ದಲಿತ ಕಾಲೋನಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವಂತೆ ಪ್ರತಿಭಟನೆ

KannadaprabhaNewsNetwork |  
Published : Aug 26, 2025, 01:03 AM IST
25ಕೆಎಂಎನ್ ಡಿ16 | Kannada Prabha

ಸಾರಾಂಶ

ಅರಳಕುಪ್ಪೆ ಗ್ರಾಮದ ದಲಿತ ಕಾಲೋನಿಯ 35ಕ್ಕೂ ಅಧಿಕ ಕುಟುಂಬಗಳು 30 ವರ್ಷಕ್ಕೂ ಅಧಿಕ ವರ್ಷಗಳಿಂದ ವಾಸಿಸುತ್ತಿದ್ದಾರೆ. ಕಾಲೋನಿಗೆ ಎಲ್ಲಾ ಮೂಲಸೌಕರ್ಯ ಒದಗಿಸಿಕೊಟ್ಟರೂ ಸಹ ಮನೆಗಳಿಗೆ ಇದುವರೆಗೂ ಹಕ್ಕುಪತ್ರ ವಿತರಣೆ ಮಾಡಿಲ್ಲ. ಇದರಿಂದ ನಿವಾಸಿಗಳು ಮನೆಗಳನ್ನು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಅರಳಕುಪ್ಪೆ ಗ್ರಾಮದ ದಲಿತ ಕಾಲೋನಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ, ಮನೆಗಳನ್ನು ಖಾತೆ ಮಾಡಿಸಿಕೊಡಬೇಕು ಎಂದು ಆಗ್ರಹಿಸಿ ನಿವಾಸಿಗಳು ಸೋಮವಾರ ಪಟ್ಟಣದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.

ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಮುಖಂಡ ಅರಳಕುಪ್ಪೆ ಪ್ರಶಾಂತ್ ನೇತೃತ್ವದಲ್ಲಿ ಆಗಮಿಸಿ ನಿವಾಸಿಗಳು ಪಿಡಿಒ ವಿರುದ್ಧ ಘೋಷಣೆಕೂಗಿದರು.

ಗ್ರಾಮದ ದಲಿತ ಕಾಲೋನಿಯ 35ಕ್ಕೂ ಅಧಿಕ ಕುಟುಂಬಗಳು 30 ವರ್ಷಕ್ಕೂ ಅಧಿಕ ವರ್ಷಗಳಿಂದ ವಾಸಿಸುತ್ತಿದ್ದಾರೆ. ಕಾಲೋನಿಗೆ ಎಲ್ಲಾ ಮೂಲಸೌಕರ್ಯ ಒದಗಿಸಿಕೊಟ್ಟರೂ ಸಹ ಮನೆಗಳಿಗೆ ಇದುವರೆಗೂ ಹಕ್ಕುಪತ್ರ ವಿತರಣೆ ಮಾಡಿಲ್ಲ.

ಇದರಿಂದ ನಿವಾಸಿಗಳು ಮನೆಗಳನ್ನು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ವೇ ನಂವರ್ 14/4ರಲ್ಲಿ 3 ಎಕರೆ 28 ಗುಂಟೆ ಜಮೀನಿದ್ದು, ಇದು ಹರಿಜನ ಕಾಲೋನಿ ಎಂಬುದಾಗಿಯೇ ಆರ್‌ಟಿಸಿಯಲ್ಲಿ ಬರುತ್ತಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ತ್ವರಿತವಾಗಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಿ ನಮಗೆ ಹಕ್ಕುಪತ್ರ ವಿತರಣೆ ಮಾಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಮನವಿ ಸಲ್ಲಿಸಿದರು. ಬಳಿಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಹರಿಜನ ಕಾಲೋನಿ ಎಂಬುದಾಗಿ ಸರ್ವೇ ನಂಬರ್ ಇರುವುದನ್ನು ವಸತಿ ನಿಲಯ ಎಂಬುದಾಗಿ ಆರ್‌ಟಿಸಿ ಗುರುತಿಸಿ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಅರಳಕುಪ್ಪೆ ಗ್ರಾಮದ ಪ್ರಶಾಂತ್, ರಮೇಶ್, ಅ ಕುಮಾರ್, ಕೀಶೋರ್, ಬಸವರಾಜು, ಚಲುವಾರಾಜು, ವೆಂಕಟರಾಮು, ಕಾಳಯ್ಯ, ಮಂಗಳಗೌರಮ್ಮ, ಮಂಜುನಾಥ, ಶಂಕರ್, ಸ್ವಾಮಣ್ಣ ಸೇರಿದಂತೆ ಹಲವರು ಇದ್ದರು.

ಇಂದು ರೈತರಿಗೆ ತರಬೇತಿ ಕಾರ್ಯಾಗಾರ

ಮದ್ದೂರು:

ತಾಲೂಕಿನ ಕೆಸ್ತೂರು ಗ್ರಾಮದ ಸಂತೆ ಮೈದಾನದಲ್ಲಿ ಆ.26ರಂದು ಆತಗೂರು ಹೋಬಳಿ ರೈತರಿಗೆ ಭತ್ತ, ರಾಗಿಹಾಗೂ ಕಬ್ಬು ಬೆಳೆಗಳ ಇಳುವರಿ ಹೆಚ್ಚಿಸುವ ಸುಧಾರಿತ ಬೇಸಾಯ, ತಾಂತ್ರಿಕತೆ ಅಳವಡಿಸಿಕೊಳ್ಳುವುದು ಮತ್ತು ರಸಗೊಬ್ಬರ ಸಮರ್ಪಕ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಅಧಿಕಾರಿ ಎಸ್. ದಯಾನಂದ ಕುಮಾರ್ ತಿಳಿಸಿದ್ದಾರೆ.

ಕೃಷಿ ಇಲಾಖೆ, ವಿ.ಸಿ.ಫಾರಂ ನ ಕೃಷಿ ವಿಜ್ಞಾನ ವಿದ್ಯಾಲಯ, ಕೃಷಿ ತರಬೇತಿ ಕೇಂದ್ರ ಹಾಗೂ ಕೃಷಿ ಪರಿಕರ ಮಾರಾಟಗಾರರ ಸಹ ಯೋಗದಲ್ಲಿ ನಡೆಯುವ ಕಾರ್ಯಾಗಾರಕ್ಕೆ ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ ಕೃಷಿ ನಿರ್ದೇಶಕ ಆರ್.ಮುನೇಗೌಡ, ಸಹಾಯಕ ಕೃಷಿ ನಿರ್ದೇಶಕಿ ಎಚ್‌.ಜಿ.ಪ್ರತಿಭಾ ಹಾಗೂ ಆತಗೂರು ಹೋಬಳಿಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಾರ್ಯಾಗಾರದಲ್ಲಿ ಆತಗೂರು ಹೋಬಳಿ ರೈತರು ಯಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಳ್ಳುವಂತೆ ದಯಾನಂದ ಕುಮಾರ್ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಆತ್ಮನಿರ್ಭರ ಭಾರತ’ಕ್ಕೆ ಅಮೆಜಾನ್ ಪುಷ್ಟಿ
21ರಿಂದ ರಾಜ್ಯಾದ್ಯಂತ ಪಲ್ಸ್‌ ಪೋಲಿಯೋ: ಗುಂಡೂರಾವ್‌