ಕನ್ನಡಪ್ರಭ ವಾರ್ತೆ ಸಕಲೇಶಪುರ
ಮಂಗಳವಾರ ತಾಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು ವಸತಿ ಯೋಜನೆಯಡಿ ಮನೆಗಳು ಬೇಕಾದರೆ ಹಣ ನೀಡಲೇ ಬೇಕು. ಸ್ವಪಕ್ಷದ ನಾಯಕರೆ ಆರೋಪಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ತನಿಖೆಗೆ ಮುಂದಾಗಿದೆ. ಆದ್ದರಿಂದ ಸರ್ಕಾರದ ಒಂದು ಭಾಗವಾಗಿರುವ ಸಚಿವರು ತಮ್ಮ ಸ್ಥಾನದಲ್ಲಿ ಮುಂದುವರಿದರೆ ನಿಸ್ಪಕ್ಷಪಾತ ತನಿಖೆ ಅಸಾಧ್ಯ. ಆದ್ದರಿಂದ, ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ನೇತೃತ್ವವವನ್ನು ಮೆಣಸಮಕ್ಕಿ ಶಿವಕುಮಾರ್, ಬಾಳ್ಳುಪೇಟೆ ಗ್ರಾಪಂ ಅಧ್ಯಕ್ಷೆ ಪ್ರೇಮಲತಾ, ಗ್ರಾಪಂ ಸದಸ್ಯ ಸಂಜು, ರಾಕೇಶ್, ವೆಂಕಟೇಶ್, ಅಣ್ಣಪ್ಪ, ರವಿ, ಗುರು ಮುಂತಾದವರಿದ್ದರು.