ಪ್ರತಾಪ್ ಸಿಂಹ ವಿರುದ್ಧ ಕ್ರಮಕ್ಕೆ ಅಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Sep 28, 2026, 01:15 AM IST
ಶಿರ್ಷಿಕೆ-೨೭ಕೆ.ಎಂ.ಎಲ್.ಆರ್.೧- ಮಾಲೂರನಲ್ಲಿ ದಲಿತರ ಹಾಗೂ ನೀಲಿ ಶಾಲೂ ಬಗ್ಗೆ ಅವಹೇಳನಕಾರಿಯಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿದ್ದಾರೆ ಎಂದು ಆರೋಪಿಸಿ ಕದಸಂಸ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳನ್ನು ಏಕವಚನದಲ್ಲಿ ನಿಂದಿಸುವುದು ಹಾಗೂ ಸಂವಿಧಾನ ಬದ್ದ ಸಮಾನತೆಯ ಸಂಕೇತವಾದ ನೀಲಿ ಬಣ್ಣವನ್ನು ಲಘುವಾಗಿ ಕಾಣುವುದು ಖಂಡನೀಯ.

ಡಿಎಸ್‌ಎಸ್‌ ಕುರಿತು ಅವಹೇಳನಕಾರಿ ಹೇಳಿಕೆ । ಪ್ರತಾಪ್ ಭಾವಚಿತ್ರಕ್ಕೆ ಚಪ್ಪಲಿ ಹಾರಹಾಕಿ ಧಿಕ್ಕಾರ ಘೋಷಣೆ

ಕನ್ನಡಪ್ರಭ ವಾರ್ತೆ ಮಾಲೂರು

ಸಂವಿಧಾನದ ಸಮಾನತೆಯ ಹಾಗೂ ಡಿಎಸ್‌ಎಸ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೊಡಲೇ ಬಂಧಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಘಟಕ ವತಿಯಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ಸಮಾವೇಶಗೊಂಡ ದಸಂಸ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪ್ರತಾಪ್ ಸಿಂಹ ಹೇಳಿಕೆಯನ್ನು ಖಂಡಿಸಿ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರಹಾಕಿ ಧಿಕ್ಕಾರದ ಘೋಷಣೆ ಕೂಗಿದರು. ಬಳಿಕ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳ ಮೂಲಕ ರಾಜ್ಯದ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಸಂಚಾಲಕ ಎಸ್.ಎಂ.ವೆಂಕಟೇಶ್, ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳನ್ನು ಏಕವಚನದಲ್ಲಿ ನಿಂದಿಸುವುದು ಹಾಗೂ ಸಂವಿಧಾನ ಬದ್ದ ಸಮಾನತೆಯ ಸಂಕೇತವಾದ ನೀಲಿ ಬಣ್ಣವನ್ನು ಲಘುವಾಗಿ ಕಾಣುವುದು ಖಂಡನೀಯ. ರಾಜ್ಯದಲ್ಲಿ ದಲಿತ ಸಂಘರ್ಷ ಸಮಿತಿಯು ವ್ಯಕ್ತಿಗಳ ವಿರುದ್ಧವಲ್ಲ. ಸಮಾಜದ ಶೋಷಣೆ ಹಾಗೂ ಅನ್ಯಾಯದ ವಿರುದ್ಧ ಸದಾ ಹೋರಾಡುತ್ತಿದೆ ಎಂದರು.

ದಂಸಸ ಸಂಘಟನಕಾರರಾದ ಡಿ.ನಾರಾಯಣಸ್ವಾಮಿ, ಬಿಂಗೀಪುರ ತಿರುಮಲೇಶ್, ಗೋಪಿ, ಮುನಿರಾಜಪ್ಪ, ವೆಂಕಟರಮಣಪ್ಪ, ಬಾಬು, ಅಂಬರೀಶ್, ಶಾಮಣ್ಣ, ಮಂಜುನಾಥ್ ನಾಯ್ದು, ಕೃಷ್ಣಪ್ಪ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

೨೦೩೫ ಕ್ಕೆ ೪೦೦ ಕೋಟಿ ಜನರು ಬೊಜ್ಜಿನ ಸಮಸ್ಯೆ: ಕೆ.ಟಿ.ಹನುಮಂತು
ದೇಶಕ್ಕೆ ಮಾದರಿಯಾಗುವ ಸಂವಿಧಾನ ಭವನ: ಪಿ.ರವಿಕುಮಾರ್