ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Jan 04, 2024, 01:45 AM IST
ಗಜೇಂದ್ರಗಡ ಬೀದಿ ಬದಿ ವ್ಯಾಪರಸ್ಥರ ವಿವಿದೋದ್ಧೇಶಗಳ ಸಂಘದಿಂದ ಪ್ರತಿಭಟನೆ ನಡೆಯಿತು. | Kannada Prabha

ಸಾರಾಂಶ

ಬೀದಿ ಬದಿ ವ್ಯಾಪಾರಸ್ಥರಿಂದ ಕರ ವಸೂಲಿ ಮಾಡುವ ಆಡಳಿತ ಹಾಗೂ ಟಿವಿಸಿ ಸದಸ್ಯರು ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡುವಲ್ಲಿ ವಿಫಲ

ಗಜೇಂದ್ರಗಡ: ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರಿಗೆ ತರಕಾರಿ ಮಾರುಕಟ್ಟೆ ನಿರ್ಮಾಣದ ಜತೆಗೆ ಮೂಲ ಸೌಕರ್ಯ ಒದಗಿಸಲು ಪುರಸಭೆ ಹಾಗೂ ತಾಲೂಕಾಡಳಿತ ಮುಂದಾಗಬೇಕು ಎಂದು ಆಗ್ರಹಿಸಿ ಬುಧವಾರ ಸ್ಥಳೀಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬೀದಿ ಬದಿ ವ್ಯಾಪಾರಸ್ಥರ ವಿವಿದೋದ್ದೇಶಗಳ ಸಂಘದಿಂದ ಪ್ರತಿಭಟನೆ ನಡೆಯಿತು.

ಜಿಲ್ಲಾ ಕೇಂದ್ರದಲ್ಲಿ ವಾಣಿಜ್ಯ ನಗರಿ ಎಂಬ ಖ್ಯಾತಿ ಪಡೆದಿರುವ ಗಜೇಂದ್ರಗಡ ಪಟ್ಟಣದಲ್ಲಿ ಸುಸಜ್ಜಿತ ತರಕಾರಿ ಮಾರುಕಟ್ಟೆ ಇಲ್ಲದ್ದ ಪರಿಣಾಮ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ನೂರಾರು ಬೀದಿ ಬದಿ ವ್ಯಾಪರಸ್ಥರು ಇಲ್ಲಿನ ಜೋಡು ರಸ್ತೆ, ಅಂಬೇಡ್ಕರ್‌ ರಸ್ತೆ ಕುಷ್ಟಗಿ ಹಾಗೂ ರೋಣ ಮತ್ತು ಬಸ್ ನಿಲ್ದಾಣ ರಸ್ತೆಯ ಫುಟ್‌ಫಾತ್‌ನಲ್ಲಿ ವ್ಯಾಪಾರ ವಹಿವಾಟು ಮಾಡುವ ದುಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಬದುಕು ನಡೆಸಲು ಅಂಗಡಿಗಳ ಮುಂದೆ ಕುಳಿತು ಹಾಗೂ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ವಹಿವಾಟು ನಡೆಸುವ ಬೀದಿ ವ್ಯಾಪರಸ್ಥರಿಗೆ ವಾಣಿಜ್ಯ ಮಳಿಗೆಗಳಲ್ಲಿ ಅಂಗಡಿ ಬಾಡಿಗೆ ಹಿಡಿದ ಅಂಗಡಿಕಾರರು ಹಾಗೂ ಮಾಲಕರು ತಮ್ಮ ಅಂಗಡಿಗಳ ಮುಂದೆ ಕುಳಿತರೆ ಅಂಗಡಿಗಳಿಗೆ ಗ್ರಾಹಕರು ಬರುವುದು ಹೇಗೆ ಎಂದು ಪ್ರಶ್ನಿಸುತ್ತಾರೆ. ಆದರೆ ಬೀದಿ ಬದಿ ವ್ಯಾಪಾರಸ್ಥರಿಂದ ಕರ ವಸೂಲಿ ಮಾಡುವ ಆಡಳಿತ ಹಾಗೂ ಟಿವಿಸಿ ಸದಸ್ಯರು ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ದೂರಿದ ಪ್ರತಿಭಟನಾಕಾರರು, ಪಟ್ಟಣದಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಕ್ಯೂಆರ್ ಕೋಡ್ ಅಳವಡಿಕೆಯ ಸ್ಮಾರ್ಟ್ ಕಾರ್ಡ್ ವಿತರಣೆ, ಸುಸಜ್ಜಿತ ತರಕಾರಿ ಮಾರುಕಟ್ಟೆ ನಿರ್ಮಾಣ ಹಾಗೂ ಜೋಡು ರಸ್ತೆಯಲ್ಲಿ ಶೌಚಾಲಯ ನಿರ್ಮಾಣ ಸೇರಿ ಬೀದಿ ಬದಿ ವ್ಯಾಪಾರಸ್ಥರಿಗೆ ಮೂಲ ಸೌಕರ್ಯ ಒದಗಿಸಲು ಪುರಸಭೆ ಮುಂದಾಗಬೇಕು. ಇಲ್ಲದಿದ್ದರೆ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನಕಾರರ ಅಹವಾಲು ಆಲಿಸಿದ ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಮನವಿ ಸ್ವೀಕರಿಸಿ ತರಕಾರಿ ಮಾರುಕಟ್ಟೆ ನಿರ್ಮಾಣ ಸೇರಿ ಇತರ ಬೇಡಿಕೆ ಈಡೇರಿಸಲು ಮುಂದಾಗುವ ಮೂಲಕ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಯಲು ಪುರಸಭೆ ಬದ್ಧವಾಗಿದೆ ಎಂದರು.

ಸಂಘಟನೆಯ ತಾಲೂಕಾಧ್ಯಕ್ಷ ಕಳಕಪ್ಪ ಪೋತಾ, ಅಲ್ಲಾಭಕ್ಷಿ ಮುಚ್ಚಾಲಿ, ಮಹ್ಮದಗೌಸ ಅಕ್ಕಿ, ರಾಘವೇಂದ್ರ ಹೂಗಾರ, ಈರಣ್ಣ ಸೊಬರದ, ನಾಗಪ್ಪ ಗಾರಗಿ, ಮುತ್ತಪ್ಪ ನಾಗರಾಳ, ಯಾಸೀನ ಮಾರನಬಸರಿ, ಮಂಜು ಚವ್ಹಾಣ, ಶರಣಪ್ಪ ಹೂಗಾರ, ಉಮೇಶ ಕಲಮಶೆಟ್ಟಿ, ಶಂಕ್ರಪ್ಪ ರಾಠೋಡ ಸೇರಿ ಇತರರು ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ