ಕೆ.ಎನ್‌. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲುವಂತೆ ಪ್ರತಿಭಟನೆ

KannadaprabhaNewsNetwork |  
Published : Oct 22, 2025, 01:03 AM IST
೨೧ಶಿರಾ೧: ಶಿರಾ ನಗರದಲ್ಲಿ ಮಂಗಳವಾರ ಶಿರಾ ತಾಲೂಕು ದಲಿತ, ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಕ್ರಿಯಾ ಸಮಿತಿ ಹಾಗೂ ಕೆ.ಎನ್.ಆರ್ ಮತ್ತು ಆರ್.ಆರ್. ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. | Kannada Prabha

ಸಾರಾಂಶ

ಸಿದ್ದರಾಮಯ್ಯ ಅವರು ಹೈಕಮಾಂಡ್ ಮೇಲೆ ಒತ್ತಡ ತರುವ ಶಕ್ತಿ ಹೊಂದಿದ್ದು ಮುಂದಿನ ಸಚಿವ ಸಂಪುಟದ ಪುನರ್ವಿಂಗಡಣೆಯಲ್ಲಿ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಶಿರಾರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರು ಹಾಗೂ ಅವರ ವಿರುದ್ಧ ಯಾರಾದರೂ ಧ್ವನಿ ಎತ್ತಿದರೆ ಅವರ ಪರ ಮಾತನಾಡುತ್ತಿದ್ದ ಏಕೈಕ ಸಚಿವರೆಂದರೆ ಕೆ.ಎನ್.ರಾಜಣ್ಣ ಇಂತಹ ನಾಯಕರನ್ನು ಸಚಿವ ಸಂಪುಟ ಸಂಪುಟದಿಂದ ಕೈಬಿಟ್ಟಿರುವುದು ಖಂಡನೀಯ ಈ ಕೂಡಲೇ ಅವರನ್ನು ಸಚಿವ ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಬೇಕೆಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎನ್.ಮೂರ್ತಿ ಹೇಳಿದರು. ಅವರು ನಗರದಲ್ಲಿ ಮಂಗಳವಾರ ತಾಲೂಕು ದಲಿತ, ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಕ್ರಿಯಾ ಸಮಿತಿ ಹಾಗೂ ಕೆ.ಎನ್.ಆರ್ ಮತ್ತು ಆರ್.ಆರ್. ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೆ.ಎನ್.ರಾಜಣ್ಣ ಅವರು ಜ್ಯಾತ್ಯಾತೀತ ನಾಯಕರು. ಅದಕ್ಕೆ ಸಾಕ್ಷಿ ಇಂದು ಸೇರಿರುವ ಸಾವಿರಾರು ರಾಜಣ್ಣ ಅಭಿಮಾನಿಗಳು. ಸಿದ್ದರಾಮಯ್ಯ ಅವರು ಹೈಕಮಾಂಡ್ ಮೇಲೆ ಒತ್ತಡ ತರುವ ಶಕ್ತಿ ಹೊಂದಿದ್ದು ಮುಂದಿನ ಸಚಿವ ಸಂಪುಟದ ಪುನರ್ವಿಂಗಡಣೆಯಲ್ಲಿ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎಸ್.ರವಿ ಮಾತನಾಡಿ, ರಾಜ್ಯದ ಅತ್ಯಂತ ಪ್ರಭಾವಿ ಸಚಿವರಾದ ಕೆ.ಎನ್.ರಾಜಣ್ಣ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಅನೇಕ ಬದಲಾವಣೆ ತಂದು ಸಹಕಾರಿ ರತ್ನರಾಗಿರುವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಪುನಃ ಸೇರ್ಪಡೆ ಮಾಡಿಕೊಳ್ಳಬೇಕು ಎಂದರು.ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಜಯ್‌ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬಡವರ ಪರವಾಗಿ ಕೆಲಸ ಮಾಡುತ್ತಿದ್ದ ಏಕೈಕ ವ್ಯಕ್ತಿ ಎಂದರೆ ಅದು ಕೆ.ಎನ್.ರಾಜಣ್ಣ ಅವರು. ಇವರು ನೇರನುಡಿ ವ್ಯಕ್ತಿಯಾಗಿದ್ದು ಯಾರೇ ತಪ್ಪು ಮಾಡಿದ್ದರೂ ನೇರವಾಗಿ ಹೇಳುತ್ತಾರೆ. ಆದರೆ ಕೆಲವರು ಅದನ್ನೇ ಅಸ್ತ್ರ ಮಾಡಿಕೊಂಡು ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿದ್ದಾರೆ. ನಾವು ಯಾವತ್ತೂ ಕೆ.ಎನ್.ರಾಜಣ್ಣ ಪರವಾಗಿದ್ದೇವೆ. ಆದ್ದರಿಂದ ನಾವೆಲ್ಲರೂ ಹೋರಾಟ ಮಾಡುತ್ತೇವೆ. ಸಚಿವ ಸ್ಥಾನ ನೀಡುವವರೆಗೂ ಹೋರಾಟ ಮಾಡುತ್ತೇವೆ ಎಂದರು. ವಿಧಾನಸೌಧಕ್ಕೆ ಮುತ್ತಿಗೆ:

ರಾಜ್ಯದ ಅಹಿಂದ ಮುಖಂಡರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ಮಾಜಿ ಸಹಕಾರ ಸಚಿವರು ಆದ ಕೆ.ಎನ್ ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಪುನಃ ಸೇರ್ಪಡೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಕೆ.ಎನ್.ಆರ್. ಅಭಿಮಾನಿ ಬಳಗದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷರು ಹಾಗೂ ಮಾಜಿ ನಗರಸಭಾ ಸದಸ್ಯರಾದ ರವಿಶಂಕರ್ ಹೇಳಿದರು.ಬೃಹತ್ ಪ್ರತಿಭಟನಾ ಮೆರವಣಿಗೆ:

ಬೆಳಿಗ್ಗೆ 11 ಗಂಟೆ ಸುಮಾರಿಗೆ ನಗರದ ಅಂಬೇಡ್ಕರ್ ಉದ್ಯಾನವನದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರಾರಂಭಿಸಿದ ಬೃಹತ್ ಪ್ರತಿಭಟನಾ ಮೆರವಣಿಗೆ ನಗರದ ಮುಖ್ಯ ರಸ್ತೆ, ಹೊಸ ಬಸ್ ನಿಲ್ದಾಣದ ರಸ್ತೆ, ಹಾಗೂ ಹಳೇ ರಾಷ್ಟ್ರೀಯ ಹೆದ್ದಾರಿಯ ಮೂಲಕ ಅಂಬೇಡ್ಕರ್ ವೃತ್ತದವರೆಗೂ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ಅಭಿಮಾನಿಗಳು ಪಾಲ್ಗೊಂಡಿದ್ದರು. ಪ್ರತಿಭಟನೆಯಲ್ಲಿ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಜಿಲ್ಲಾ ಜಾತ್ಯಾತೀತ ಯವ ವೇದಿಕೆ ಅಧ್ಯಕ್ಷರಾದ ಡ್ಯಾಗೇರಹಳ್ಳಿ ವಿರೂಪಾಕ್ಷ, ಮಾಜಿ ತಾ.ಪಂ. ಅಧ್ಯಕ್ಷರಾದ ಬುಕ್ಕಾಪಟ್ಟಣ ಮಂಜುನಾಥ್, ಸಿಂಗದಳ್ಳಿ ರಾಜಕುಮಾರ್, ಮುಕುಂದಪ್ಪ, ಮುಖಂಡರಾದ ಜೆ.ಎನ್.ರಾಜಸಿಂಹ, ಹುಳಿಗೆರೆ ಡಾ ಗುಡ್ಡಣ್ಣ, ಗಂಗಾಧರ್ ಕುಂಬಾರಹಳ್ಳಿ, ಶಿವು ಜಾನಕಲ್ಲು, ರಾಜಣ್ಣ ವಿನಾಯಕ ಚಿರತಹಳ್ಳಿ, ಎಂಸಿ ರಾಘವೇಂದ್ರ ಗೌಡ, ಮಾಜಿ ತಾ.ಪಂ. ಸದಸ್ಯ ಸಿ.ದಾಸಪ್ಪ, ಶ್ರೀನಿವಾಸ್, ನಾರಾಯಣಗೌಡ, ಲಕ್ಷ್ಮೀನಾರಾಯಣ, ಧರಣಿ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ೨೧ಶಿರಾ೧: ಶಿರಾ ನಗರದಲ್ಲಿ ಮಂಗಳವಾರ ಶಿರಾ ತಾಲೂಕು ದಲಿತ, ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಕ್ರಿಯಾ ಸಮಿತಿ ಹಾಗೂ ಕೆ.ಎನ್.ಆರ್ ಮತ್ತು ಆರ್.ಆರ್. ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

PREV

Recommended Stories

ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಹೊಸೂರಿಗೆ ಮೆಟ್ರೋ ವಿಸ್ತರಣೆ ಅಸಾಧ್ಯ : ರಾಜ್ಯ ಸರ್ಕಾರಕ್ಕೆ ಬಿಎಂಆರ್‌ಸಿಎಲ್‌ ವರದಿ