ಶಿಕ್ಷಕರ ನೇಮಕದಲ್ಲಿ ವಯೋಮಿತಿ ಸಡಿಲಿಸಲು ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Aug 19, 2026, 02:45 AM IST
15000 ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆಗೆ ಆಗ್ರಹಿಸಿ ಪ್ರತಿಭಟನೆ | Kannada Prabha

ಸಾರಾಂಶ

ಸಾರ್ವಜನಿಕ ಶಿಕ್ಷಣ ಇಲಾಖೆಯು 15,000 ಶಿಕ್ಷಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಸರ್ಕಾರದ ಆದೇಶದಂತೆ 5 ವರ್ಷಗಳ ವಯೋಮಿತಿ ಸಡಿಲಿಕೆಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ಆಲ್ ಇಂಡಿಯಾ ಡೆಮೊಕ್ರೆಟಿಕ್ ಆರ್ಗನೈಸೇಷನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ಸಾರ್ವಜನಿಕ ಶಿಕ್ಷಣ ಇಲಾಖೆಯು 15,000 ಶಿಕ್ಷಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಸರ್ಕಾರದ ಆದೇಶದಂತೆ 5 ವರ್ಷಗಳ ವಯೋಮಿತಿ ಸಡಿಲಿಕೆಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ಆಲ್ ಇಂಡಿಯಾ ಡೆಮೊಕ್ರೆಟಿಕ್ ಆರ್ಗನೈಸೇಷನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.

ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ಬಹಳ ದಿನಗಳ ನಂತರ ಯುವಜನರ ಒತ್ತಾಯಕ್ಕೆ ಈ ಅಧಿಸೂಚನೆ ಹೊರಬಂದಿದೆ. ಇದರ ಜೊತೆಗೆ ರಾಜ್ಯ ಸರ್ಕಾರವು ನಿರಂತರ ಹೋರಾಟಗಳ ಫಲವಾಗಿ 2026 ಜನವರಿ 29ರಂದು ಹೊರಡಿಸಿದ ರಾಜ್ಯಪತ್ರದಲ್ಲಿ ರಾಜ್ಯ ಸರ್ಕಾರ ನಡೆಸುವ ಎಲ್ಲಾ ನೇರ ನೇಮಕಾತಿಗಳಲ್ಲಿ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ಆದರೆ ಈ 15000 ಶಿಕ್ಷಕರ ನೇಮಕಾತಿಯ ಅಧಿಸೂಚನೆಯಲ್ಲಿ ಆ ವಯೋಮಿತಿಯನ್ನು ಹೆಚ್ಚಳ ಮಾಡಿಲ್ಲ. ರಾಜ್ಯ ಸರ್ಕಾರ ತೀರ್ಮಾನಿಸಿರುವಂತೆ, ಎಲ್ಲಾ ನೇಮಕಾತಿಗಳಲ್ಲಿ 5 ವರ್ಷ ವಯೋಮಿತಿ ಸಡಿಲಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಉದ್ಯೋಗಾಕಾಂಕ್ಷಿ ಆಸಿಯಾ ದೌಲತ್‌ಕೋಟಿ, ಶಬ್ಬಿರ ಮುಜಾವರ, ಸಂಗಮೇಶ ಪಟ್ಟಣದ, ಪರಸುರಾಮ ಚಲವಾದಿ, ಕಾಶಿಬಾಯಿ ತಳವಾರ, ಕೆ.ಎಲ್.ಪುಣೆಕರ ಮಾತನಾಡಿದರು. ಪ್ರತಿಭಟನೆಯಲ್ಲಿ ಎಐಡಿವೈಓನ ಜಿಲ್ಲಾಧ್ಯಕ್ಷ ಶ್ರೀಕಾಂತ ಕೊಂಡಗೂಳಿ, ಉದ್ಯೋಗಾಕಾಂಕ್ಷಿಗಳಾದ ಶ್ರೀಶೈಲ ಕವಡಿ, ಯಲ್ಲಪ್ಪ ಪುಜಾರಿ, ಹಣಮಂತ್ರಾಯ ಶಿವಣಗಿ, ಸಬೀರಾ ಹೊನವಾಡ, ನಜ್ಮೀನ ಇನಾಮದಾರ, ಪ್ರಸನ್ನ ಜಹಗೀರದಾರ, ಲಾಲಸಾ ಅತ್ತಾರ, ಹಸೀನಾ ಉಸ್ತಾದ ಸೇರಿದಂತೆ ಹಲವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2 ಲಕ್ಷ ಶಾಲಾ ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಶೂ, ಸಾಕ್ಸ್‌!
ಅರಣ್ಯ ಇಲಾಖೆಯ ವಿರುದ್ಧ ಜನರಿಂದ ಬಾಂಬ್‌ ರಿವೆಂಜ್‌