ಹಿಂಗಾರು ಹಂಗಾಮಿನ ಬೆಳೆಗಳಿಗೆ ಅಗತ್ಯವಿರುವ ಗೊಬ್ಬರ ಮತ್ತು ಗುಣಮಟ್ಟದ ಬೀಜಗಳನ್ನು ಸಮರ್ಪಕವಾಗಿ ಪೂರೈಸಬೇಕು. ಹಾಸನ ತಾಲೂಕಿನ ಬೀರನಹಳ್ಳಿ ಕೆರೆಯ ಬಡವರಿಗೆ ೨೦೦೭ರಲ್ಲಿ ಹಕ್ಕುಪತ್ರ ನೀಡಿದ್ದರೂ ಇದುವರೆಗೆ ನಿವೇಶನದ ಸೌಲಭ್ಯ ಕಲ್ಪಿಸಿಲ್ಲ. ಹಕ್ಕುಪತ್ರ ಪಡೆದವರು ಬೀದಿಪಾಲಾಗುವ ಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ನಿವೇಶನ ಒದಗಿಸಬೇಕು ಎಂದು ಒತ್ತಾಯಿಸಿದರು. ಅದೇ ರೀತಿ ಅರಕಲಗೂಡು ತಾಲ್ಲೂಕಿನ ಅಬ್ಬರ ಮಾಚಗೌಡನಹಳ್ಳಿಯಲ್ಲಿ ೧೯೯೨ರಲ್ಲಿ ೩೪ ಮಂದಿಗೆ ಹಕ್ಕುಪತ್ರ ನೀಡಲಾಗಿದ್ದು, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಫಲಾನುಭವಿಗಳಿಗೆ ತುರ್ತಾಗಿ ನಿವೇಶನ ಒದಗಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಲಾಯಿತು.
ಕನ್ನಡಪ್ರಭ ವಾರ್ತೆ ಹಾಸನ
ರಾಜ್ಯಾದ್ಯಂತ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಸಮರ್ಪಕ ಪರಿಹಾರ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಎದುರು ತೋಳಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.ಇದೇ ವೇಳೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಆನೆಕೆರೆ ರವಿ ಮಾತನಾಡಿ, ರಾಜ್ಯ ಸರ್ಕಾರ ಬರ ಪರಿಹಾರವಾಗಿ ಪ್ರತಿ ರೈತರಿಗೆ ₹ ೨, ೫೦೦ ನೀಡುವುದಾಗಿ ಘೋಷಿಸಿರುವುದು ರೈತರಿಗೆ ಸಮರ್ಪಕ ಪರಿಹಾರವಲ್ಲ. ಪ್ರತಿ ರೈತರಿಗೆ ಕನಿಷ್ಠ ೫೦ ಸಾವಿರ ಪರಿಹಾರ ಘೋಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರಾಜ್ಯದ ಬರಪೀಡಿತ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಬೇಕು. ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ಮೇವು ಒದಗಿಸಬೇಕು. ರೈತ ಹೋರಾಟಗಾರರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ರಾಜ್ಯದ ಕೆರೆ-ಕಾಲುವೆಗಳಿಗೆ ಏತ ನೀರಾವರಿ ಯೋಜನೆಯಡಿ ನೀರು ಹರಿಸಬೇಕು ಎಂದು ಆಗ್ರಹಿಸಿದರು. ಹಿಂಗಾರು ಹಂಗಾಮಿನ ಬೆಳೆಗಳಿಗೆ ಅಗತ್ಯವಿರುವ ಗೊಬ್ಬರ ಮತ್ತು ಗುಣಮಟ್ಟದ ಬೀಜಗಳನ್ನು ಸಮರ್ಪಕವಾಗಿ ಪೂರೈಸಬೇಕು. ಹಾಸನ ತಾಲೂಕಿನ ಬೀರನಹಳ್ಳಿ ಕೆರೆಯ ಬಡವರಿಗೆ ೨೦೦೭ರಲ್ಲಿ ಹಕ್ಕುಪತ್ರ ನೀಡಿದ್ದರೂ ಇದುವರೆಗೆ ನಿವೇಶನದ ಸೌಲಭ್ಯ ಕಲ್ಪಿಸಿಲ್ಲ. ಹಕ್ಕುಪತ್ರ ಪಡೆದವರು ಬೀದಿಪಾಲಾಗುವ ಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ನಿವೇಶನ ಒದಗಿಸಬೇಕು ಎಂದು ಒತ್ತಾಯಿಸಿದರು. ಅದೇ ರೀತಿ ಅರಕಲಗೂಡು ತಾಲ್ಲೂಕಿನ ಅಬ್ಬರ ಮಾಚಗೌಡನಹಳ್ಳಿಯಲ್ಲಿ ೧೯೯೨ರಲ್ಲಿ ೩೪ ಮಂದಿಗೆ ಹಕ್ಕುಪತ್ರ ನೀಡಲಾಗಿದ್ದು, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಫಲಾನುಭವಿಗಳಿಗೆ ತುರ್ತಾಗಿ ನಿವೇಶನ ಒದಗಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಲಾಯಿತು.ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಬಾಬು, ರಾಜ್ಯ ಸಂಚಾಲಕ ಎಸ್. ಮೊಹಮ್ಮದ್ ಸಾದಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೋರನಕೊಪ್ಪಲು ಜಯರಾಮ್, ಜಿಲ್ಲಾ ಕಾರ್ಯದರ್ಶಿ ವಿಠಲ, ಹಾಸನ ತಾಲೂಕು ಅಧ್ಯಕ್ಷ ಗಂಗಾಧರ್, ರಾಜ್ಯ ಸಂಚಾಲಕಿ ನಂಬಿಹಳ್ಳಿ ಕಮಲಮ್ಮ, ಪವಿತ್ರ, ಜಿಲ್ಲಾ ಸಂಚಾಲಕ ತಿಮ್ಮಣ್ಣ ಸೇರಿದಂತೆ ವಿವಿಧ ತಾಲೂಕುಗಳ ರೈತ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.