ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಮುಂದುವರೆದ ಧರಣಿ

KannadaprabhaNewsNetwork |  
Published : Aug 20, 2026, 02:45 AM IST
ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಮುಂದುವರೆದ ಧರಣಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದಿಂದ ನಡೆಸಿರುವ ಅಹೋರಾತ್ರಿ ಧರಣಿ ಬುಧವಾರ ಮುಂದುವರೆಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದಿಂದ ನಡೆಸಿರುವ ಅಹೋರಾತ್ರಿ ಧರಣಿ ಬುಧವಾರ ಮುಂದುವರೆಯಿತು.ನವನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಂಗಳವಾರದಿಂದ ಆರಂಭಿಸಿರುವ ಧರಣಿಯಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಸೇರಿದಂತೆ ಅನೇಕ ಕಾರ್ಯಕರ್ತರು ರಾತ್ರಿ ಭಜನೆಯೊಂದಿಗೆ ಧರಣಿ ನಡೆಸಿದರು.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಂಪುಟದಲ್ಲಿ ಸಚಿವ ಸ್ಥಾನ ಪಡೆದಿರುವ ಬಿ.ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೆಬೇಕು ಎಂದು ಒತ್ತಾಯಿಸಿದರು. ಈ ಹಿಂದೆ ಸಚಿವ ಸ್ಥಾನದಲ್ಲಿದ್ದಾಗ ವಾಲ್ಮೀಕಿ ಹಗರಣದಲ್ಲಿ ಆರೋಪ ಬಂದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದರು. ಈಗ ಡಿ.ಕೆ.ಶಿವಕುಮಾರ ಅವರ ಸಂಪುಟದಲ್ಲಿ ಮತ್ತೆ ಮಂತ್ರಿಗಿರಿ ಪಡೆದುಕೊಂಡಿದ್ದಾರೆ. ಇದಕ್ಕೆ ಬಿಜೆಪಿ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿಯೂ ಪ್ರತಿಭಟನೆ ಮುಂದುವರೆದಿದೆ.ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಬಸವರಾಜ ಯಂಕಂಚಿ, ಮಲ್ಲಯ್ಯ ಮೂಗನೂರಮಠ, ಮುತ್ತಣ್ಣ ಬೆಣ್ಣೂರ, ಗಿರೀಶ ಭಾಂಡಗೆ, ಶಿವಾನಂದ ಸುರಪುರ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಖಾಸಗಿ ಬಸ್‌ ಪಲ್ಟಿಯಾಗಿ ಬೈಕ್‌ ಸವಾರ ಸಾವು
ಡಾ.ತುಂಬೆ ಮೊಯ್ದಿನ್‌ಗೆ ‘ಜಾಗತಿಕ ನಾಯಕತ್ವ’ ಪ್ರಶಸ್ತಿ ಪ್ರದಾನ