ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

KannadaprabhaNewsNetwork |  
Published : Jun 18, 2025, 12:05 AM ISTUpdated : Jun 18, 2025, 12:06 AM IST
ವಿಜೆಪಿ೧೭ವಿಜಯಪುರ ಪಟ್ಟಣದಲ್ಲಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ಮಾಡಿದ ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆಗೆ ಅಧ್ಯಕ್ಷ ಅಂಬರೀಶ್ ಗೌಡ ಒತ್ತಾಯಿಸಿದರು. | Kannada Prabha

ಸಾರಾಂಶ

ಸರ್ಕಾರ ನಡೆಸುವವರು ಜನರಿಗೆ ಉಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು, ಅದನ್ನು ಬಿಟ್ಟು, ಅಭಿವೃದ್ಧಿಯ ಕಡೆಗೆ ಗಮನಹರಿಸದೇ, ಹಣ ಮಾಡಲು ಹೊರಟಿದ್ದಾರೆ.

ಕನ್ನಡಪ್ರಭ ವಾರ್ತೆ ವಿಜಯಪುರಆರ್‌ಸಿಬಿ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ಗೆಲವು ಸಾಧಿಸಿ, ಕಪ್ ಗೆದ್ದುಕೊಂಡ ನಂತರ, ನಡೆದ ಸಂಭ್ರಮಾಚರಣೆಯಲ್ಲಿ 11 ಮಂದಿ ಸಾವನ್ನಪ್ಪಿರುವುದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಅಂಬರೀಶ್ ಗೌಡ ಒತ್ತಾಯಿಸಿದರು.ಪಟ್ಟಣದ ಪುರಸಭೆ ಸರ್ಕಲ್‌ನಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಅಂಬರೀಶ್ ಗೌಡ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ, ಬಿಜೆಪಿ ಕಾರ್ಯಕರ್ತರು, ಮುಖಂಡರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ನಡೆಸುವವರು ಜನರಿಗೆ ಉಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು, ಅದನ್ನು ಬಿಟ್ಟು, ಅಭಿವೃದ್ಧಿಯ ಕಡೆಗೆ ಗಮನಹರಿಸದೇ, ಹಣ ಮಾಡಲು ಹೊರಟಿದ್ದಾರೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಅಂಬರೀಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರವಿಕುಮಾರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನರ ಭಾವನೆಗಳು ಮತ್ತು ಜೀವದೊಂದಿಗೆ ಆಟವಾಡಿದ್ದಾರೆ. ಇದರ ಪರಿಣಾಮ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ತಮ್ಮ ಕುಟುಂಬದವರನ್ನು ಕ್ರಿಕೆಟ್ ತಂಡದ ಆಟಗಾರರ ಜೊತೆಯಲ್ಲಿ ಪೋಟೊ ತೆಗೆಯಿಸುವುದಕ್ಕಾಗಿ ವಿಜಯೋತ್ಸವದ ಹೆಸರಿನಲ್ಲಿ ಸಮಾರಂಭ ಮಾಡಿದ್ದಾರೆ. ಮೃತಪಟ್ಟವರಿಗೆ ಪರಿಹಾರ ಕೊಟ್ಟು, ಕೈ ತೊಳೆದುಕೊಂಡಿರುವುದು ಖಂಡನೀಯ ಎಂದರು.ಜಿಲ್ಲಾ ಎಸ್.ಸಿ. ಘಟಕದ ಅಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ ಮಾತನಾಡಿ, ರಾಜ್ಯವನ್ನು ಸುಭದ್ರವಾಗಿಡುವುದಾಗಿ ಹೇಳಿ ಮತ ಗಳಿಸಿಕೊಂಡ ಕಾಂಗ್ರೆಸ್, ಇಂದು ರಾಜ್ಯವನ್ನು ದಿವಾಳಿ ಮಾಡುತ್ತಿದೆ. ಪಕ್ಷದಲ್ಲಿ ಒಗ್ಗಟ್ಟಿಲ್ಲ. ಅವರ ಪಕ್ಷವನ್ನು ಅವರೇ ನಾಶ ಮಾಡಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ. ಗ್ಯಾರಂಟಿಗಳ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಸರ್ಕಾರದಲ್ಲಿ ವ್ಯಾಪಾರ ನಡೆಯುತ್ತಿದೆ ಎಂದರು.ಓಬದೇನಹಳ್ಳಿ ಮುನಿಯಪ್ಪ ಮಾತನಾಡಿ, ರಾಜ್ಯ ಸರ್ಕಾರ, ಗ್ಯಾರಂಟಿಗಳ ಮೂಲಕ ಮಹಿಳೆಯರನ್ನು ಸೆಳೆಯುವಂತಹ ವೃಥಾ ಪ್ರಯತ್ನ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತಿದೆಯೇ ಹೊರತು, ಅನುಕೂಲವಾಗುತ್ತಿಲ್ಲ. ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದ್ದಾರೆ ಎಂದರು.ಬಿಜೆಪಿ ಮುಖಂಡರಾದ ದೇ.ಸೂ.ನಾಗರಾಜ್, ಓಬದೇನಹಳ್ಳಿ ಮುನಿಯಪ್ಪ, ನಾಗವೇಣಿ, ರಾಮುಭಗವಾನ್, ವೆಂಕಟೇಶ್ ಪ್ರಭು, ರಾಘವ, ಮಹಿಳಾ ಮೋರ್ಚಾ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ವೀಣಾ, ಮುನೀಂದ್ರ, ಶಾಮಣ್ಣ, ಪ್ರೇಮಾದೇವರಾಜ್, ಮುಂತಾದವರು ಹಾಜರಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ