ಕಬ್ಬಿಗೆ ₹5500 ಬೆಲೆ ನಿಗದಿಪಡಿಸುವಂತೆ ಪ್ರತಿಭಟನೆ

KannadaprabhaNewsNetwork |  
Published : Oct 15, 2026, 02:30 AM IST
ಫೋಟೋವಿವರ- (14ಎಚ್‌ಪಿಟಿ5) ಹೊಸಪೇಟೆ ನಗರದ ಜಿಲ್ಲಾಧಿಕಾರಿಗಳ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸದೇವ ಮೇಟಿ ಬಣ)ದ ವಿಜಯನಗರ ಜಿಲ್ಲಾ ಘಟಕದ ರೈತರು ಬುಧವಾರ ಪ್ರತಿಭಟನೆ ನಡೆಸಿದರು | Kannada Prabha

ಸಾರಾಂಶ

ಸಕ್ಕರೆ ಕಾರ್ಖಾನೆಗಳು ಮತ್ತು ಸರ್ಕಾರ ನಿಗದಿಪಡಿಸಿರುವ ಕಬ್ಬಿನ ಬೆಲೆಯು ರೈತರ ಶ್ರಮ ಮತ್ತು ಬಂಡವಾಳಕ್ಕೆ ಹೋಲಿಸಿದರೆ ತೀರಾ ಕಡಿಮೆಯಾಗಿದೆ.

ಹೊಸಪೇಟೆ: ಕಬ್ಬಿಗೆ ಈಗ ನೀಡುತ್ತಿರುವ ಮೊತ್ತ ಹೆಚ್ಚಿಸಿ ತಕ್ಷಣವೇ ಜಾರಿಗೆ ಬರುವಂತೆ ಪ್ರತಿ ಟನ್‌ಗೆ ₹5500 ಬೆಲೆ ನಿಗದಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸದೇವ ಮೇಟಿ ಬಣ)ದ ವಿಜಯನಗರ ಜಿಲ್ಲಾ ಘಟಕದ ರೈತರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ರೈತ ಸಂಘದ ಜಿಲ್ಲಾಧ್ಯಕ್ಷ ಸಿ.ಎ.ಗಾಳೆಪ್ಪ ಮಾತನಾಡಿ, ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ ತಾಲೂಕಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಬೆಳೆಯುತ್ತಿದ್ದು, ಸಾವಿರಾರು ರೈತ ಕುಟುಂಬ ಕಬ್ಬು ನಂಬಿ ಜೀವನ ನಡೆಸುತ್ತಿದ್ದಾರೆ. ಆದರೆ ಕಬ್ಬು ಬೆಳೆಯಲು ತಗಲುವ ಉತ್ಪದನಾ ವೆಚ್ಚವು ಗಣನೀಯವಾಗಿ ಹೆಚ್ಚಾಗಿದೆ. ಕೂಲಿಕಾರರ ಕೊರತೆ, ರಸಗೊಬ್ಬರ, ಕೀಟನಾಶಕಗಳ ಬೆಲೆ ಏರಿಕೆ, ಸಾರಿಗೆ ವೆಚ್ಚ ಸೇರಿದಂತೆ ಅನೇಕ ಸಂಕಷ್ಟ ರೈತರು ಎದುರಿಸುತ್ತಿದ್ದಾರೆ ಎಂದು ಹೇಳಿದರು.

ಸಕ್ಕರೆ ಕಾರ್ಖಾನೆಗಳು ಮತ್ತು ಸರ್ಕಾರ ನಿಗದಿಪಡಿಸಿರುವ ಕಬ್ಬಿನ ಬೆಲೆಯು ರೈತರ ಶ್ರಮ ಮತ್ತು ಬಂಡವಾಳಕ್ಕೆ ಹೋಲಿಸಿದರೆ ತೀರಾ ಕಡಿಮೆಯಾಗಿದೆ. ರೈತರು ಸಾಲದ ಸುಳಿಗೆ ಸಿಲುಕುವಂತಾಗಿದೆ. ಕಬ್ಬಿನ ದರ ಪರಿಷ್ಕರಿಸಿ ತಕ್ಷಣವೇ ಜಾರಿಗೆ ಬರುವಂತೆ ಪ್ರತಿ ಟನ್‌ಗೆ ಕನಿಷ್ಠ ₹5500 ಬೆಲೆ ನಿಗದಿಪಡಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿ ಹಾಗೂ ರೈತರು, ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಸ್ಕೃತಿ, ಸಂಪ್ರದಾಯ ಮುಂದಿನ ಪೀಳಿಗೆಗೆ ಪರಿಚಯಿಸಿ: ಸುರೇಶ್ ನಂಜಪ್ಪ
ಎನ್‌ಡಿಎ ಪರೀಕ್ಷೆ: ಎಕ್ಸ್‌ಪರ್ಟ್‌ನ ೪೧ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಬಿ ಅರ್ಹತೆ