ಪ್ರಾಧ್ಯಾಪಕರ ಮರು ನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Nov 13, 2024, 12:51 AM IST
(ಪೊಟೋ 12ಬಿಕೆಟಿ11, ಕಾಲೇಜು ವಿದ್ಯಾರ್ಥಿಗಳ ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ಪ್ರತಿಭಟನೆ ನಡಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.) | Kannada Prabha

ಸಾರಾಂಶ

ಕೆರೂರ ಪಟ್ಟಣದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 4 ಪ್ರಾಧ್ಯಾಪಕರನ್ನು ಏಕಾಏಕಿ ವರ್ಗಾವಣೆ ಮಾಡಿದವರನ್ನು ಮರು ನೇಮಕ ಮಾಡುವಂತೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಮಂಗಳವಾರ ಪ್ರತಿಭಟನೆ ನಡಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಕೆರೂರ ಪಟ್ಟಣದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 4 ಪ್ರಾಧ್ಯಾಪಕರನ್ನು ಏಕಾಏಕಿ ವರ್ಗಾವಣೆ ಮಾಡಿದವರನ್ನು ಮರು ನೇಮಕ ಮಾಡುವಂತೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಮಂಗಳವಾರ ಪ್ರತಿಭಟನೆ ನಡಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ವಿದ್ಯಾರ್ಥಿಗಳು ಕೆರೂರ ಪಟ್ಟಣದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಈಗಾಗಲೇ ಸಾಕಷ್ಟು ಕೊರತೆಯಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಭೇದ, ಭಾವ ಮಾಡದೇ ಸಮಾನತೆಯಿಂದ ಶಿಕ್ಷಣ ನೀಡುತ್ತಿರುವ 4 ಜನ ಪ್ರಾಧ್ಯಾಪಕರಾದ ಪ್ರೊ.ಮಲ್ಲಪ್ಪ ಹೊಸೂರ, ಪ್ರೊ.ಜಗದೀಶ, ಪ್ರೊ.ಶಿವಶಂಕರ ಪ್ರಸಾದ, ಪ್ರೊ.ವಿಶ್ವನಾಥ ಕೊಳೂರ ಇವರನ್ನು ಸರ್ಕಾರ ಮತ್ತು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳು ಏಕಾ-ಏಕಿ ವರ್ಗವಣೆ ಮಾಡಿದ್ದು ಎಲ್ಲ ವಿದ್ಯಾರ್ಥಿಗಳಿಗೆ ನುಂಗಲಾರದ ತುತ್ತಾಗಿದೆ. ಏಕೆಂದರೆ ಕೆಲವೇ ತಿಂಗಳುಗಳಲ್ಲಿ ಅಂತಿಮ ವರ್ಷದ ಶೈಕ್ಷಣಿಕ ವರ್ಷವು ಕೊನೆಗೊಳ್ಳಲ್ಲಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆ ಉಂಟಾಗುವ ಕಾರಣದಿಂದ ವರ್ಗಾವಣೆ ಮಾಡಿದ ಈ ಎಲ್ಲ ಶಿಕ್ಷಕರನ್ನು ಮರಳಿ ಕೆರೂರಿನ ಸರ್ಕಾರಿ ಪ್ರಥಮ ಧರ್ಜೆ ಕಾಲೇಜಿಗೆ ಮರು ನೇಮಕ ಮಾಡಿ ಆದೇಶ ಹೊರಡಿಸಬೇಕು. ಕಾಲೇಜಿನಲ್ಲಿ ಅತೀ ಹೆಚ್ಚು ಗ್ರಾಮಿಣ ಭಾಗದ ವಿದ್ಯಾರ್ಥಿಗಳಿದ್ದು ಎಲ್ಲರೂ ತಮ್ಮ ತಮ್ಮ ಗ್ರಾಮದಿಂದ ಬಂದು ವಿದ್ಯಾಬ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ 4 ಜನ ಶಿಕ್ಷಕರು ಎಲ್ಲ ವಿಷಯದಲ್ಲೂ ಪ್ರೋತ್ಸಾಹ ನೀಡುತ್ತಿದ್ದದ್ದು ಅದೇ ಕಾರಣ ಗ್ರಾಮಿಣ ಭಾಗದ ಬಡ ವಿದ್ಯಾರ್ಥಿಗಳಿಗೆ ವಿದ್ಯೆಗೆ ಆದರ್ಶ ದೀಪವಾದ ಈ ಶಿಕ್ಷಕರನ್ನು ವರ್ಗಾವಣೆ ಮಾಡಬಾರದೆಂದು ಕೆರೂರಿನ ಸರ್ಕಾರಿ ಪ್ರಥಮ ಧರ್ಜೆ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ತಮ್ಮಲ್ಲಿ ಕಳಕಳಿಯಿಂದ ವಿನಂತಿಸಿದರು.ವಿದ್ಯಾರ್ಥಿಗಳ ಶಿಕ್ಷಣದ ಹಿತ ದೃಷ್ಟಿಯಿಂದ ವರ್ಗಾವಣೆ ಮಾಡಿರುವ ಈ ಮೇಲೆ ಗುರುತಿಸಿದ ಎಲ್ಲ ಶಿಕ್ಷಕ್ಷರ ವರ್ಗಾವಣೆಯನ್ನು ವಜಾ ಮಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆರೂರಿನಲ್ಲಿಯೇ ಅವರನ್ನು ಮರು ನೇಮಕ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

PREV

Recommended Stories

''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ