ರಾಣಿಬೆನ್ನೂರು: ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮಕ್ಕೆ ಸರ್ಕಾರಿ ಬಸ್ ನಿಲ್ಲಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಶುಕ್ರವಾರ ಬಸ್ ತಡೆದು ಪ್ರತಿಭಟನೆ ನಡೆಸಿ ರಾಣಿಬೆನ್ನೂರು ಹಾಗೂ ಹರಿಹರ ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.ಗ್ರಾಪಂ ಮಾಜಿ ಅಧ್ಯಕ್ಷ ಚೇತನ್ ಪೂಜಾರ್ ಮಾತನಾಡಿ, ತಾಲೂಕಿನಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಿರುವ ಕೋಡಿಯಾಲ ಹೊಸಪೇಟೆ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ಸುಗಳು ನಿಲುಗಡೆಯಾಗುತ್ತಿಲ್ಲ. ಇದರಿಂದ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕುರಿತು ರಾಣಿಬೆನ್ನೂರು- ಹರಿಹರ ಡಿಪೋ ವ್ಯವಸ್ಥಾಪಕರಿಗೆ ಮನವಿ ಮಾಡಿದರೂ ಇಲ್ಲಿಯವರಿಗೂ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಈ ಮಾರ್ಗವಾಗಿ ಬರುವ ಎಲ್ಲ ಘಟಕಗಳ ಸರ್ಕಾರಿ ಬಸ್ಸುಗಳನ್ನು ನಿಲುಗಡೆ ಮಾಡಬೇಕು. ಜೂ. 30ರ ಒಳಗಾಗಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ರಾಣಿಬೆನ್ನೂರು ಮತ್ತು ಹರಿಹರ ಸಾರಿಗೆ ಘಟಕಗಳ ವ್ಯವಸ್ಥಾಪಕರು ಗ್ರಾಮಸ್ಥರ ಬೇಡಿಕೆಯನ್ನು ಮೇಲಧಿಕಾರಿಗಳೊಂದಿಗೆ ಚರ್ಚಿಸಿ 8- 10 ದಿನಗಳಲ್ಲಿ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ಸು ಪಡೆಯಲಾಯಿತು.ವರದಾ ನದಿಯಲ್ಲಿ ಕಾಲು ಜಾರಿ ವೃದ್ಧ ಸಾವು
ಕೂಡಲದ ದೇವಸ್ಥಾನಕ್ಕೆ ಆಗಮಿಸಿದ್ದ ಅವರು ಕಾಲು ತೊಳೆಯಲು ಹೋದಾಗ ತುಂಬಿ ಹರಿಯುತ್ತಿದ್ದ ವರದಾ ನದಿಯಲ್ಲಿ ಜಾರಿ ಬಿದ್ದು ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹದ ಹುಡುಕಾಟ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.