ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

KannadaprabhaNewsNetwork |  
Published : Feb 05, 2025, 12:31 AM IST
 | Kannada Prabha

ಸಾರಾಂಶ

ಪಟ್ಟಣದ ಸಂದೀಪ ನಗರದ ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೆ ಜಾಗವನ್ನು ಖಾಯಂಗೊಳಿಸಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಪದಾಧಿಕಾರಿಗಳು, ಸಂದೀಪ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ನೇತೃತ್ವದಲ್ಲಿ ಸಂದೀಪ ನಗರದ ನಿವಾಸಿಗಳ ಮನವಿ

ಕನ್ನಡಪ್ರಭ ವಾರ್ತೆ ಕುಷ್ಟಗಿ

ಪಟ್ಟಣದ ಸಂದೀಪ ನಗರದ ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೆ ಜಾಗವನ್ನು ಖಾಯಂಗೊಳಿಸಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಪದಾಧಿಕಾರಿಗಳು, ಸಂದೀಪ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಸಂಘಟನೆಯ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಶಂಕರ್ ಕಲಬಾವಿ ಮಾತನಾಡಿ, ಪಟ್ಟಣದ ಗಜೇಂದ್ರಗಡ ರಸ್ತೆಯಲ್ಲಿರುವ ಸಂದೀಪ ನಗರದಲ್ಲಿ ನೂರಾರು ಕುಟುಂಬಗಳು ಸುಮಾರು ಮೂವತ್ತು ವರ್ಷಗಳಿಗಿಂತಲೂ ಅಧಿಕ ಸಮಯದಿಂದ ಸರಕಾರಿ ಜಾಗದಲ್ಲಿ ವಾಸ ಮಾಡುತ್ತಿದ್ದು, ಕೆಲಕಾಣದ ಶಕ್ತಿಗಳು ಸರಕಾರಿ ಜಾಗವನ್ನು ಕಬಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಹೀಗಾಗಿ, ಅಧಿಕಾರಿಗಳು ಹಕ್ಕುಪತ್ರ ವಿತರಣೆ ಮಾಡಬೇಕು ಎಂದರು.

ಕೆಲವರು ಇದು ಸರಕಾರಿ ಆಸ್ತಿಯಾಗಿದ್ದು, ನೀವು ಇಲ್ಲಿ ಇರಬಾರದು ಎಂದು ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ನಿವಾಸಿಗಳು ಊಟ, ನಿದ್ದೆ ಮಾಡದೆ ಕಂಗಾಲಾಗಿದ್ದಾರೆ. ಸಂಬಂದಪಟ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಶೀಘ್ರದಲ್ಲಿ ಹಕ್ಕು ಪತ್ರಗಳನ್ನು ನೀಡುವ ವ್ಯವಸ್ಥೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಸಂತೋಷ ತೋಟದ ಮಾತನಾಡಿ, ಕುಷ್ಟಗಿ ಪಟ್ಟಣದ ಗಜೇಂದ್ರಗಡ ರಸ್ತೆಯಲ್ಲಿ ಇರುವ ಸಂದೀಪ ನಗರದ ಸರ್ವೆ ನಂ.190/5 ಒಟ್ಟು 6ಎಕರೆ 01ಗುಂಟೆ ಜಮೀನನ್ನು ರಾಜ್ಯಪಾಲರು ಕರ್ನಾಟಕ ಸರಕಾರ ಹೆಸರಿನಲ್ಲಿ ಖರೀದಿಸಿ, ಆಶ್ರಯ ಯೋಜನೆಯಡಿ ನಿವೇಶನಗಳನ್ನು ರಚಿಸಲಾಗಿದೆ. ನಂತರ ಖಾಲಿ ಉಳಿದ ಜಾಗದಲ್ಲಿ ನಿರ್ಗತಿಕ ಕಡು ಬಡವರು ಮನೆಗಳನ್ನು, ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸವಾಗಿರುತ್ತಾರೆ. ಈಗ ಪುರಸಭೆಯ ಕೆಲ ಸಿಬ್ಬಂದಿ ಹಾಗೂ ಕೆಲ ಕಿಡಿಗೇಡಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿರುತ್ತಾರೆ. ಇದರಿಂದ ಆ ಜಾಗದಲ್ಲಿ ನೆಲೆಸಿರುವ ಕಡುಬಡವರಿಗೆ ಅನ್ಯಾಯವಾಗಲಿದೆ. ನ್ಯಾಯ ಒದಗಿಸಬೇಕು, ಕಡುಬಡವರಿಗೆ ಹಕ್ಕುಪತ್ರ ನೀಡಬೇಕು ಎಂದರು.

ಹೈದರಾಬಾದ್ ಕರ್ನಾಟಕ ಯುವ ಸಂಘಟನೆಯ ಅಧ್ಯಕ್ಷ ಬಸವರಾಜ ಗಾಣಿಗೇರ ಮಾತನಾಡಿ, ಸುಮಾರು 30 ವರ್ಷಗಳಿಂದ ಈ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ. ಇವರು ಕಡುಬಡತನದ ಕುಟುಂಬದವರು. ಒಂದೊತ್ತಿನ ಊಟಕ್ಕೂ ಪರದಾಡುವ ಸ್ಥಿತಿಯಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದರು.

ಮನವಿ ಸ್ವೀಕರಿಸಿದ ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಮಾತನಾಡಿ, ಮನವಿಯನ್ನು ಜಿಲ್ಲಾಧಿಕಾರಿ ಗಮನಕ್ಕೆ ತರುವ ಮೂಲಕ ಸೂಕ್ತ ಕ್ರಮಕ್ಕೆ ಮುಂದಾಗುತ್ತೇನೆ ಎಂದರು.

ಪ್ರತಿಭಟನೆ:

ಕುಷ್ಟಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನೂರಾರು ಜನರು ಘೋಷಣೆಗಳನ್ನು ಕೂಗುತ್ತ ಬಸವೇಶ್ವರ ವೃತ್ತ, ಪುರಸಭೆಯ ಕಾರ್ಯಾಲಯ, ತಹಸೀಲ್ದಾರ್‌ ಕಾರ್ಯಾಲಯದ ವರೆಗೆ ಪ್ರತಿಭಟನೆ ನಡೆಸಿದರು. ಇದೆ ವೇಳೆ ಇಬ್ಬರು ಮಹಿಳೆಯರು ತಲೆಸುತ್ತು ಬಂದು ಕುಸಿದುಬಿದ್ದರು. ನಂತರ ಆಸ್ಪತ್ರೆಗೆ ಕರೆದುಕೊಂಡು ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಮಾಂತೇಶ ಅಮರಾವತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಮನೂರಪ್ಪ, ಕುಷ್ಟಗಿ ತಾಲೂಕು ಅಧ್ಯಕ್ಷ ಮರಿಯಪ್ಪ ಹಕ್ಕಲ, ಸಿದ್ದಪ್ಪ ಕಲಾಲಬಂಡಿ, ದುರುಗೇಶ ನವಲಳ್ಳಿ, ದುರುಗೇಶ ಜಾಲಿಮರ, ಈರವ್ವ ಶಾಕಾಪೂರ, ಮಹೇಶ ಹಿರೇಮನಿ, ಶಿವಪ್ಪ ಡಂಬರ, ರೇಣುಕಮ್ಮ ಅಳ್ಳಿ, ಬಾಳಪ್ಪ ಕಂದಕೂರು, ಹೊನ್ನಪ್ಪ ಭೋವಿ, ದುರುಗೇಶ ಗುಳಗುಳಿ ಸೇರಿದಂತೆ ನೂರಾರು ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!