ಲೈಂಗಿಕ ದೌರ್ಜನ್ಯ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Apr 05, 2025, 12:51 AM IST
32 | Kannada Prabha

ಸಾರಾಂಶ

ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಭೂಮಾಲಕ ಮಹೇಶ್ ಭಟ್ ಬಂಧನಕ್ಕೆ ಆಗ್ರಹಿಸಿ ವಿಟ್ಲದಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಯಿತು. ಸಂತ್ರಸ್ತ ದಲಿತ ಕುಟುಂಬಕ್ಕೆ ಧೈರ್ಯ ತುಂಬಿ ಪ್ರಕರಣದ ಸಮಗ್ರ ತನಿಖೆ ನಡೆಸಲು ಆಗ್ರಹಿಸಲಾಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಭೂಮಾಲಕ ಮಹೇಶ್ ಭಟ್ ಬಂಧನಕ್ಕೆ ಆಗ್ರಹಿಸಿ ವಿಟ್ಲದಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಯಿತು. ಸಂತ್ರಸ್ತ ದಲಿತ ಕುಟುಂಬಕ್ಕೆ ಧೈರ್ಯ ತುಂಬಿ ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಹಾಗೂ ವಿವಿಧ ದಲಿತ ಮತ್ತು ಸಮಾನ ಮನಸ್ಕ ಸಂಘಟನೆಗಳು ಇದರ ಸಹಭಾಗಿತ್ವದಲ್ಲಿ ಸಭೆ ನಡೆಯಿತು.

ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ವಿಟ್ಲದ ಮುಖ್ಯ ರಸ್ತೆಯಲ್ಲಿ ಸಂಚರಿಸಿ, ನಾಡಕಚೇರಿ ಬಳಿ ಪ್ರತಿಭಟನಾ ಸಭೆ ನಡೆಯಿತು.

ದಲಿತ ಹಕ್ಕುಗಳ ರಾಜ್ಯ ಸಮಿತಿ ಸದಸ್ಯೆ ಈಶ್ವರಿ ಪದ್ಮುಂಜ ಮಾತನಾಡಿ, ಈ ಪ್ರಕರಣವನ್ನು ಪೊಲೀಸರು ಮರೆಮಾಚಿದ್ದಾರೆ. ಕೊಲೆ ಬೆದರಿಕೆ ಹೆತ್ತವರಿಗೆ ಬಂದರೂ ಪೊಲೀಸರು ಮೌನವಾಗಿದ್ದಾರೆ. ಮುಂದೆ ನಮ್ಮ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಸಂದೇಶ ನೀಡಲು ಈ ಹೋರಾಟ ನಡೆಸಲಾಗುತ್ತಿದೆ ಎಂದರು.

ಡಿವೈಎಫ್ ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ಬಾಲಕಿ ಮೇಲೆ ಕೇವಲ ಲೈಂಗಿಕ ಕಿರುಕುಳ ಮಾತ್ರ ನಡೆದಿಲ್ಲ, ಅತ್ಯಾಚಾರ ನಡೆದಿರುವ ಶಂಕೆ ಇದೆ, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆ ನಡೆದು ಹಲವು ದಿನಗಳು ಕಳೆದರೂ ಆರೋಪಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದರೆ ನಂಬಲು ಅಸಾಧ್ಯ. ಪೊಲೀಸರು ಅತ್ಯಾಚಾರಿಯನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾರ್ಮಿಕ ಮುಖಂಡ ಶೇಖರ ಮಾತನಾಡಿ, ಜಾತಿ ಧರ್ಮ ಬಿಟ್ಟು ಎಲ್ಲರೂ ಇಲ್ಲಿ ಸೇರಿದ್ದು, ನಮ್ಮೆಲ್ಲರ ಉದ್ದೇಶವೇ ಬಡ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿದೆ. ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆಯಿಂದಾಗಿ ಜನರು ನ್ಯಾಯ ವಂಚಿತರಾಗುತ್ತಿದ್ದಾರೆ ಎಂದರು.

ದಿನೇಶ್ ಮೂಳೂರು ಮಾತನಾಡಿ, ಬಿಜೆಪಿಯಲ್ಲಿರುವ ದಲಿತ್ ಯುವಕರು ಮಾತನಾಡುತ್ತಿಲ್ಲ ಎಂದು ದೂರಿದರು.

ಕಾರ್ಮಿಕ ಮುಖಂಡ ಬಿ.ಎಂ ಭಟ್ ಮಾತನಾಡಿದರು. ರೈತ ಮುಖಂಡರಾದ ಕೆ ಯಾದವ ಶೆಟ್ಟಿ, ಮಂಜುಳಾ ನಾಯಕ್, ಅಸದೋಕ್ ಕೊಂಚಾಡಿ, ಬಿ.ಕೆ ಇಮ್ತಿಯಾಜ್, ಸದಾಶಿವ ಪಡುಬಿದ್ರೆ, ಸರೋಜಿನಿ, ದಿನೇಶ್, ಎಸ್.ಪಿ ಆನಂದ್, ಸೇಸಪ್ಪ ಬೆದ್ರಕಾಡ್ ಮಾತನಾಡಿದರು.

ದಲಿತ ಮುಖಂಡರಾದ ಚಂದ್ರಶೇಖರ್ ಕಿನ್ಯಾ, ವಿಶ್ವನಾಥ ಮಂಜನಾಡಿ, ಪುಷ್ಪರಾಜ್ ಮಾಣಿಲ, ಸುರೇಶ್, ಚಂದಪ್ಪ, ರಾಧಕೃಷ್ಣ ಬೊಂಡಂತಿಲ, ಕಮಲಾಕ್ಷ ಬಜಾಲ್, ರಾಘವೇಂದ್ರ ಪಡ್ಪು, ಶಿನ ಕನ್ಯಾನ, ರಾಮಪ್ಪ ಮಂಜೇಶ್ವರ, ಗಂಗಾಧರ ಗೋಲಿಯಡ್ಕ, ವಿಜಯ ಮೂಡಬಿದರೆ, ಡಿವೈಎಫ್ಐ ಮುಖಂಡರಾದ ರಿಜ್ವಾನ್ ಹರೇಕಳ, ಜಗದೀಶ್ ಬಜಾಲ್, ನವೀನ್ ಕೊಂಚಾಡಿ, ರಝಾಕ್ ಮುಡಿಪು, ಅಸುಂತ ಡಿಸೋಜ, ಪ್ರಮಿಳಾ ಶಕ್ತಿನಗರ, ಸುನಿತಾ ತಣ್ಣೀರುಬಾವಿ, ಜೆಸಿಂತಾ ಜೋಕಟ್ಟೆ, ಅಭಿಷೇಕ್ ಬೆಳ್ತಂಗಡಿ, ಯೋಗಿತಾ ಕಾರ್ಮಿಕ ಮುಖಂಡರಾದ ಸುಕುಮಾರ್ ತೊಕ್ಕೊಟ್ಟು, ರಮೇಶ್, ಯೋಗೀಶ್ ಜಪ್ಪಿನಮೊಗರು, ಸಂತ್ರಸ್ತ ಕುಟುಂಬದ ಸದಸ್ಯರು ಇದ್ದರು.

ಬಳಿಕ ಉಪತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷರಾದ ಕೃಷ್ಣಪ್ಪ ಕೊಣಾಜೆ ಸ್ವಾಗತಿಸಿದರು, ಕೃಷ್ಣ ತಣ್ಣೀರುಬಾವಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!