ಕನ್ನಡಪ್ರಭ ವಾರ್ತೆ ಮೈಸೂರು
ರಾಜ್ಯ ಸರ್ಕಾರ, ಗುತ್ತಿಗೆ ಆಧಾರದ ಮೇಲೆ ನೌಕರರನ್ನು ನೇಮಿಸಿಕೊಳ್ಳುವಾಗಲೂ ಸ್ಥಳೀಯರಿಗೆ ಮೀಸಲಾತಿ ನೀಡಬೇಕು ಎಂಬ ನಿರ್ಧಾರವನ್ನು ನಮ್ಮ ಸಂಘಟನೆ ಸ್ವಾಗತಿಸುತ್ತದೆ. ಆದರೆ ಈ ಮೀಸಲಾತಿ ಖಾಸಗಿ ವಲಯಕ್ಕೂ ವಿಸ್ತರಣೆ ಆಗಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ಹುದ್ದೆಗಳನ್ನು ಶಾಶ್ವತವಾಗಿ ಒಳಗುತ್ತಿಗೆ ಹಾಗೂ ಹೊರ ಗುತ್ತಿಗೆ, ಅತಿಥಿ ಮುಂತಾದ ಹೆಸುರಗಳಲ್ಲಿ ಯಾವುದೇ ಸೇವಾ ಭದ್ರತೆ ಇಲ್ಲದೆ ಬಿಟ್ಟಿ ಚಾಕರಿಯ ನವ ಜೀತಪದ್ಧತಿಯಲ್ಲಿ ಮುಂದುವರೆಸಿದೆ. ಬಹುತೇಕ ದುರ್ಬಲ ಜನ ಸಮುದಾಯಗಳ ನಿರುದ್ಯೋಗಿ ಯುವಜನರನ್ನು ತೀವ್ರ ಶೋಷಣೆಗೀಡು ಮಾಡುವ ಸರ್ಕಾರದ ನಿಲುವನ್ನು ನಮ್ಮ ಸಂಘಟನೆ ಖಂಡಿಸುತ್ತದೆ ಎಂದರು.ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸುವುದರ ಜತೆಗೆ ಉದ್ಯೋಗ ಸೃಷ್ಟಿಗೆ ಗಮನ ನೀಡಬೇಕು ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಿ ಕಾಯಂ ಮಾಡಬೇಕು. ಸ್ಥಳೀಯರಿಗೆ ಉದ್ಯೋಗ ಒದಗಿಸಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು. ಉದ್ಯೋಗ ಒದಗಿಸದಿದ್ದರೆ ಮಾಸಿಕ 12 ಸಾವಿರ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಫೆಡರೇಷನ್ ಪದಾಧಿಕಾರಿಗಳು ಆಗ್ರಹಿಸಿದರು.
ರೈತರಿಗೆ ಮೂರು ದಿನಗಳ ತರಬೇತಿ
ಮೈಸೂರು: ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆ. 1 ರಿಂದ 3 ರವರೆಗೆ ಬಾಳೆ ಬೆಳೆಗಳಲ್ಲಿ ತಳಿ ಆಯ್ಕೆ, ಆಧುನಿಕ ಕೃಷಿ ಪದ್ದತಿಗಳು, ಸೂಕ್ಷ್ಮನೀರಾವರಿ ಮತ್ತು ರಸಾವರಿ ತಾಂತ್ರಿಕತೆಗಳ ಅಳವಡಿಕೆ ಮೂಲಕ ಅಧಿಕ ಲಾಭ ಎಂಬ ವಿಷಯದ ಬಗ್ಗೆ ರೈತ, ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಆಯೋಜಿಸಿದೆ. ತರಬೇತಿಯಲ್ಲಿ ಭಾಗವಹಿಸುವ ರೈತ, ರೈತ ಮಹಿಳೆಯರಿಗೆ ಊಟ ಮತ್ತು ವಸತಿ ವ್ಯವಸ್ಥೆ ಒದಗಿಸಲಾಗುವುದು. ಆಸಕ್ತ ರೈತ, ರೈತ ಮಹಿಳೆಯರು ತಮ್ಮ ಹೆಸರನ್ನು ಈ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಮೊ. 8277933177 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸತಕ್ಕದ್ದು. ಕೇವಲ ಮೈಸೂರು ಜಿಲ್ಲೆಯ 40 ರೈತ, ರೈತ ಮಹಿಳೆಯರಿಗೆ ಮಾತ್ರ ಅವಕಾಶವಿದ್ದು, ಮೊದಲು ನೋಂದಣಿ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.