ಕನ್ನಡಗರಿಗೆ ಉದ್ಯೋಗಾವಕಾಶ ನೀಡಿ: ಯಲಬುರ್ಗಾದಲ್ಲಿ ಕರವೇ ಪ್ರತಿಭಟನೆ

KannadaprabhaNewsNetwork |  
Published : Jul 21, 2024, 01:23 AM IST
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ ಶೆಟ್ಟಿ) ಬಣದ ತಾಲೂಕು ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಕರ್ನಾಟಕದಲ್ಲಿ ಇರುವ ಖಾಸಗಿ, ಅರೆ ಖಾಸಗಿ ಕಂಪನಿಗಳಲ್ಲಿ ಮೂಲ ಸ್ಥಳೀಯ ಕನ್ನಡಿಗರಿಗೆ ಶೇ. ೭೫ರಷ್ಟು ಉದ್ಯೋಗ ಮೀಸಲಾತಿ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ ಶೆಟ್ಟಿ) ಬಣದ ತಾಲೂಕು ಘಟಕದಿಂದ ಯಲಬುರ್ಗಾ ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಯಲಬುರ್ಗಾ: ಕರ್ನಾಟಕದಲ್ಲಿ ಇರುವ ಖಾಸಗಿ, ಅರೆ ಖಾಸಗಿ ಕಂಪನಿಗಳಲ್ಲಿ ಮೂಲ ಸ್ಥಳೀಯ ಕನ್ನಡಿಗರಿಗೆ ಶೇ. ೭೫ರಷ್ಟು ಉದ್ಯೋಗ ಮೀಸಲಾತಿ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ ಶೆಟ್ಟಿ) ಬಣದ ತಾಲೂಕು ಘಟಕದಿಂದ ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕರವೇ ತಾಲೂಕಾಧ್ಯಕ್ಷ ಶಿವಕುಮಾರ ನಾಗನಗೌಡ್ರ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿ, ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಾತಿ ನೀಡುವ ವಿಧೇಯಕವನ್ನು ವಿರೋಧಿಸುತ್ತಿರುವ ನಾಡ ವಿರೋಧಿ ಉದ್ಯಮಿಗಳ ನಡೆಯನ್ನು ನಮ್ಮ ಕರವೇ ಬಣ ತೀವ್ರವಾಗಿ ಖಂಡಿಸುತ್ತೇವೆ. ಕರ್ನಾಟಕ ರಾಜ್ಯದ ಕೈಗಾರಿಕೆ, ಕಾರ್ಖಾನೆ ಹಾಗೂ ವಿವಿಧ ಉದ್ಯಮಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ವಿಧಯೇಕ ೨೦೨೪ ಮಂಡನೆ ಮಾಡಿ ಒಪ್ಪಿಗೆ ಪಡೆಯಲಾಗಿತ್ತು. ಆದರೆ ಕೇವಲ ಸಿ ಮತ್ತು ಡಿ ದರ್ಜೆಯ ಉದ್ಯೋಗಗಳಲ್ಲಿ ಶೇ. ೧೦೦ರಷ್ಟು ಸ್ಥಳೀಯರಿಗೆ ಮೀಸಲು ಕಲ್ಪಿಸಬೇಕು. ಇದನ್ನು ನಿರ್ವಹಣೆ ಮಾಡಲು ನೋಡಲ್ ಏಜೆನ್ಸಿ ಸ್ಥಾಪಿಸಬೇಕು ಎಂದು ಹೇಳಿರುವುದು ಸರಿಯಲ್ಲ. ಮುಖ್ಯಮಂತ್ರಿ ಯಾವುದೇ ಒತ್ತಾಯಕ್ಕೆ ಮಣಿಯದೇ ಮತ್ತು ಕೆಲವು ಸಂಪುಟ ಸಚಿವರ ಒತ್ತಾಯಕ್ಕೂ ಮಣಿಯದೇ ಕನ್ನಡಿಗರಿಗೆ ಶೇ. ೭೫ ರಷ್ಟು ಮಿಸಲಾತಿಯನ್ನು ಕೂಡಲೇ ಜಾರಿಗೊಳಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಕನ್ನಡಪರ ಹೋರಾಟಗಾರ ಸ. ಶರಣಪ್ಪ ಪಾಟೀಲ ಮಾತನಾಡಿ, ಕನ್ನಡಿಗರಿಗೆ ಉದ್ಯೋಗಾವಕಾಶ ನೀಡಲೇಬೇಕೆಂದು ಹೇಳಿದರು. ಬಳಿಕ ಗ್ರೇಡ್-೨ ತಹಸೀಲ್ದಾರ್ ವಿಜಯಕುಮಾರ ಗುಂಡೂರು ಮನವಿ ಪತ್ರ ಸ್ವೀಕರಿಸಿದರು.

ತಾಲೂಕು ಉಪಾಧ್ಯಕ್ಷ ರಾಮನಗೌಡ ಪಾಟೀಲ್, ತಾಲೂಕು ಕಾರ್ಯದರ್ಶಿ ಶಿವಕುಮಾರ ನಿಡಗುಂದಿ, ಜಿಲ್ಲಾ ವಿದ್ಯಾರ್ಥಿ ಘಟಕ ಅಧ್ಯಕ್ಷ ಭೀಮೇಶ್ ಬಂಡಿವಡ್ಡರ, ಶ್ರೀಧರ ಸುರಕೊಡ, ಮಂಜುನಾಥ, ಶ್ರೀಕಾಂತ, ಘನವಂತೇಶ ಚನ್ನದಾಸರ್, ವೀರೇಶ ಬಳಗೇರಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು