ಕನ್ನಡಪ್ರಭ ವಾರ್ತೆ ಮಳವಳ್ಳಿ
ಸಂಘದ ತಾಲೂಕು ಘಟಕದ ಅಧ್ಯಕ್ಷ ಎನ್.ಎಲ್.ಭರತ್ ರಾಜ್ ಮಾತನಾಡಿ, ಅಗ್ರಿಗೋಲ್ಡ್ ಕಂಪನಿಗೆ ಸಾಕಷ್ಟು ಜನ ಹಣ ಕಟ್ಟಿ ಮೋಸ ಹೋಗಿದ್ದಾರೆ. ಅವರಿಗೆ ಬಡ್ಡಿ ಸಹಿತ ಹಣ ಕೊಡಿಸುವ ನಿಟ್ಟಿನಲ್ಲಿ ಅಗ್ರಿಗೋಲ್ಡ್ ಕಂಪನಿಯ ಆಸ್ತಿಯನ್ನು ಗೋಟ್ಟುಗೋಲು ಹಾಕಿಕೊಂಡು ಫಲಾನುಭವಿಗಳಿಗೆ ಹಣ ಕೊಡಿಸಬೇಕು. ರಾಷ್ಟ್ರೀಯ ಹೆದ್ದಾರಿಯ ಸಲಾಂ ಬೋರೆ ಬಳಿ ಎಲ್ಲ ಸಾರಿಗೆ ಬಸ್‌ಗಳ ನಿಲುಗಡೆ ಮಾಡಬೇಕೆಂದರು.
ರಾಜಕೀಯ ಪಕ್ಷಗಳು ತಮ್ಮ ಆಡಳಿತಕ್ಕಾಗಿ ಸುಳ್ಳು ಘೋಷಣೆ ನೀಡುತ್ತಿದ್ದಾರೆ. ಅಭಿವೃದ್ಧಿ ಬಗ್ಗೆ ಚಿಂತನೆ ಮಾಡುತ್ತಿಲ್ಲ. ಇದರ ಜೊತೆಗೆ ಗ್ರಾಮಕ್ಕೆ ಪೂರೈಕೆಯಾಗುತ್ತಿರುವ ನೀರು ಶುದ್ಧೀಕರಣಗೊಳ್ಳದ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಜನರಿಗೆ ಶುದ್ಧೀಕರಿಸಿದ ನೀರು ನೀಡಬೇಕು. ಗೇಟ್ ಬಳಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿದರು.ರೊಟ್ಟಿಕಟ್ಟೆವರೆಗೆ ರಸ್ತೆ ಬದಿ ಬೀದಿ ದೀಪ ಅಳವಡಿಸಿ ರಸ್ತೆಗೆ ಹಂಪ್ಸ್ ಹಾಕಬೇಕು. ಕಾಡುಪ್ರಾಣಿಗಳು ಹಾಗೂ ಕಳ್ಳರ ಹಾವಳಿ ತಪ್ಪಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಎಸ್.ವಿ.ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು. ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ರಸ್ತೆ ಬದಿ ವ್ಯಾಪಾರ ತೆರವು ಖಂಡಿಸಿ ಬೀದಿ ಬದಿ ವ್ಯಾಪಾರಸ್ಥರ ಪ್ರತಿಭಟನೆ
ರಸ್ತೆ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಪೋಲಿಸರು ಮುಂದಾಗಿದ್ದಾರೆ ಎಂದು ಆರೋಪಿಸಿ ಹತ್ತಾರು ಬೀದಿ ಬದಿ ವ್ಯಾಪಾರಿಗಳು ಪಟ್ಟಣದ ಪುರಸಭೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.ಪಟ್ಟಣದ ಹಲವು ವೃತ್ತಗಳ ಬಳಿ ನಡೆಯುತ್ತಿರುವ ಪುಟ್‌ಪಾತ್ ಮೇಲಿನ ವ್ಯಾಪಾರದಿಂದ ವಾಹನ ಹಾಗೂ ಜನರ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಪಟ್ಟಣದ ಪೊಲೀಸ್ ಠಾಣೆಯ ಪ್ರಭಾರ ಸಿಪಿಐ ಬಿ.ಎಸ್.ಶ್ರೀಧರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿ ಕೆಲವೆಡೆ ಬೀದಿ ದೀಪ ವ್ಯಾಪಾರವನ್ನು ತೆರವುಗೊಳಿಸಿದರು.
ಜನವಾದಿ ಮಹಿಳಾ ಸಂಘಟನೆ ಸುಶೀಲಾ ಮಾತನಾಡಿ, ಪುರಸಭೆಯಿಂದ ಅನುಮತಿ ಪಡೆದು ಗುರುತಿನ ಚೀಟಿ ಪಡೆಯಲಾಗಿದೆ. ಹಲವೆಡೆ ಹತ್ತಾರು ಮಂದಿ ಬೀದಿ ಬದಿ ವ್ಯಾಪಾರ ನಡೆಸುತ್ತಿದ್ದಾರೆ. ಅಲ್ಲದೇ, ಪುರಸಭೆಗೆ ಶುಲ್ಕವನ್ನು ಸಹ ಪಾವತಿಸಲಾಗುತ್ತಿದೆ. ಆದರೆ, ಏಕಾಏಕಿ ಸೋಮವಾರ ಬೆಳಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿ ವ್ಯಾಪಾರಿಗಳು ಇಟ್ಟಿದ್ದ ವಸ್ತುಗಳನ್ನು ತುಂಬಿಕೊಂಡು ಹೋಗಿದ್ದಾರೆ ಎಂದು ಆರೋಪಿಸಿದರು.