ಅಮಿತ್ ಶಾ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Dec 22, 2024, 01:32 AM IST
ಅಮಿತ್‌ ಶಾ ಹೇಳಿಕೆ ವಿರುದ್ಧ  ಜೈಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯಿಂದ ಪ್ರತಿಭಟನೆ ನಡೆಯಿತು. | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ಗೃಹಮಂತ್ರಿ ಅಮಿತ್ ಶಾ ರವರು ಡಾ. ಬಿ.ಆರ್‌. ಅಂಬೇಡ್ಕರ್ ಬಗ್ಗೆ ಹಾಸ್ಯಾಸ್ಪದವಾಗಿ ಮತ್ತು ನಾಟಕೀಯವಾಗಿ ಸಂಸತ್ ಭವನದಲ್ಲಿ ಮಾತನಾಡಿರುವುದು ಖಂಡನೀಯ. ಹಾಗಾಗಿ ಅವರನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ಜೈಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ದೇಶದ ಗೃಹಮಂತ್ರಿ ಅಮಿತ್ ಶಾ ಅವರು ಡಿಸೆಂಬರ್ ೧೭ರಂದು ಸಂಸತ್ತಿನಲ್ಲಿ ಮಾತನಾಡುವಾಗ ಅಂಬೇಡ್ಕರ್‌ ಅವರ ಬಗ್ಗೆ ಅತ್ಯಂತ ಹಗುರವಾಗಿ ಮತ್ತು ಜವಾಬ್ದಾರಿಯಿಲ್ಲದೆ ನಾಲಿಗೆಯ ಮೇಲೆ ಹಿಡಿತವಿಲ್ಲದೆ ಮಾತನಾಡಿರುವುದು ಖಂಡನೀಯ.

ಕನ್ನಡಪ್ರಭ ವಾರ್ತೆ ಹಾಸನ

ಕೇಂದ್ರ ಸರ್ಕಾರದ ಗೃಹಮಂತ್ರಿ ಅಮಿತ್ ಶಾ ರವರು ಡಾ. ಬಿ.ಆರ್‌. ಅಂಬೇಡ್ಕರ್ ಬಗ್ಗೆ ಹಾಸ್ಯಾಸ್ಪದವಾಗಿ ಮತ್ತು ನಾಟಕೀಯವಾಗಿ ಸಂಸತ್ ಭವನದಲ್ಲಿ ಮಾತನಾಡಿರುವುದು ಖಂಡನೀಯ. ಹಾಗಾಗಿ ಅವರನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ಜೈಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಜೈಭೀಮ್ ಬ್ರಿಗೇಡ್ ಸಂಘಟನಾ ಸಮಿತಿ ಜಿಲ್ಲಾಧ್ಯಕ್ಷ ರಾಜೇಶ್ ಮಾಧ್ಯಮದೊಂದಿಗೆ ಮಾತನಾಡಿ, ದೇಶದ ಗೃಹಮಂತ್ರಿ ಅಮಿತ್ ಶಾ ಅವರು ಡಿಸೆಂಬರ್ ೧೭ರಂದು ಸಂಸತ್ತಿನಲ್ಲಿ ಮಾತನಾಡುವಾಗ ಸಂವಿಧಾನಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಬಗ್ಗೆ ಅತ್ಯಂತ ಹಗುರವಾಗಿ ಮತ್ತು ಜವಾಬ್ದಾರಿಯಿಲ್ಲದೆ ನಾಲಿಗೆಯ ಮೇಲೆ ಹಿಡಿತವಿಲ್ಲದೆ ಮಾತನಾಡಿರುವುದು ಖಂಡನೀಯ. ಈತ ಹೇಳಿರುವುದೇನೆಂದರೆ, ಈಗ ಫ್ಯಾಷನ್ ಆಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಅಂಬೇಡ್ಕರ್ ಎನ್ನುತ್ತಿರುವುದು.. ಇವರೆಲ್ಲಾ ಇಷ್ಟು ಸಾರಿ ಭಗವಂತನ ಸ್ಮರಣೆ ಮಾಡಿದ್ದೇ ಆಗಿದ್ದಲ್ಲಿ ಏಳು ಜನ್ಮದವರೆಗೆ ಸ್ವರ್ಗವಾದರೂ ದೊರೆಯುತ್ತಿತ್ತು ಎಂದು ಅಂಬೇಡ್ಕರ್ ಅವರ ಬಗ್ಗೆ ಇಷ್ಟೊಂದು ಹಗುರವಾಗಿ ನಾಲಿಗೆ ಹರಿಬಿಟ್ಟಿರುವ ಅಮಿತ್ ಶಾಗೆ ಒಂದು ಗಂಭೀರವಾದ ಎಚ್ಚರಿಕೆಯೊಂದನ್ನು ರವಾನಿಸಬೇಕಾಗಿದೆ. ಹೇಳುತ್ತೇವೆ ಕೇಳು ಅಮಿತ್ ಶಾ ನಮಗೆ ಏಳು ಜನ್ಮದ ಪುಣ್ಯ, ಸ್ವರ್ಗ ಬೇಡವೇ ಬೇಡ. ನಮಗೆ ಸ್ವರ್ಗ ನರಕಗಳಲ್ಲಿ ನಂಬಿಕೆ ಇಲ್ಲ. ನಮಗೆ ಅಗತ್ಯವೂ ಇಲ್ಲ. ನಮಗೆ ಅಂಬೇಡ್ಕರ್ ಒಬ್ಬರೇ ಏಕೈಕ ದೇವರು. ಅದರಲ್ಲಿ ಎಂದಿಗೂ ರಾಜಿ ಇಲ್ಲ. ಅಂಬೇಡ್ಕರ್ ಅವರ ಹೆಸರನ್ನು ಉಸಿರಾಗಿಸಿಕೊಂಡಿದ್ದೇವೆ ಎಂದರು. ಕೊನೆಯ ಉಸಿರಿರುವವರೆಗೂ ಅಂಬೇಡ್ಕರ್ ಅವರ ಹೆಸರನ್ನೇ ಉಸಿರಾಗಿಸಿಕೊಳ್ಳುತ್ತೇವೆ ಕೂಡಾ. ಅಮಿತ್ ಶಾ ನೀವೆಲ್ಲಾ ಅಂಬೇಡ್ಕರ್ ಅವರ ಸಾಧನೆ, ಹೇಳಿಗೆ ಸಹಿಸದೆ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಲೇ ಬರುವ ಮೂಲಕ ನಿಮ್ಮ ಅಸಹಿಷ್ಣುತೆ ಪ್ರದರ್ಶಿಸುತ್ತಿದ್ದೀರಿ ಎಂದು ದೂರಿದರು.

ಅಂಬೇಡ್ಕರ್ ಅವರನ್ನು ಮತ್ತು ಮತ್ತವರ ಸಮುದಾಯಗಳನ್ನು ಒಪ್ಪಿಕೊಳ್ಳಲು ನೀವು ಎಂದಿಗೂ ತಯಾರಿಲ್ಲ. ಇಡೀ ವಿಶ್ವವೇ ಒಪ್ಪಿಕೊಂಡು ವಿಶ್ವಸಂಸ್ಥೆ ಇಂದು ಅಂಬೇಡ್ಕರ್ ಅವರ ಜನ್ಮದಿನವಾದ ಏಪ್ರಿಲ್ ೧೪ರ ದಿನವನ್ನು ವಿಶ್ವ ಜ್ಞಾನದ ದಿನ ಎಂದು ಘೋಷಿಸಿದೆ. ಅಂಬೇಡ್ಕರ್ ಎಂದರೆ ಜ್ಞಾನದ ಸಂಕೇತ ನೀವು ಅವರನ್ನು ಅರಗಿಸಿಕೊಳ್ಳಲು ಆಗದಂತ ಅಸೂಯೆ.ಛೇ. ನಮಗೆ ನೀವು ಹೇಳುವ ಸ್ವರ್ಗ, ದೇವರು, ಸ್ಮರಣೆ ಬೇಡ. ಅಂಬೇಡ್ಕರ್ ಹೆಸರೊಂದೇ ಸಾಕು. ನಮಗದೇ ಶಕ್ತಿ ನಮಗದೇ ಚೈತನ್ಯ ಮತ್ತು ಸ್ಫೂರ್ತಿ. ಸಾವಿರಾರು ವರ್ಷಗಳಿಂದ ನೀವು ಹೇಳುವ ದೇವರುಗಳನ್ನು ಪೂಜಿಸಿ ಸಾಕಾಯ್ತು. ನಿಮ್ಮ ದೇವರು ನಮ್ಮನ್ನು ದೂರವೇ ಇಟ್ಟ. ಕಡೆಗೆ ಎಲ್ಲರಂತೆ ದೇವಾಲಯದೊಳಕ್ಕೆ ಬಿಟ್ಟುಕೊಳ್ಳಲಿಲ್ಲ ಮಾತ್ರವಲ್ಲ, ದೇವಾಲಯದ ಬಳಿಗೆ ಸುಳಿದರೂ ನಮಗೆ ಕಷ್ಟ ಕೊಡುತ್ತಿದ್ದ. ಅಂಬೇಡ್ಕರ್ ಬಂದ ಮೇಲೆಯೇ ನಮಗೆ ಸ್ವರ್ಗ, ಮೋಕ್ಷ ಎಲ್ಲವೂ ನಮಗೆ ಅಂಬೇಡ್ಕರ್ ಸ್ಮರಣೆಯೇ ಸಾಕು ಎಂದು ಹೇಳಿದರು. ಅಮಿತ್ ಶಾನನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾ ಮಾಡಲು ಈ ಮೂಲಕ ಆಗ್ರಹಪಡಿಸುತ್ತೇವೆ. ಇಲ್ಲವಾದಲ್ಲಿ ಈತನನ್ನು ವಜಾ ಮಾಡುವವರೆಗೂ ರೈತ, ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿ ಜಿಲ್ಲಾ ಕಾರ್ಯಾಧ್ಯಕ್ಷ ಚಂದ್ರಶೇಖರ್‌, ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಕುಮಾರ್, ಎಸ್.ಡಿ.ಪಿ.ಐ. ಮುಖಂಡ ಫೈರೋಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇರ್ಫಾನ್, ಅಲ್ಪಸಂಖ್ಯಾತರ ಘಟಕದ ವರ್ಷ, ಟಿಪ್ಪು ಸಂಘರ್ಷ ಸಮಿತಿ ಅದ್ಯಕ್ಷ ಮುಬಾಶೀರ್ ಅಹಮದ್, ಇತರರು ಉಪಸ್ಥಿತರಿದ್ದರು.

=====================

ಫೋಟೋ:

ಅಮಿತ್‌ ಶಾ ಹೇಳಿಕೆ ವಿರುದ್ಧ ಜೈಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯಿಂದ ಪ್ರತಿಭಟನೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ