ಮೆಕ್ಕೆಜೋಳ, ಭತ್ತ, ಕಬ್ಬಿಗೆ ಬೆಂಬಲ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Nov 18, 2025, 01:15 AM IST
ಫೋಟೊ ಶೀರ್ಷಿಕೆ: 17ಆರ್‌ಎನ್‌ಆರ್2ರಾಣಿಬೆನ್ನೂರು ನಗರದಲ್ಲಿ ಎನ್‌ಡಿಎ ನೇತೃತ್ವದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೆಕ್ಕೆಜೋಳ, ಭತ್ತ, ಕಬ್ಬಿಗೆ ಬೆಂಬಲ ಘೋಷಣೆ ಮಾಡಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದವು. ಫೋಟೊ ಶೀರ್ಷಿಕೆ: 17ಆರ್‌ಎನ್‌ಆರ್2ಎರಾಣಿಬೆನ್ನೂರು ನಗರದ ಬಸ್‌ನಿಲ್ದಾಣದ ಬಳಿ ಎನ್‌ಡಿಎ ನೇತೃತ್ವದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೆಕ್ಕೆಜೋಳ, ಭತ್ತ, ಕಬ್ಬಿಗೆ ಬೆಂಬಲ ಘೋಷಣೆ ಮಾಡಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿದರು.  | Kannada Prabha

ಸಾರಾಂಶ

ಮೆಕ್ಕೆಜೋಳ, ಭತ್ತ, ಕಬ್ಬಿಗೆ ಬೆಂಬಲ ಘೋಷಣೆ ಮಾಡಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಸೋಮವಾರ ಎನ್‌ಡಿಎ ನೇತೃತ್ವದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಂದಾಗಿ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಣಿಬೆನ್ನೂರು:ಮೆಕ್ಕೆಜೋಳ, ಭತ್ತ, ಕಬ್ಬಿಗೆ ಬೆಂಬಲ ಘೋಷಣೆ ಮಾಡಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಸೋಮವಾರ ಎನ್‌ಡಿಎ ಅಂಗಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಗರದ ಕೆಇಬಿ ದೇವಸ್ಥಾನದ ಬಳಿಯಿಂದ ಹೊರಟ ಪ್ರತಿಭಟನಾಕಾರರು ಬಸ್‌ ನಿಲ್ದಾಣದ ಬಳಿ ಸ್ವಲ್ಪ ಹೊತ್ತು ರಸ್ತೆ ತಡೆ ನಡೆಸಿದರು. ಆನಂತರ ಅಲ್ಲಿಂದ ಹೊರಟು ಹಲಗೇರಿ ಕ್ರಾಸ್, ಕುರುಬಗೇರಿ ಕ್ರಾಸ್ ಮಾರ್ಗವಾಗಿ ತಹಸೀಲ್ದಾರ್ ಕಚೇರಿಗೆ ತೆರಳಿದರು. ದಾರಿಯುದ್ದಕ್ಕೂ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಖಂಡಿಸಿ ಘೋಷಣೆಗಳನ್ನು ಕೂಗಿದರು. ಈ ಸಮಯದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಮೆಕ್ಕೆಜೋಳಕ್ಕೆ ₹ 2500, ಭತ್ತಕ್ಕೆ ₹ 2500, ಕಬ್ಬಿಗೆ ₹ 3500 ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಕೇಂದ್ರ ತೆರೆದು ಜಿಲ್ಲೆ ಮತ್ತು ತಾಲೂಕಿನ ರೈತರಿಗೆ ಬೆಂಬಲ ಬೆಲೆ ನೀಡಿ ಆರ್ಥಿಕವಾಗಿ ಅನುಕೂಲವಾಗುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳಬೇಕು. ಈ ಭಾಗದಲ್ಲಿ ಮೆಕ್ಕೆಜೋಳ ಮತ್ತು ಭತ್ತ ಬೆಳೆಗಾರರು ಹೆಚ್ಚಾಗಿದ್ದು, ಈಗಾಗಲೇ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರ ನೆರವಿಗೆ ಧಾವಿಸದೆ ವಿಳಂಬ ನೀತಿ ಅನುಸರಿಸುತ್ತಿದೆ. ರೈತರ ನ್ಯಾಯೋಜಿತ ಹೋರಾಟಕ್ಕೆ ಸೂಕ್ತ ರೀತಿಯಲ್ಲಿ ನೆರವಾಗುತಿಲ್ಲ ಹಾಗೂ ರೈತರಿಗೆ ಒಂದಿಲ್ಲೊಂದು ರೀತಿ ಅನ್ಯಾಯವೆಸಗುತ್ತಿರುವ ಕಾಂಗ್ರೆಸ ಸರ್ಕಾರವು ರೈತರು ಬೆಳೆದ ಬೆಳೆಗೆ ಸರಿಯಾದ ಬೆಂಬಲ ಬೆಲೆ ನೀಡದಿದ್ದರೆ ಮುಂದಿನ ದಿನಮಾನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ಮಾಜಿ ಶಾಸಕ ಅರುಣಕುಮಾರ ಪೂಜಾರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಡಾ. ಬಸವರಾಜ ಕೇಲಗಾರ, ನಗರ ಘಟಕ ಅಧ್ಯಕ್ಷ ಮಂಜುನಾಥ ಕಾಟಿ, ಗ್ರಾಮೀಣ ಘಟಕ ಅಧ್ಯಕ್ಷ ಸುಭಾಶ ಶಿರಗೇರಿ, ಸಂತೋಷಕುಮಾರ ಪಾಟೀಲ, ಪರಮೇಶ ಗೂಳಣ್ಣನವರ, ಚೋಳಪ್ಪ ಕಸವಾಳ, ಸೋಮಣ್ಣ ಗೌಡಶಿವಣ್ಣನವರ, ಅಮೋಘ ಬಾದಾಮಿ, ಎ.ಬಿ. ಪಾಟೀಲ, ಗದಿಗೆಪ್ಪ ಹೊಟ್ಟಿಗೌಡ್ರ, ಪ್ರಕಾಶ ಪೂಜಾರ, ಹನುಮಂತಪ್ಪ ದೇವರಗುಡ್ಡ, ಕಿರಣ ಅಂಗಡಿ, ಸಿದ್ದು ಚಿಕ್ಕಬಿದರಿ, ನಿಂಗರಾಜ ಕೋಡಿಹಳ್ಳಿ, ಅಶೋಕ ಪಾಸಿಗಾರ, ಜೆಡಿಎಸ್ ತಾಲೂಕಾಧ್ಯಕ್ಷ ನಿಂಗಪ್ಪ ಸತ್ಯಪ್ಪನವರ, ನಗರ ಘಟಕ ಅಧ್ಯಕ್ಷ ನಿಂಗಣ್ಣ ಹೊನ್ನಾಳ್ಳಿ, ಜಿಲ್ಲಾ ಕಾರ್ಯದರ್ಶಿ ಸಿದ್ದಣ್ಣ ಗುಡಿಮುದಣ್ಣನವರ, ಮಲ್ಲಿಕಾರ್ಜುನ ಹಲಗೇರಿ, ಮೌನೇಶ ಬಡಿಗೇರ, ಹನುಮಂತಪ್ಪ ಬಿಷ್ಟಣ್ಣನವರ, ರಮೇಶ ಮಾಕನೂರು, ಉಷಾ ಜಾಡಮಲಿ, ಲಕ್ಷ್ಮಿ ಕದರಮಂಡಲಗಿ, ಪೂಜಾ ದೈವಜ್ಞ, ಐಶ್ವರ್ಯಾ ಮಡಿವಾಳರ, ಈರಣ್ಣ ಕಡೂರು, ಶಿವು ಕರಿಯಪ್ಪನವರ, ರೈತ ಮುಖಂಡರಾದ ಈರಣ್ಣ ಹಲಗೇರಿ, ಹನುಮಂತಪ್ಪ ಕಬ್ಬಾರ, ಸುರೇಶ ಮೇಡ್ಲೇರಿ, ಹನುಮಂತಪ್ಪ ದೀವಿಗಿಹಳ್ಳಿ, ರಮೇಶ ನಂದಿಹಳ್ಳಿ, ನಾಗರಾಜ ಅಜ್ಜಜಗಣ್ಣನವರ, ಬೀರೇಶ ಬಾರ್ಕಿ, ಬಸವರಾಜ ಕೊಪ್ಪದ ಮತ್ತಿತರರು ಪ್ರತಿಭಟನೆಯಲ್ಲಿದ್ದರು.ಎತ್ತಿನ ಗಾಡಿಗಳೊಂದಿಗೆ ಪ್ರತಿಭಟನೆ:ಎತ್ತಿನ ಗಾಡಿಗಳೊಂದಿಗೆ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಎಲ್ಲರ ಗಮನ ಸೆಳೆಯಿತು. ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ರೈತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆ ಕೋರಿಕೆ : ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ