ಬಂಗಾರಪೇಟೆ: ಅಯೋಧ್ಯ ವೈಶ್ಯ ನಾಮಧಾರಿ ನಗರ್ತ ಸಮುದಾಯಕ್ಕೆ 2ಎ ಜಾತಿ ಪ್ರಮಾಣ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ಸಮುದಾಯದ ಮುಖಂಡರು ಪ್ರತಿಭಟಿಸಿ ತಹಸೀಲ್ದಾರ್ ಸುಜಾತ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಸಮುದಾಯದ ಮುಖಂಡರು ಮಾತನಾಡಿ, ಸಮುದಾಯಕ್ಕೆ 2ಎ ಜಾತಿ ಪ್ರಮಾಣ ಪತ್ರ ವಿತರಣೆ ಮಾಡಬೇಕು ಎಂಬುದು ಬಹು ವರ್ಷಗಳ ಬೇಡಿಕೆಯಾಗಿತ್ತು. ಈ ಮೊದಲಿನಿಂದಲೂ ಮನವಿ ನೀಡುವುದು, ಹೋರಾಟ ಮಾಡಿಕೊಂಡಲೇ ಬರಲಾಗುತ್ತಿದೆ ಹೊರತು, ಸ್ಪಂದನೆ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.
ಎಲ್ಲಾ ಹೆಸರುಗಳು ಒಂದೇ ಸಮುದಾಯವನ್ನು ಸೂಚಿಸುತ್ತವೆ, ವರ್ಗದವರ ಜಾತಿಯನ್ನು ಅಧಿಕೃತ ಗೆಜೆಟ್ ಪಟ್ಟಿಯಲ್ಲಿ ಸರ್ಕಾರ ಸೇರಿಸದಿರುವುದರಿಂದ ಪ್ರಮಾಣಪತ್ರ ಪಡೆದುಕೊಳ್ಳಲು ಕಷ್ಟವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ವಿದ್ಯಾರ್ಥಿ ವೇತನ, ಶೈಕ್ಷಣಿಕ, ಉದ್ಯೋಗ ವಿದ್ಯಾರ್ಥಿನಿಲಯಕ್ಕೆ ನೋಂದಣಿ, ಶುಲ್ಕ ವಿನಾಯಿತಿ ಕ್ಷೇತ್ರಕ್ಕೆ ವಂಚನೆ ಸೇರಿದಂತೆ ಯಾವುದೇ ಸರ್ಕಾರಿ ನೆರವು ದೊರೆಯುತ್ತಿಲ್ಲ, ಇದರಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ನಂತರ ನಿಲ್ಲಿಸುವ ಪರಿಸ್ಥಿತಿ ಉಂಟಾಗಿದೆ, ಜಾತಿ ಪ್ರಮಾಣಪತ್ರದ ಕೊರತೆಯಿಂದ ಮುಂದಿನ ಶಿಕ್ಷಣದಲ್ಲಿ ಯಾವುದೇ ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗಲಿಲ್ಲ, ಜಿಲ್ಲಾಧಿಕಾರಿಗಳು ಹಾಗೂ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.ಈ ವೇಳೆ ಬೂದಿಕೋಟೆಯ ನಗರ್ತರ ಪೇಟೆಯ ಕುಲಭಾಂದವರು ಹಾಜರಿದ್ದರು.