ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಭಾರೀ ಬಂಡವಾಳಗಾರರಿಂದ ಹಾಗೂ ಭೂಗಳ್ಳರಿಂದ ಪ್ರಕೃತಿ ರಕ್ಷಿಸಿ, ಪರಿಸರ ತಜ್ಞ ಡಾ. ಮಾಧವ್ ಗಾಡ್ಗೀಳ್‌ರವರ ವೈಜ್ಞಾನಿಕ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಿ ಕೊಡಗು, ಜಿಲ್ಲೆಯ ಮಲೆನಾಡು ಭಾಗದಲ್ಲಿ, ಕೇರಳದ ವಯನಾಡಿನಲ್ಲಿ ಭೂ ಕುಸಿತದ ದುರಂತಗಳು ಸಂಭವಿಸದಂತೆ ಎಚ್ಚರವಹಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿದ ಬಡ ಸಾಗುವಳಿದಾರರನ್ನು ಹೊರತುಪಡಿಸಿ, ಭಾರೀ ಭೂಮಾಲಿಕ ಒತ್ತುವರಿ ದಾರರನ್ನು ತೆರವುಗೊಳಿಸಿ ಅರಣ್ಯ ಮತ್ತು ಕಂದಾಯ ಭೂಮಿ ಜಂಟಿ ಸರ್ವೆ ನಡೆಸಿ ಗಡಿ ಗುರುತಿಸಿ ಗೊಂದಲಕ್ಕೆ ತೆರೆ ಎಳೆಯಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.ಗಿರಿ ಪ್ರದೇಶ ಮತ್ತು ಮುಳ್ಳಯ್ಯನಗಿರಿ ಸುತ್ತಮುತ್ತ ಹೋಂಸ್ಟೇ, ರೆಸಾರ್ಟ್, ಕಲ್ಲುಗಣಿಗಾರಿಕೆ, ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಬಾರದು. ಈಗಾಗಲೇ ನೀಡಿರುವ ಅನುಮತಿಯನ್ನು ಕೂಡಲೇ ರದ್ದುಪಡಿಸಬೇಕು ಹಾಗೂ ಯಾವುದೇ ಪರಿಸರ ವಿರೋಧಿ ಚಟುವಟಿಕೆಗಳಿಗೆ ಅನುಮತಿ ನೀಡಬಾರದು ಎಂಬ ಈ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.