ್ಶಿ ಕೊಡಿಹಳ್ಳಿ ಪ್ರಕಾಶ್, ಕಾರ್ಯಕಾರಣಿ ಮಂಡಳಿಯ ಸದಸ್ಯರು ಸೇರಿದಂತೆ ವಕೀಲರ ಸಂಘದ ಹಿರಿಯ ಕಿರಿಯ ನ್ಯಾಯಾವಾದಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌