ನೀರು ಸರಬರಾಜು ನೌಕರರು ತಮ್ಮ ವೇತನವನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದು, ವೇತನ ವಿಳಂಬದಿಂದ ಅವರ ಕುಟುಂಬಗಳ ನಿರ್ವಹಣೆ ಕಷ್ಟಕರವಾಗಿದೆ. ಮಕ್ಕಳ ಶಿಕ್ಷಣ, ದಿನನಿತ್ಯದ ಅಗತ್ಯ ವಸ್ತುಗಳ ಖರ್ಚು ಸೇರಿದಂತೆ ಹಲವು ಸಮಸ್ಯೆಗಳನ್ನು ಅವರು ಎದುರಿಸುತ್ತಿದ್ದಾರೆ. ಆದ್ದರಿಂದ ಬಾಕಿ ಇರುವ ವೇತನವನ್ನು ಕೂಡಲೇ ಪಾವತಿಸಬೇಕು. ವಾಟರ್‌ಮ್ಯಾನ್‌ಗಳ ಪಿಎಫ್ ಹಣವನ್ನು ಹಲವು ವರ್ಷಗಳಿಂದ ಪಾವತಿಸಿಲ್ಲ ಎಂಬ ಆರೋಪಗಳಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟ ಮಾಹಿತಿ ನೀಡಬೇಕು. ನೌಕರರ ಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳನ್ನು ನಿಯಮಾನುಸಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಬೇಲೂರುಪುರಸಭೆಯ ನೀರು ಸರಬರಾಜು ನೌಕರರಿಗೆ ಬಾಕಿ ಇರುವ ವೇತನದ ಜೊತೆಗೆ ಪಿಎಫ್ ಹಣವನ್ನು ತಕ್ಷಣ ಪಾವತಿಸುವಂತೆ ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.ಕೆಆರ್‌ಎಸ್ ಪಕ್ಷದ ತಾಲೂಕು ಅಧ್ಯಕ್ಷ ಆದೇಶ್ ಪುರಸಭೆ ಕಚೇರಿ ಮುಂಭಾಗ ಮಾತನಾಡಿ ಪಟ್ಟಣದ ಜನರಿಗೆ ಪ್ರತಿನಿತ್ಯ ನೀರು ಸರಬರಾಜು ಮಾಡುವ ವಾಟರ್‌ಮ್ಯಾನ್‌ಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದರೂ, ಅವರಿಗೆ ಹಲವು ತಿಂಗಳಿನಿಂದ ವೇತನ ಹಾಗೂ ಹಲವು ವರ್ಷಗಳಿಂದ ಭವಿಷ್ಯನಿಧಿ ಹಣವನ್ನು ಅವರ ಖಾತೆಗಳಿಗೆ ಪಾವತಿಯಾಗಿಲ್ಲ. ನೌಕರರಿಗೆ ವೇತನ ನೀಡಲು ಶಕ್ತಿ ಇಲ್ಲದ ಸದಸ್ಯರು ಪುರಸಭೆಯ ಹಣದಲ್ಲಿ ಗೋವಾ ಪ್ರವಾಸ ಕೈಗೊಳ್ಳುವುದು ಎಷ್ಟರ ಮಟ್ಟಿಗೆ ಸಮಂಜಸ ಎಂದು ಪ್ರಶ್ನೆ ಮಾಡಿದರು.ನೀರು ಸರಬರಾಜು ನೌಕರರು ತಮ್ಮ ವೇತನವನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದು, ವೇತನ ವಿಳಂಬದಿಂದ ಅವರ ಕುಟುಂಬಗಳ ನಿರ್ವಹಣೆ ಕಷ್ಟಕರವಾಗಿದೆ. ಮಕ್ಕಳ ಶಿಕ್ಷಣ, ದಿನನಿತ್ಯದ ಅಗತ್ಯ ವಸ್ತುಗಳ ಖರ್ಚು ಸೇರಿದಂತೆ ಹಲವು ಸಮಸ್ಯೆಗಳನ್ನು ಅವರು ಎದುರಿಸುತ್ತಿದ್ದಾರೆ. ಆದ್ದರಿಂದ ಬಾಕಿ ಇರುವ ವೇತನವನ್ನು ಕೂಡಲೇ ಪಾವತಿಸಬೇಕು. ವಾಟರ್‌ಮ್ಯಾನ್‌ಗಳ ಪಿಎಫ್ ಹಣವನ್ನು ಹಲವು ವರ್ಷಗಳಿಂದ ಪಾವತಿಸಿಲ್ಲ ಎಂಬ ಆರೋಪಗಳಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟ ಮಾಹಿತಿ ನೀಡಬೇಕು. ನೌಕರರ ಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳನ್ನು ನಿಯಮಾನುಸಾರ ಒದಗಿಸಬೇಕು ಎಂದು ಆಗ್ರಹಿಸಿದರು.ನೌಕರರ ಹೋರಾಟಕ್ಕೆ ಬೆಂಬಲ.
ನೀರು ಸರಬರಾಜು ನೌಕರರ ಸಮಸ್ಯೆ ಬಗೆಹರಿಯುವವರೆಗೆ ಅವರ ಹೋರಾಟಕ್ಕೆ ಕೆಆರ್‌ಎಸ್ ಪಕ್ಷ ಬೆಂಬಲ ನೀಡಲಿದೆ. ನೌಕರರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪುರಸಭೆಯ ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆದೇಶ್ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನೀರು ಸರಬರಾಜು ನೌಕರರ ಸಂಘದ ಸದಸ್ಯ ಮಂಜುನಾಥ್ ಮಾತನಾಡಿ ಕಳೆದ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದರೂ ಸರಿಯಾದ ಸಮಯಕ್ಕೆ ವೇತನ ದೊರೆಯುತ್ತಿಲ್ಲ ಎಂದು ಅಳಲು ತೋಡಿಕೊಂಡರು. ಪಿಎಫ್ ಹಣ ಪಾವತಿಸದೆ ನೌಕರರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.ಸುಮಾರು ಎರಡು ತಿಂಗಳ ಹಿಂದೆ ನೌಕರರು ವೇತನ ಮತ್ತು ಪಿಎಫ್ ಪಾವತಿಗೆ ಆಗ್ರಹಿಸಿ ಹೋರಾಟ ನಡೆಸಿದ್ದರು. ಆಗ ನಿಗದಿತ ದಿನಾಂಕದೊಳಗೆ ವೇತನ ಪಾವತಿಸುವುದಾಗಿ ಪುರಸಭೆಯ ಅಧಿಕಾರಿಗಳು ಲಿಖಿತ ಭರವಸೆ ನೀಡಿದ್ದರು. ಆದರೆ ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ ಎಂದು ಮಂಜುನಾಥ್ ಹೇಳಿದರು. ನಾವು ದುಡಿಯುತ್ತಿದ್ದೇವೆ. ನಮಗೆ ಬೇರೆ ಯಾವುದೇ ವಿಶೇಷ ಸೌಲಭ್ಯ ಬೇಡ. ನಮ್ಮ ಶ್ರಮಕ್ಕೆ ತಕ್ಕ ವೇತನವನ್ನು ಸಮಯಕ್ಕೆ ಸರಿಯಾಗಿ ನೀಡಿ, ಪಿಎಫ್ ಮತ್ತು ಇಎಸ್‌ಐ ಸೌಲಭ್ಯಗಳನ್ನು ಒದಗಿಸಬೇಕು. ನಮ್ಮ ಕುಟುಂಬಗಳನ್ನು ನೆಮ್ಮದಿಯಿಂದ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದರು. ಈ ಸಂಭ್ರಮದಲ್ಲಿ ಕೆಆರ್ ಪಕ್ಷದ ಪದಾಧಿಕಾರಿಗಳು ಹಾಗೂ ನೀರು ಸರಬರಾಜು ನೌಕರರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.