- ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಲು ಒತ್ತಾಯ
ಕನ್ನಡಪ್ರಭ ವಾರ್ತೆ, ದಾವಣಗೆರೆ ವಕ್ಫ್ ಕಾಯ್ದೆ ವಿರೋಧಿಸಿ ದಂಗೆ ಏಳುವಂತೆ ಪ್ರಚೋದನಾಕಾರಿ ಹೇಳಿಕೆ ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹರಿಯಬಿಟ್ಟಿದ್ದ ಪಾಲಿಕೆ ಮಾಜಿ ಸದಸ್ಯ ಕಬೀರ್ ಖಾನ್ ಮತ್ತು ಇತರರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ, ರಾಜ್ಯದಿಂದಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ಏ.24ರಂದು ವಿಶ್ವ ಹಿಂದು ಪರಿಷತ್ತು ಜಿಲ್ಲಾ ಕಾರ್ಯದರ್ಶಿ ಸಿ.ಎಸ್.ರಾಜು ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 11 ಗಂಟೆಗೆ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವೀರ ಮದಕರಿ ನಾಯಕ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹೊರತು, ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಅರ್ಪಿಸಲಾಗುವುದು ಎಂದರು.ಹಿಂದೂಪರ ಸಂಘಟನೆ ಸದಸ್ಯರು ಸೇರಿದಂತೆ ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಸೇರಲಿದ್ದಾರೆ. ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಅರ್ಪಿಸಲಾಗುವುದು ಎಂದರು.
ಚನ್ನಗಿರಿ ತಾಲೂಕು ಮುಖಂಡ ಕೆ.ಎಚ್. ಮಂಜುನಾಥ ಮಾತನಾಡಿದರು. ಹಿಂದೂ ಹಿತರಕ್ಷಣಾ ಸಮಿತಿಯ ವೆಂಕಟೇಶ, ರಾಜೇಶ, ಶಕುಂತಲ, ಮಲ್ಲಮ್ಮ, ಸುರೇಶ ಇದ್ದರು.
- - --18ಕೆಡಿವಿಜಿ7.ಜೆಪಿಜಿ: