ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Oct 13, 2026, 02:30 AM IST
ಫೋಟೋವಿವರ- (12ಎಚ್‌ಪಿಟಿ4) ಹೊಸಪೇಟೆ ನಗರದ ತಹಸೀಲ್ದಾರ್‌ ಕಚೇರಿ ಎದುರು ಸೋಮವಾರ ಹೊಸಪೇಟೆ ಬ್ಲಾಕ್‌ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಿ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹಾಗೂ ಎಸ್.ಐ.ಆರ್ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಒತ್ತಾಯಿಸಿದರು | Kannada Prabha

ಸಾರಾಂಶ

ಚುನಾವಣಾ ಆಯೋಗವು ಸ್ವತಂತ್ರ, ನಿಕ್ಷ್ಯಕ್ಷಪಾತ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕಾದ ಅತ್ಯುನ್ನತ ಸಂವಿಧಾನಿಕ ಸಂಸ್ಥೆಯಾಗಿದೆ.

ಹೊಸಪೇಟೆ: ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹಾಗೂ ಎಸ್.ಐ.ಆರ್ ಪ್ರಕ್ರಿಯೆ ತಕ್ಷಣವೇ ರದ್ದುಗೊಳಿಸುವಂತೆ ಒತ್ತಾಯಿಸಿ ಹೊಸಪೇಟೆ ಬ್ಲಾಕ್‌ ಕಾಂಗ್ರೆಸ್ ಸಮಿತಿಯಿಂದ ಸೋಮವಾರ ತಹಶಿಲ್ದಾರ ಕಛೇರಿ ಎದುರು ಪ್ರತಿಭಟನೆ ನಡೆಸಿ, ತಹಶಿಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಡಿ.ವೆಂಕಟರಮಣ ಮಾತನಾಡಿ, ಚುನಾವಣಾ ಆಯೋಗವು ಸ್ವತಂತ್ರ, ನಿಕ್ಷ್ಯಕ್ಷಪಾತ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕಾದ ಅತ್ಯುನ್ನತ ಸಂವಿಧಾನಿಕ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ ವಿದ್ಯಾಮಾನಗಳನ್ನುಗಮನಿಸಿದರೆ ಚುನಾವಣಾ ಅಯೋಗದ ಮೇಲಿನ ವಿಶ್ವಾಸ ಕುಸಿಯುವಂತೆ ಮಾಡಿದೆ. ಸಾರ್ವಜನಿಕರ ಹಿತಾಸಕ್ತಿ ಕಾಯುವಲ್ಲಿ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿಫಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು ಹಾಗೂ ಎಸ್.ಐ.ಆರ್ ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ರವಿಕುಮಾರ್, ವಕೀಲ ಹೆಚ್.ಮಹೇಶ್ ಮಾತನಾಡಿ, ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿರುವ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. ಹಾಗೂ ಎಸ್.ಅರ್.ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹುಡಾ ಅಧ್ಯಕ್ಷ ಹೆಚ್.ಎನ್.ಮಹಮದ್ ಇಮಾಮ್ ನಿಯಾಜಿ, ಮುಖಂಡರಾದ ಎಲ್.ಸಿದ್ದನಗೌಡ, ಕೆ.ಬಡಾವಲಿ, ಸೋಮಶೇಖರ್ ಬಣ್ಣದಮನೆ, ನಗರಸಭಾ ಮಾಜಿ ಸದಸ್ಯ ಪಲ್ಲೆದ ಸಿದ್ದೇಶ್, ಕಾರಪುಡಿ ಮಹೇಶ್, ಸಣ್ಣ ಮಾರೆಪ್ಪ, ಯೋಗಲಕ್ಷ್ಮಿ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜಗೋಳಿ ಪಿಯು ಕಾಲೇಜಲ್ಲಿ ಆಳ್ವಾಸ್ ಎನ್‌ಎಸ್‌ಎಸ್‌ ಶಿಬಿರ ಆರಂಭ
ಸ್ಟಾರ್ಟಪ್ ಯೋಜನೆಗಳತ್ತ ಗಮನ ಹರಿಸಿ: ಡಾ. ರಂಗಸ್ವಾಮಿ