ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪದಾಧಿಕಾರಿಗಳು ಹಾಗೂ ನಿವೇಶನ ರಹಿತರು ಘೋಷಣೆಗಳನ್ನು ಕೂಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಸಿಪಿಐ(ಎಂಎಲ್)ನ ರಾಜ್ಯ ಸಮಿತಿ ಸದಸ್ಯ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ನಿವೇಶನ ರಹಿತ ಆದಿವಾಸಿಗಳನ್ನು ಲೈನ್ ಮನೆಯಿಂದ ಬಿಡುಗಡೆಗೊಳಿಸಿ ಸ್ವಂತ ಸೂರು ಮತ್ತು ಕೃಷಿ ಭೂಮಿ ನೀಡಬೇಕು, ಅಕ್ರಮ ಸಕ್ರಮ ಯೋಜನೆಡಿಯಲ್ಲಿ ಸಲ್ಲಿಸಿರುವ 50, 53, 57, 94ಸಿಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು, ಉಳ್ಳವರಿಗೆ ಭೂಮಿ ಗುತ್ತಿಗೆ ನೀಡುವ ಆದೇಶ ರದ್ದುಗೊಳಿಸಬೇಕು, ಅಕ್ರಮ ಒತ್ತುವರಿ ಭೂಮಿ ತೆರವುಗೊಳಿಸಬೇಕು. ಪ್ರತಿ
ನಾಗರಹೊಳೆ ಅರಣ್ಯದ ಮಧ್ಯ ಭಾಗದಲ್ಲಿರುವ ಆದಿವಾಸಿಗಳಿಗೆ ಅದೇ ಅರಣ್ಯದಂಚಿನಲ್ಲಿ ಪುನರ್ ವಸತಿ ಕಲ್ಪಿಸಬೇಕು, ಆದಿವಾಸಿ ಪಾರಂಪರಿಕ ಸಮುದಾಯ ಅರಣ್ಯ ಹಕ್ಕು ಕಾಯಿದೆ ತಕ್ಷಣ ಜಾರಿಗೆ ತರಬೇಕು, ನಿರುದ್ಯೋಗಿಗಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮೂಲಕ ಹೆಚ್ಚಿನ ಸೌಲಭ್ಯಗಳನ್ನು ನೀಡಬೇಕು, ಆದಿವಾಸಿ ಪುನರ್ ವಸತಿ ಕೇಂದ್ರ ಬ್ಯಾಡಗೊಟ್ಟ ಹಾಗೂ ಬಸವನಳ್ಳಿಯಲ್ಲಿ ನಡೆದಿರುವ ಅಕ್ರಮ ಮತ್ತು ಅಪೂರ್ಣಗೊಂಡಿರುವ ಕಾಮಗಾರಿಯನ್ನು ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.
ಪಕ್ಷದ ರಾಜ್ಯ ಸಮಿತಿ ಸದಸ್ಯ ಜೆ.ಎಂ.ಸುರೇಶ್, ಜಿಲ್ಲಾ ಕಾರ್ಯದರ್ಶಿ ವೈ.ಎಂ.ಸುರೇಶ್,ಆದಿವಾಸಿಗಳಾದ ಎಚ್.ಜೆ.ಪ್ರಕಾಶ್, ವೈ.ಎಂ.ಮೋಹನ್, ರಾಧಾ, ನಳಿನಾಕ್ಷಿ, ಬಾಬು, ಮುತ್ತ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.