ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಜಾ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Oct 25, 2025, 01:02 AM IST
ಗ್ರಾಮಪಂಚಾಯತ್ ಅಧ್ಯಕ್ಷರ ವಿರುದ್ಧ ಪ್ರತಿಭಟನೆ | Kannada Prabha

ಸಾರಾಂಶ

ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸ ವಜಾಗೊಳಿಸುವಂತೆ ಮತ್ತು ಭ್ರಷ್ಟಾಚಾರ ಕ್ಕೆ ಬೆಂಬಲವಾಗಿ ನಿಂತ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಪೆರುವಾಯಿ ಗ್ರಾಮಸ್ಥರಿಂದ ಮಂಗಳವಾರ ಗ್ರಾ.ಪಂ.ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ವೃದ್ಧ ಕೃಷಿಕರೋರ್ವರ ಕೆಲಸ ಮಾಡಿಕೊಡುವ ಸಲುವಾಗಿ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸ ವಜಾಗೊಳಿಸುವಂತೆ ಮತ್ತು ಭ್ರಷ್ಟಾಚಾರ ಕ್ಕೆ ಬೆಂಬಲವಾಗಿ ನಿಂತ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಪೆರುವಾಯಿ ಗ್ರಾಮಸ್ಥರಿಂದ ಮಂಗಳವಾರ ಗ್ರಾ.ಪಂ.ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.ಬಳಿಕದ ಬೆಳವಣಿಗೆಯಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯರ ಉಪಸ್ಥಿತಿಯಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಅವರಿಗೆ ಮನವಿ ನೀಡಿ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಯಿತು. ಮಾಜಿ ಶಾಸಕರಾದ ಸಂಜೀವ ಮಠಂದೂರು ಮಾತನಾಡಿ, ವಿಧಾನ ಸೌಧದಿಂದ ಗ್ರಾಮ ಸೌಧದ ತನಕ ಭ್ರಷ್ಟಾಚಾರ ನಡೆಯುತ್ತಿದೆ ಎನ್ನುವುದಕ್ಕೆ ಇಲ್ಲಿನ ಘಟನೆಯೇ ಪ್ರತ್ಯಕ್ಷ ಸಾಕ್ಷಿ. ಕರ್ನಾಟಕದಲ್ಲಿ ಜನ ಅಭಿವೃದ್ಧಿಯಿಲ್ಲದೆ, ಹೊಂಡಗಳಿಂದ ಕೂಡಿದ ರಸ್ತೆಯಲ್ಲಿ ಓಡಾಡುವ ಸ್ಥಿತಿಯಿದೆ ಎಂದರು.

ಹಿಂದೂ ಜಾಗರಣ ವೇದಿಕೆಯ ಮುಂಖಡ ನರಸಿಂಹ ಮಾಣಿ ಮಾತನಾಡಿ, ಸರ್ಕಾರದ ಸವಲತ್ತುಗಳನ್ನು ಅಧಿಕಾರಿಗಳ ಜತೆಗೆ ಸೇರಿಕೊಂಡು ಅಧ್ಯಕ್ಷರು ನುಂಗಿ ೧೪ ದಿನ ನ್ಯಾಯಾಂಗ ಬಂಧನ ಅನುಭವಿಸಿದ್ದಾರೆ. ಪ್ರಕರಣಕ್ಕೆ ಸಹಕಾರ ನೀಡಿರುವ ಬಂಟ್ವಾಳ ಇಒ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪುಣಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಬಾಳೆಕಲ್ಲು, ವಿಶ್ವ ಹಿಂದು ಪರಿಷತ್ ಪ್ರಮುಖ್ ಅಶೋಕ್ ಮಾಣಿಲ, ಪ್ರಮುಖರಾದ ಹರಿಪ್ರಸಾದ್ ಯಾದವ್, ಗಣೇಶ್ ಭಟ್, ಅಜಿತ್ ಭಟ್, ಮನೀಷ್, ಗೋಪಾಲ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜಯರಾಮ ಆಳ್ವ ಬದಿಯಾರು ಸ್ವಾಗತಿಸಿದರು. ಯತೀಶ್ ಪೆರುವಾಯಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೋಕ್ಷಿತ್ ಪೆರುವಾಯಿ ವಂದಿಸಿದರು.ಗ್ರಾ.ಪಂ. ಪಿಡಿಒಗೆ ಮನವಿ ಸಲ್ಲಿಕೆ

ಬೆಳಗ್ಗೆ ಪ್ರತಿಭಟನೆ ಆರಂಭಗೊಳಿಸಿದ ಪ್ರತಿಭಟನಾಕಾರರು ಸ್ಥಳಕ್ಕೆ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆಗಮಿಸಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು. ಬಳಿಕ ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಸ್ಥಳಕ್ಕೆ ಆಗಮಿಸಿದರಾದರೂ, ಅವರ ಮೇಲೆಯೇ ಆರೋಪ ಮಾಡಿ ಪ್ರತಿಭಟನೆ ನಡೆಸಿದ ಕಾರಣ ಅವರು ಮನವಿ ಸ್ವೀಕರಿಸುವುದಿಲ್ಲ ಎಂದರು. ಬಳಿಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೀಪಕ್‌ಗೆ ಮನವಿ ಸಲ್ಲಿಸಿ ಪ್ರತಿಭಟನೆ ಕೊನೆಗೊಳಿಸಿದರು‌.

PREV

Recommended Stories

ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
ಕೆಆರ್‌ಎಸ್‌ ವರ್ಷದಲ್ಲಿ 3ನೇ ಬಾರಿ ಭರ್ತಿ-ಬೆಂಗಳೂರಿಗಿಲ್ಲ ಜಲ ಸಂಕಷ್ಟ: ಡಿಸಿಎಂ