ಸಂತೋಷ ಲಾಡ್‌ಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Jun 09, 2026, 02:15 AM IST
ಹುಬ್ಬಳ್ಳಿಯ ಅಂಬೇಡ್ಕರ್‌ ಸರ್ಕಲ್‌ನಲ್ಲಿ ಸಂತೋಷ ಲಾಡ್‌ ಅಭಿಮಾನಿ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಸರ್ವ ಸಮಾಜಗಳ ಹಿತ ಚಿಂತಕರಾಗಿ ಸಂತೋಷ ಲಾಡ್‌ ಅವರು ಕೆಲಸ ಮಾಡುತ್ತಾ ಬಂದಿದ್ದಾರೆ. ವಿಶೇಷವಾಗಿ ವಿದ್ಯಾರ್ಥಿಗಳ ಬಗ್ಗೆ ಅಪಾರ ಕಾಳಜಿಯುಳ್ಳ ನಾಯಕರಾಗಿದ್ದಾರೆ. ಈ ಹಿಂದೆ ಕಾರ್ಮಿಕ ಸಚಿವರಾಗಿ ಕಾರ್ಮಿಕರ ಕಲ್ಯಾಣಕ್ಕೆ ಮತ್ತು ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ.

ಹುಬ್ಬಳ್ಳಿ:ಶಾಸಕ ಸಂತೋಷ ಲಾಡ್‌ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಅವರ ಅಭಿಮಾನಿ ಬಳಗದ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಅಂಬೇಡ್ಕರ್‌ ಸರ್ಕಲ್‌ ಬಳಿ ಸಂತೋಷ ಲಾಡ್‌ ಅವರ ಭಾವಚಿತ್ರ ಇರುವ ಫೋಸ್ಟರ್‌ ಪ್ರದರ್ಶನ ಮಾಡಿದರು. ಸರ್ವ ಸಮಾಜಗಳ ಹಿತ ಚಿಂತಕರಾಗಿ ಸಂತೋಷ ಲಾಡ್‌ ಅವರು ಕೆಲಸ ಮಾಡುತ್ತಾ ಬಂದಿದ್ದಾರೆ. ವಿಶೇಷವಾಗಿ ವಿದ್ಯಾರ್ಥಿಗಳ ಬಗ್ಗೆ ಅಪಾರ ಕಾಳಜಿಯುಳ್ಳ ನಾಯಕರಾಗಿದ್ದಾರೆ. ಈ ಹಿಂದೆ ಕಾರ್ಮಿಕ ಸಚಿವರಾಗಿ ಕಾರ್ಮಿಕರ ಕಲ್ಯಾಣಕ್ಕೆ ಮತ್ತು ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ ಅವರ ಮಂತ್ರಿಮಂಡಲದಲ್ಲಿ ಲಾಡ್‌ ಅವರಿಗೆ ಸಚಿವ ಸ್ಥಾನ ನೀಡುವ ಜತೆಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು. ಈ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಆಗ್ರಹಿಸಿದರು.ಈ ವೇಳೆ ಕಾಂಗ್ರೆಸ್‌ ಮುಖಂಡರಾದ ಚಂದ್ರಶೇಖರ ಜುಟ್ಟಲ, ಶಿವಾನಂದ ಮುತ್ತಣ್ಣವರ, ಪ್ರೇಮನಾಥ ಚಿಕ್ಕತುಂಬಳ, ಅರ್ಜುನ ಪಾಟೀಲ, ಸಯ್ಯದ್‌ ಶೇಖ, ನೆಹರು ಪಾಟೀಲ, ವೆಂಕಣ್ಣ ಸಂಶಿ, ಶಂಭಯ್ಯ ನಿರಲಗಿ, ಪರ್ವೇಜ್‌ ಬ್ಯಾಹಟ್ಟಿ, ಯಲ್ಲಪ್ಪಗೌಡ ಪಾಟೀಲ, ಹಮೀದ ಕೊಪ್ಪದ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿಥಿ ತಂದು ಕೊಟ್ಟಿದ್ದ ಮಾವಿನ ಹಣ್ಣು ಸೇವಿಸಿ ಇಬ್ಬರು ಬಾಲಕಿಯರು ಸಾವು!
ಮೆಡಿಕಲ್‌ ಸೀಟು ಶುಲ್ಕ ಈ ವರ್ಷ ಹೆಚ್ಚಿಸದಿರಲು ಸರ್ಕಾರ ನಿರ್ಧಾರ